ವೋಟರ್‌ ಐಡಿ ಮರೆತು ಬಂದಿರಾ? ಚಿಂತೆ ಬೇಡ; ಇವನ್ನು ತೋರಿಸಿ ವೋಟ್ ಮಾಡಿ

Date:

  • ವೋಟರ್ ಐಡಿ ಮರೆತರೂ ಪರ್ಯಾಯ ದಾಖಲೆ ತೋರಿಸಿ ಮತ ಚಲಾಯಿಸಿ
  • ಸಾರ್ವತ್ರಿಕ ಚುನಾವಣೆಯ ಮತದಾನಕ್ಕೆ ಸಕಲ ಸಿದ್ದತೆ ಮಾಡಿಕೊಂಡ ಆಯೋಗ

ರಾಜ್ಯ ವಿಧಾನಸಭಾ ಚುನಾವಣೆಗಾಗಿನ ಮತದಾನ ಪ್ರಕ್ರಿಯೆ ಮೇ 10 ರಂದು ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ದತೆಯನ್ನು ಚುನಾವಣಾ ಆಯೋಗ ಮಾಡಿಕೊಳ್ಳುತ್ತಿದೆ.

ಚುನಾವಣಾ ಆಯೋಗ ನೀಡಿರುವ ಮಾಹಿತಿಯಂತೆ ರಾಜ್ಯದಲ್ಲಿ ಈ ಬಾರಿ ಒಟ್ಟು 5,21,73,579 ಮತದಾರರು ಮತ ಹಾಕಲು ಅರ್ಹತೆ ಪಡೆದುಕೊಂಡಿದ್ದಾರೆ.

ಇವರಲ್ಲಿ 2.62 ಕೋಟಿ ಪುರುಷರು, 2.59 ಕೋಟಿ ಮಹಿಳೆಯರು ಮತ್ತು 4,699 ಲಿಂಗತ್ವ ಅಲ್ಪಸಂಖ್ಯಾತ ಮತದಾರರು ಇದ್ದಾರೆ. ಹಾಗೆಯೇ 16,976 ಶತಾಯುಷಿಗಳು, 80 ವರ್ಷ ಮೇಲ್ಪಟ್ಟ 12.15 ಲಕ್ಷ ಮತದಾರರು ಮತ್ತು 5.55 ಲಕ್ಷ ಮತದಾರರು ವಿಶೇಷ ಚೇತನರಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಐದು ವರ್ಷಕ್ಕೊಮ್ಮೆ ಬರುವ ಮತದಾನದ ಈ ಹಬ್ಬದಲ್ಲಿ ಪಾಲ್ಗೊಂಡು ನಾಗರಿಕತ್ವ ಹಕ್ಕು ಚಲಾಯಿಸಲು ಕಾದು ನಿಂತಿದ್ದಾರೆ. ಅದರಲ್ಲೂ ಮೊದಲ ಬಾರಿಗೆ ವೋಟ್ ಮಾಡಲು ಸಿದ್ಧರಾಗಿರುವ 9.17 ಲಕ್ಷ ಯುವ ಸಮುದಾಯ ಮತಗಟ್ಟೆಗೆ ತೆರಳಲು ಉತ್ಸಾಹದಿಂದ ಕಾದು ನಿಂತಿದೆ.

ಹೀಗೆ ವೋಟ್ ಮಾಡಲು ಕಾದಿರುವ ಯುವ ಸಮುದಾಯ ಅತೀ ಉತ್ಸಾಹದಲ್ಲಿ ಚುನಾವಣಾ ಗುರುತಿನ ಚೀಟಿ ಮರೆತು ಬರುವುದು ಸಹಜ. ಒಂದು ವೇಳೆ ಹೀಗಾದಾಗ ಗಾಬರಿ ಪಡುವ ಅಗತ್ಯವಿಲ್ಲ. ಅದರ ಬದಲಿಗೆ ಬೇರೆ ಗುರುತಿನ ಚೀಟಿ ತೋರಿಸಿ ಮತ ಚಲಾಯಿಸಬಹುದು. ಇದಕ್ಕೂ ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ.

ಈ ಸುದ್ದಿ ಓದಿದ್ದೀರಾ?:ಮತದಾರ ಪಟ್ಟಿಯಲ್ಲಿ ನಿಮ್ಮ ಹೆಸರು?: ನೀವಿದ್ದಲ್ಲಿಯೇ ಪರಿಶೀಲಿಸಲು ಇಲ್ಲಿ ನೋಡಿ

ಆಯೋಗ ಸೂಚಿಸಿರುವ ಈ ಕೆಳಂಡ ದಾಖಲೆಗಳನ್ನು(ಐಡಿ ಕಾರ್ಡ್) ಮತದಾರ ಗುರುತಿನ ಚೀಟಿಗೆ ಪರ್ಯಾಯವಾಗಿ ಬಳಸಬಹುದಾಗಿದೆ.

• ಆಧಾರ್ ಕಾರ್ಡ್
• ಎಂಎನ್ಆರ್‌ಇಜಿಎ ಜಾಬ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್
• ಅಂಚೆ ಕಚೇರಿ ನೀಡಿದ ಭಾವಚಿತ್ರವಿರುವ ಪಾಸ್ ಬುಕ್
• ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್
• ಡ್ರೈವಿಂಗ್ ಲೈಸನ್ಸ್, ಪಾನ್ ಕಾರ್ಡ್
• ಎನ್ಪಿಆರ್ ಅಡಿಯಲ್ಲಿ ನೀಡಿದ ಸ್ಮಾರ್ಟ್ ಕಾರ್ಡ್
• ಭಾರತೀಯ ಪಾಸ್‌ ಪೋರ್ಟ್‌
• ಪಾನ್‌ ಕಾರ್ಡ್‌
• ಭಾವಚಿತ್ರದೊಂದಿಗೆ ಪಿಂಚಣಿ ದಾಖಲೆ
• ರಾಜ್ಯ, ಕೇಂದ್ರ ಸರ್ಕಾರದ ಸಾರ್ವಜನಿಕ ಉದ್ದಿಮೆಗಳು ನೌಕರರಿಗೆ ನೀಡಿರುವ ಸೇವಾ ಗುರುತಿನ ಚೀಟಿ
• ಸಂಸದರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರುಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿಗಳು
• ಅಂಗವಿಕಲರ ಗುರುತಿನ ಚೀಟಿ (ಯುಡಿಐಡಿ ಕಾರ್ಡ್) ಪತ್ರದ ಮೂಲ ಪ್ರತಿಗಳು

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಂಗನಾ ರಣಾವತ್ ಬಗ್ಗೆ ವಿವಾದಾತ್ಮಕ ಹೇಳಿಕೆ; ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ

ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಖ್ಯಾತ ನಟಿ ಕಂಗನಾ ರಣಾವತ್...

ಬೀದರ್‌ | ಕೇಂದ್ರ ಸಚಿವ ಭಗವಂತ ಖೂಬಾಗೆ ಇದು ಕೊನೆ ಚುನಾವಣೆ: ಸಚಿವ ಈಶ್ವರ ಖಂಡ್ರೆ

ಕೇಂದ್ರ ಸಚಿವ ಭಗವಂತ ಖೂಬಾ ಅವರ ದುರಂಕಾರ, ಅಧಿಕಾರದ ದರ್ಪ ಹಾಗೂ...

ಲೋಕಸಭೆ ಕದನ | ಸಂಘರ್ಷ ಪೀಡಿತ ಮಣಿಪುರದಲ್ಲಿ ಬಿಜೆಪಿ ಸ್ಥಿತಿ ಏನಾಗಿದೆ?

ಮಣಿಪುರದಲ್ಲಿ ಬಿಜೆಪಿ ಕಳೆದೆರಡು ಚುನಾವಣೆಯಲ್ಲೂ ಮತಪ್ರಮಾಣದಲ್ಲಿ ಏರಿಕೆ ಕಂಡಿದ್ದರೂ ಈ ಬಾರಿ...

‘ಈಸ್ಟರ್ ಭಾನುವಾರ’ ಕೆಲಸದ ದಿನವೆಂದು ಘೋಷಣೆ; ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

ಕ್ರೈಸ್ತರ ಪ್ರಮುಖ ಹಬ್ಬವಾದ 'ಈಸ್ಟರ್ ಭಾನುವಾರ'ವನ್ನು (ಮಾರ್ಚ್‌ 31) ಕೆಲಸದ ದಿನವಾಗಿ...