ನಾಳೆ ಕಾಂಗ್ರೆಸ್‌ ಪಕ್ಷ ಸೇರಲಿರುವ ಗೀತಾ ಶಿವರಾಜ್‌ಕುಮಾರ್‌

Date:

2014ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಗೀತಾ

- Advertisement -

ಡಿ.ಕೆ ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಲಿರುವ ದೊಡ್ಮನೆ ಸೊಸೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾದ ಬೆನ್ನಲ್ಲೇ ಸ್ಯಾಂಡಲ್‌ವುಡ್‌ನ ಹಿರಿಯ ನಟ ಶಿವರಾಜ್‌ಕುಮಾರ್‌ ಅವರ ಪತ್ನಿ, ನಿರ್ಮಾಪಕಿ ಗೀತಾ ಶುಕ್ರವಾರ ಕಾಂಗ್ರೆಸ್‌ ಪಕ್ಷವನ್ನು ಸೇರಲಿದ್ದಾರೆ ಎಂಬ ಮಾತುಗಳು ರಾಜ್‌ ಕುಟುಂಬದ ಆಪ್ತ ವಲಯದಲ್ಲಿ ಕೇಳಿ ಬರುತ್ತಿವೆ.

ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಸಮ್ಮುಖದಲ್ಲಿ ಶುಕ್ರವಾರ ಗೀತಾ ಶಿವರಾಜ್‌ಕುಮಾರ್‌ ಕಾಂಗ್ರೆಸ್‌ ಪಕ್ಷ ಸೇರಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಶಿವರಾಜ್‌ ಕುಮಾರ್‌ ಅವರ ಆಪ್ತ, ಚಿತ್ರ ನಿರ್ಮಾಪಕ ಕೆ.ಪಿ ಶ್ರೀಕಾಂತ್‌ ಕೂಡ ಪ್ರತಿಕ್ರಿಯಿಸಿದ್ದು, ದೊಡ್ಮನೆ ಸೊಸೆ ಕೈ ಪಾಳಯ ಸೇರುತ್ತಿರುವುದನ್ನು ಖಚಿತಪಡಿಸಿದ್ದಾರೆ.

ಗೀತಾ ಶಿವರಾಜ್‌ಕುಮಾರ್‌, ಮಾಜಿ ಮುಖ್ಯಮಂತ್ರಿ, ದಿವಂಗತ ಎಸ್‌. ಬಂಗಾರಪ್ಪನವರ ಪುತ್ರಿ. ಈ ಹಿಂದೆ 2014ರ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿ.ಎಸ್‌ ಯಡಿಯೂರಪ್ಪನವರಿಗೆ ಎದುರಾಳಿಯಾಗಿ ಸ್ಪರ್ಧಿಸಿದ್ದ ಗೀತಾ ಶಿವರಾಜ್‌ಕುಮಾರ್‌ ಭಾರೀ ಮತಗಳ ಅಂತರದಿಂದ ಸೋಲನುಭವಿಸಿದ್ದರು. ಅದಾದ ಬಳಿಕ ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದ ಅವರು 2021ರಲ್ಲಿ ತಮ್ಮ ಸಹೋದರ ಮಧು ಬಂಗಾರಪ್ಪನವರ ಜೊತೆ ಕಾಂಗ್ರೆಸ್‌ ಸೇರುತ್ತಾರೆ ಎನ್ನಲಾಗಿತ್ತು. ಆದರೆ, ಆಗ ಜೆಡಿಎಸ್‌ ತೊರೆದಿದ್ದ ಮಧು ಬಂಗಾರಪ್ಪವೊಬ್ಬರೇ ಕಾಂಗ್ರೆಸ್‌ ಸೇರಿದ್ದರು.

ಈ ಸುದ್ದಿ ಓದಿದ್ದೀರಾ? ಕರ್ನಾಟಕ ಉತ್ತರ ಪ್ರದೇಶದಂತಾಗಬೇಕು ಎಂದ ಸುಮಲತಾ : ತರಾಟೆ ತೆಗೆದುಕೊಂಡ ಕನ್ನಡಿಗರು

ಈ ಬಾರಿಯ ಚುನಾವಣೆಯಲ್ಲಿ ಮಧು ಬಂಗಾರಪ್ಪನವರ ಪರ ಸೊರಬ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತಿರುವ ಗೀತಾ ಶಿವರಾಜ್‌ ಕುಮಾರ್‌, ಇದೀಗ ಕಾಂಗ್ರೆಸ್‌ ಸೇರಲು ಸಜ್ಜಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ ಚಿತ್ರರಂಗ ಕಂಡ ಅಪ್ರತಿಮ ಮಾಂತ್ರಿಕ ಸಿಂಗೀತಂ ಶ್ರೀನಿವಾಸರಾವ್

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...