2014ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿದ್ದ ಗೀತಾ
ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಲಿರುವ ದೊಡ್ಮನೆ ಸೊಸೆ
ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾದ ಬೆನ್ನಲ್ಲೇ ಸ್ಯಾಂಡಲ್ವುಡ್ನ ಹಿರಿಯ ನಟ ಶಿವರಾಜ್ಕುಮಾರ್ ಅವರ ಪತ್ನಿ, ನಿರ್ಮಾಪಕಿ ಗೀತಾ ಶುಕ್ರವಾರ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ ಎಂಬ ಮಾತುಗಳು ರಾಜ್ ಕುಟುಂಬದ ಆಪ್ತ ವಲಯದಲ್ಲಿ ಕೇಳಿ ಬರುತ್ತಿವೆ.
ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಶುಕ್ರವಾರ ಗೀತಾ ಶಿವರಾಜ್ಕುಮಾರ್ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಶಿವರಾಜ್ ಕುಮಾರ್ ಅವರ ಆಪ್ತ, ಚಿತ್ರ ನಿರ್ಮಾಪಕ ಕೆ.ಪಿ ಶ್ರೀಕಾಂತ್ ಕೂಡ ಪ್ರತಿಕ್ರಿಯಿಸಿದ್ದು, ದೊಡ್ಮನೆ ಸೊಸೆ ಕೈ ಪಾಳಯ ಸೇರುತ್ತಿರುವುದನ್ನು ಖಚಿತಪಡಿಸಿದ್ದಾರೆ.
ಗೀತಾ ಶಿವರಾಜ್ಕುಮಾರ್, ಮಾಜಿ ಮುಖ್ಯಮಂತ್ರಿ, ದಿವಂಗತ ಎಸ್. ಬಂಗಾರಪ್ಪನವರ ಪುತ್ರಿ. ಈ ಹಿಂದೆ 2014ರ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿ.ಎಸ್ ಯಡಿಯೂರಪ್ಪನವರಿಗೆ ಎದುರಾಳಿಯಾಗಿ ಸ್ಪರ್ಧಿಸಿದ್ದ ಗೀತಾ ಶಿವರಾಜ್ಕುಮಾರ್ ಭಾರೀ ಮತಗಳ ಅಂತರದಿಂದ ಸೋಲನುಭವಿಸಿದ್ದರು. ಅದಾದ ಬಳಿಕ ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದ ಅವರು 2021ರಲ್ಲಿ ತಮ್ಮ ಸಹೋದರ ಮಧು ಬಂಗಾರಪ್ಪನವರ ಜೊತೆ ಕಾಂಗ್ರೆಸ್ ಸೇರುತ್ತಾರೆ ಎನ್ನಲಾಗಿತ್ತು. ಆದರೆ, ಆಗ ಜೆಡಿಎಸ್ ತೊರೆದಿದ್ದ ಮಧು ಬಂಗಾರಪ್ಪವೊಬ್ಬರೇ ಕಾಂಗ್ರೆಸ್ ಸೇರಿದ್ದರು.
ಈ ಸುದ್ದಿ ಓದಿದ್ದೀರಾ? ಕರ್ನಾಟಕ ಉತ್ತರ ಪ್ರದೇಶದಂತಾಗಬೇಕು ಎಂದ ಸುಮಲತಾ : ತರಾಟೆ ತೆಗೆದುಕೊಂಡ ಕನ್ನಡಿಗರು
ಈ ಬಾರಿಯ ಚುನಾವಣೆಯಲ್ಲಿ ಮಧು ಬಂಗಾರಪ್ಪನವರ ಪರ ಸೊರಬ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತಿರುವ ಗೀತಾ ಶಿವರಾಜ್ ಕುಮಾರ್, ಇದೀಗ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ.