ಚುನಾವಣೆಗೂ ಮೊದಲೇ ಕಾಂಗ್ರೆಸ್ ಬೆಂಬಲಕ್ಕೆ ನಿಂತ ಬಿಜೆಪಿ ಬಂಡಾಯ ಅಭ್ಯರ್ಥಿ ಗೂಳಿಹಟ್ಟಿ ಶೇಖರ್…!

Date:

  • ಬಿಜೆಪಿ ಅಭ್ಯರ್ಥಿ ವಿರುದ್ದ ಗುಟುರು ಹಾಕಿದ ಗೂಳಿಹಟ್ಟಿ ಶೇಖರ್
  • ಯಾವುದೇ ಕಾರಣಕ್ಕೂ ಬಿಜೆಪಿ ಅಭ್ಯರ್ಥಿ ಬೆಂಬಲಿಸಲ್ಲ ಎಂದ ಮಾಜಿ ಸಚಿವ

ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಹೊಸದುರ್ಗ ಕ್ಷೇತ್ರ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿರುವ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಈಗ ಕಮಲ ಪಕ್ಷಕ್ಕೆ ಮತ್ತೊಂದು ಶಾಕ್ ನೀಡಿದಾರೆ.

ಕ್ಷೇತ್ರದಲ್ಲೇನಾದರೂ ನನಗೆ ಕಠಿಣ ಸ್ಥಿತಿ ಬಂದರೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಲು ಹೇಳುತ್ತೇನೆ ಎಂದು ಹೇಳಿದ್ದಾರೆ. ಈ ಹೇಳಿಕೆ ಈಗ ಬಿಜೆಪಿ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಗುರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಗೂಳಿಹಟ್ಟಿ ಶೇಖರ್, ಇದುವರೆಗೆ ಯಾವುದೇ ಬಿಜೆಪಿ ನಾಯಕರೂ ನನ್ನನ್ನು ಸಂಪರ್ಕಿಸಿಲ್ಲ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?:ಚುನಾವಣೆ 2023 | ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಸಮಿತಿ

ಮುಂದೆಯೂ ಅವರ ಓಲೈಕೆಗೆ ಬಗ್ಗುವುದಿಲ್ಲ, ನಾನು ಸ್ಪರ್ಧಿಸುವುದು ಶತಸಿದ್ದ, ಆದರೆ ಯಾವುದೇ ಕಾರಣಕ್ಕೂ ಬಿಜೆಪಿ ಲಿಂಗಮೂರ್ತಿಯನ್ನು ನಾನು ಬೆಂಬಲಿಸುವುದಿಲ್ಲ ಎಂದರು.

ಅಂತಹ ಕಠಿಣ ಸ್ಥಿತಿ ಬಂದರೇ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಲು ಹೇಳುತ್ತೇನೆ ಎಂದ ಗೂಳಿಹಟ್ಟಿ ಶೇಖರ್, ನನಗೆ ಇವರೆಲ್ಲರೂ ಸಹಿಸದಷ್ಟು ಕಾಟ ಕೊಟ್ಟಿದ್ದಾರೆ ಎಂದು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯಗೊಂಡಿರುವ ಪ್ರಧಾನಿ ವೇದಿಕೆಯಲ್ಲೇ ಕಣ್ಣೀರು ಹಾಕಬಹುದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ...

ರಣಹೇಡಿ ನಾನಲ್ಲ, ಗಿಫ್ಟ್ ಕೂಪನ್ ಕೊಡುವವರು ರಣಹೇಡಿಗಳು: ಡಿಕೆಶಿಗೆ ಕುಮಾರಸ್ವಾಮಿ ತಿರುಗೇಟು

ರಣಹೇಡಿ ನಾನಲ್ಲ, ನೇರವಾಗಿ ಚುನಾವಣೆ ಎದುರಿಸಲಾಗದೆ ರಾತ್ರೋರಾತ್ರಿ ಮತದಾರರಿಗೆ QR ಕೋಡ್...

ಸತ್ಯ ಹರಿಶ್ಚಂದ್ರನ ಮೊಮ್ಮಗ ತರ ಕುಮಾರಸ್ವಾಮಿ ಮಾತಾಡ್ತಾರೆ: ಡಿ ಕೆ ಶಿವಕುಮಾರ್ ವಾಗ್ದಾಳಿ

ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದೆಯೇ?, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯವರು...

ಕೋಮು ದ್ವೇಷ ಭಾಷಣ; ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚು.ಆಯೋಗಕ್ಕೆ 93 ನಿವೃತ ಅಧಿಕಾರಿಗಳ ಪತ್ರ

ರಾಜಸ್ಥಾನದ ಬನ್ಸ್‌ವಾರಾದಲ್ಲಿ ಏಪ್ರಿಲ್ 21ರಂದು ನಡೆದ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ...