ಶನಿವಾರವೇ ಮೊದಲ ಸಂಪುಟ ಸಭೆ; ಜಾರಿಗೆ ಬರುತ್ತವಾ ಐದು ಗ್ಯಾರಂಟಿಗಳು?

Date:

ರಾಜ್ಯದಲ್ಲಿ ಶನಿವಾರ ಹೊಸ ಸರ್ಕಾರ ರಚನೆಯಾಗಲಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹಾಗೂ ಎಂಟು ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದೇ ಸಚಿವ ಸಂಪುಟದ ಮೊದಲ ಸಭೆಯೂ ನಡೆಯಲಿದೆ. ಕಾಂಗ್ರೆಸ್‌ ನೀಡಿದ್ದ ಐದು ಗ್ಯಾರಂಟಿಗಳು ಆ ಸಭೆಯಲ್ಲಿ ಅನುಮೋದನೆಗೊಂಡು, ಜಾರಿಗೆ ಬರುತ್ತವೆಯೇ ಎಂದು ರಾಜ್ಯದ ಜನರು ಎದುರು ನೋಡುತ್ತಿದ್ದಾರೆ.

ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಐದು ಗ್ಯಾರಂಟಿಗಳನ್ನು ಭರವಸೆ ನೀಡಿದ್ದರು. ಅವುಗಳನ್ನು ಮೊದಲ ಸಂಪುಟ ಸಭೆಯಲ್ಲಿಯೇ ಅನುಮೋದಿಸಿ, ಜಾರಿಗೆ ತರುವುದಾಗಿಯೂ ಹೇಳಿದ್ದರು. ಫಲಿತಾಂಶ ಬಂದ ನಂತರವೂ ಡಿ.ಕೆ ಶಿವಕುಮಾರ್‌ ಆಗಾಗ್ಗೆ ಪುನರುಚ್ಛರಿಸಿದ್ದಾರೆ. ಹೀಗಾಗಿ, ಶನಿವಾರದ ಸಂಪುಟ ಸಭೆಯಲ್ಲಿ ಗ್ಯಾರಂಟಿಗಳಿಗೆ ಅನುಮೋದನೆ ಸಿಗುವ ಸಾಧ್ಯತೆ ಇದೆ.

ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಗೃಹಿಣಿಯರಿಗೆ ಪ್ರತಿ ತಿಂಗಳು 2,000 ರೂ., ಗೃಹಜ್ಯೋತಿ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಗೃಹ ಬಳಕೆಯ 200 ಯುನಿಟ್​ ಉಚಿತ ವಿದ್ಯುತ್, ಯುವನಿಧಿ ಯೋಜನೆಯಡಿ ಪದವಿಧರರಿಗೆ ರೂ.3,000 ಹಾಗೂ ಡಿಪ್ಲೋಮಾ ಪದವೀಧರರಿಗೆ 1,500 ರೂ. ಸಹಾಯಧನ, ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಹಾಗೂ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್​ದಾರರಿಗೆ 10 ಕೆ.ಜಿ ಅಕ್ಕಿ ವಿತರಣೆ – ಈ ಐದು ಗ್ಯಾರಂಟಿಗಳನ್ನು ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್‌ ಘೋಷಿಸಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?: ಗ್ಯಾರಂಟಿಗಳನ್ನು ಟೀಕಿಸುತ್ತಿರುವ ಈ ಸಂದರ್ಭದಲ್ಲಿ …..!

ಆದರೆ, ಈ ಗ್ಯಾರಂಟಿಗಳ ಫಲಾನುಭವ ಪಡೆಯಲು ಷರತ್ತುಗಳು ಇರಲಿವೆಯೇ ಎಂಬುದಕ್ಕೆ ಸಿದ್ದರಾಮಯ್ಯ ಆಗಲೀ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗಲೀ ಇದೂವರೆಗೂ ಪ್ರತಿಕ್ರಿಯಿಸಿಲ್ಲ. ಆದರೆ, ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿಯ ನೇತೃತ್ವವಹಿಸಿದ್ದ ಡಾ. ಜಿ ಪರವೇಶ್ವರ ಅವರು, ಕೆಲವು ಷರತ್ತುಗಳು ಇರಲಿವೆ ಎಂಬ ಮಾತಗಳನ್ನಾಡಿದ್ದಾರೆ. ಹೀಗಾಗಿ, ಯಾವ ಷರತ್ತುಗಳನ್ನು ಸರ್ಕಾರ ಹೇರಬಹುದು, ಯೋಜನೆಗಳ ಪ್ರಯೋಜನ ಪಡೆಯಲು ಜನರು ಏನು ಮಾಡಬೇಕು ಎಂಬ ಪ್ರಶ್ನೆ ಮುನ್ನೆಲೆಯಲ್ಲಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಭೂ ದರೋಡೆಕೋರರಿಗೆ ಪ್ರವೇಶವಿಲ್ಲ; ಹೆಮ್ಮಿಗೆಪುರ ನಿವಾಸಿಗಳ ಸಂಕಲ್ಪ

ಭೂ ದರೋಡೆಕೋರರಿಗೆ ನಮ್ಮ ಸಮುಚ್ಚಯದೊಳಗೆ ಪ್ರವೇಶ ನೀಡುವುದಿಲ್ಲ ಎಂದು ಬೆಂಗಳೂರಿನ ಹೆಮ್ಮಿಗೆಪುರ...

‘ಈಸ್ಟರ್ ಭಾನುವಾರ’ ಕೆಲಸದ ದಿನವೆಂದು ಘೋಷಣೆ; ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

ಕ್ರೈಸ್ತರ ಪ್ರಮುಖ ಹಬ್ಬವಾದ 'ಈಸ್ಟರ್ ಭಾನುವಾರ'ವನ್ನು (ಮಾರ್ಚ್‌ 31) ಕೆಲಸದ ದಿನವಾಗಿ...

ತಮಿಳುನಾಡು | 238 ಬಾರಿ ಚುನಾವಣೆಯಲ್ಲಿ ಸೋತರೂ ದಣಿಯದ ಪದ್ಮರಾಜನ್;‌ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ

ಚುನಾವಣೆಯಲ್ಲಿ ಸ್ಪರ್ಧಿಸಿ ಸೋತರೆ ಯಾರಿಗಾದರೂ ನಿರಾಶೆ ಉಂಟಾಗಬಹುದು. ಆದರೆ ಟೈರ್ ರಿಪೇರಿ...

ಕಲಬುರಗಿ | ದಾಖಲೆ ಇಲ್ಲದ 114.72 ಗ್ರಾಂ ಚಿನ್ನ ಹಾಗೂ 3.2 ಕೆ.ಜಿ. ಬೆಳ್ಳಿ ವಶ

ಕಲಬುರಗಿ-ಯಾದಗಿರಿ ಜಿಲ್ಲೆಯ ಗಡಿಯ ನಾಲವಾರ ಚೆಕ್ ಪೋಸ್ಟ್ ಬಳಿ ಗುರುವಾರ (ಮಾ.28)...