ಗದಗ | ಬಿಜೆಪಿ ಸಮಾವೇಶದಲ್ಲಿ ನಷ್ಟ ಅನುಭವಿಸಿದ್ದ ವ್ಯಾಪಾರಿಗೆ ₹35,000 ಪರಿಹಾರ

Date:

ಗದಗ ನಗರದಲ್ಲಿ ಶುಕ್ರವಾರ ನಡೆದ ಬಿಜೆಪಿ ಪ್ರಚಾರ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಜನರು ಯುವ ವ್ಯಾಪಾರಿಯ ಬಳಿ ನುಗ್ಗಿದ ಬಿಜೆಪಿ ಕಾರ್ಯಕರ್ತರು ನೀರು ಮತ್ತು ತಂಪು ಪಾನೀಯಾದ ಕಸಿದುಕೊಂಡಿದ್ದರು. ಪರಿಣಾಮ ವ್ಯಾಪಾರಿ ಅಪಾರ ನಷ್ಟ ಅನುಭವಿಸಿ, ಬಿಕ್ಕಿ-ಬಿಕ್ಕಿ ಅತ್ತಿದ್ದರು. ನಷ್ಟ ಅನುಭವಿಸಿದ ವ್ಯಾಪಾರಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ 35 ಸಾವಿರ ರೂಪಾಯಿ ಪರಿಹಾರವಾಗಿ ನೀಡಿದ್ದಾರೆ.

ಗದಗದಲ್ಲಿ ಬಿಜೆಪಿ ಪರವಾಗಿ ಪ್ರಚಾರ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದರು. ಬಿಜೆಪಿ ಸಮಾವೇಶಕ್ಕೆ ಸಾವಿರಾರು ಜನರನ್ನು ಅಕ್ಕಪಕ್ಕದ ಊರುಗಳಿಂದ ಕರೆಸಲಾಗಿತ್ತು. ಬೇಸಿಗೆಯ ತಾಪಮಾನ ಹೆಚ್ಚಿದ್ದರೂ ಬಂದವರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿರಲಿಲ್ಲ. ನೆರೆದಿದ್ದವರೂ ಬಾಯಾರಿಕೆಯಿಂದ ಹನಿ ನೀರಿಗಾಗಿ ಹಾತೊರೆಯುತ್ತಿದ್ದರು.

ಈ ವೇಳೆ, ಸಮೀರ್ ಎಂಬ ವ್ಯಾಪಾರಿ ತಂಪು ಪಾನೀಯಗಳನ್ನು ಮಾರಾಟ ಮಾಡಲೆಂದು ಸಮಾವೇಶದ ಸ್ಥಳಕ್ಕೆ ತನ್ನ ವಾಹನದಲ್ಲಿ ಆಗಮಿಸಿದ್ದರು. ಇದನ್ನು ಗಮನಿಸಿದ ಕೆಲ ಬಿಜೆಪಿ ಕಾರ್ಯಕರ್ತರು ಆತನ ಬಳಿಯಿದ್ದ ತಂಪು ಪಾನೀಯಗಳನ್ನು ಪಡೆದುಕೊಳ್ಳಲು ಮುಂದೆ ಧಾವಿಸಿದರು. ಇದನ್ನು ಕಂಡ ಜನ ಬಿಜೆಪಿ ಕಾರ್ಯಕರ್ತರು ತಮಗಾಗಿ ತಂಪು ಪಾನೀಯ ತಂದಿದ್ದಾರೆ ಎಂದು ಭಾವಿಸಿ, ವಾಹನದ ಮೇಲೇರಿ ಗಾಡಿಯಲ್ಲಿದ್ದ ಎಲ್ಲ ತಂಪು ಪಾನೀಯಗಳನ್ನು ಕೈಗೆ ಸಿಕ್ಕಷ್ಟು ಬಾಚಿಕೊಂಡಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?: 2002ರ ಗುಜರಾತ್ ಗಲಭೆ ಆರೋಪಿಗಳೇಕೆ ಸರದಿಯಂತೆ ನ್ಯಾಯಾಲಯದಿಂದ ಬಿಡುಗಡೆಯಾಗುತ್ತಿದ್ದಾರೆ?

ನಷ್ಟ ಅನುಭವಿಸಿದ ಸಮೀರ್ ಕಣ್ಣೀರು ಹಾಕಿದ್ದರು. ಆ ದೃಶ್ಯವುಳ್ಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ನೆಟ್ಟಿಗರು ಬಿಜೆಪಿವ ವಿರುದ್ಧ ಕಿಡಿಕಾರಿದ್ದರು. ಆತನಿಗೆ ಕಾಂಗ್ರೆಸ್‌ 20 ಸಾವಿರ ರೂ. ನೀಡಿತ್ತು.

ಈ ಬಳಿಕ, ಸಂಸದ ಪ್ರತಾಪ್ ಸಿಂಹ ಭಾನುವಾರ ಸಮೀರ್‌ಗೆ ಕರೆ ಮಾಡಿ, 35 ಸಾವಿರ ರೂ.ಗಳನ್ನು ವರ್ಗಾವಣೆ ಮಾಡಿದ್ದಾರೆ. ಸಮೀರ್‌ಗೆ ಹಣ ನೀಡಿರುವುದಾಗಿ ಪ್ರತಾಪ್‌ ಸಿಂಹ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಗುಳೆ ತಪ್ಪಿಸಲು ಏಪ್ರಿಲ್ 1ರಿಂದ ಸಮುದಾಯ ಕಾಮಗಾರಿ ಪ್ರಾರಂಭ: ವಿ.ಎಸ್ ಸಜ್ಜನ

ಗ್ರಾಮೀಣ ಭಾಗದಲ್ಲಿ ಬೇಸಿಗೆ ಕಾಲದಲ್ಲಿ ಕೆಲಸವಿಲ್ಲದೇ ಗುಳೆ ಹೋಗುತ್ತಾರೆ. ಅದನ್ನು ತಪ್ಪಿಸಲು...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ; ಮತ್ತೆ ಟೋಲ್‌ ದರ ಹೆಚ್ಚಳ

ಬೆಂಗಳೂರು-ಮೈಸೂರು ನಡುವಿನ ಎಕ್ಸ್‌ಪ್ರೆಸ್‌-ವೇ ಕಾಮಗಾರಿ ಆರಂಭವಾದಾಗಿನಿಂದಲೂ ನಾನಾ ರೀತಿಯಲ್ಲಿ ಚರ್ಚೆಯ ವಿಷಯವಾಗಿಯೇ...

ಬೆಂಗಳೂರು | ರೌಡಿಶೀಟರ್, ಸುಪಾರಿ ಕಿಲ್ಲರ್ ದಿನೇಶ್ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ರೌಡಿಶೀಟರ್‌ ಹಾಗೂ ಸುಪಾರಿ ಕಿಲ್ಲರ್‌ನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ...

ರಾಯಚೂರು | 2 ದಿನದಲ್ಲಿ ತೀರ್ಮಾನ ಕೈಗೊಳ್ಳದಿದ್ದರೆ ಜನರ ತೀರ್ಮಾನಕ್ಕೆ ಬದ್ಧ; ಬಿಜೆಪಿ ಟಿಕೆಟ್ ಆಕಾಂಕ್ಷಿ ಬಿ ವಿ ನಾಯಕ

ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡುವುದಾಗಿ ಹೇಳಿ ವಂಚಿಸಿದ್ದು, ಟಿಕೆಟ್ ವಿಚಾರವಾಗಿ...