ಕೊಡಗು | ಶಿಥಿಲಗೊಂಡ ಮನೆ ಮುಂದೆ ವೃದ್ಧೆ ಮತದಾನ; ಜಿಲ್ಲಾಧಿಕಾರಿಗೆ ತರಾಟೆ

Date:

  • ಫೆಸ್‌ಬುಕ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದ ಜಿಲ್ಲಾಧಿಕಾರಿ
  • ವೃದ್ಧೆಯಿಂದ ಮತ ಪಡೆಯಲು ಹೇಗೆ ಮನಸ್ಸು ಬಂತು?’

ಕೊಡಗು ಜಿಲ್ಲೆಯ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿಥಿಲಾವಸ್ಥೆಯ ಮನೆಯೊಂದರಲ್ಲಿ 104 ವರ್ಷ ವಯಸ್ಸಿನ ವೃದ್ಧೆಯೊಬ್ಬರು ಮಂಗಳವಾರ ಮತದಾನ ಮಾಡಿದ್ದಾರೆ. ಮತದಾನದ ಬೆನ್ನಲ್ಲೇ ಅಧಿಕಾರಿಗಳನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ.

104 ವರ್ಷದ ಕಾಳಮ್ಮ ಅವರು ಕುಸಿಯುವ ಹಂತದಲ್ಲಿದ್ದ ಮನೆಯಲ್ಲಿ ಮತದಾನ ಮಾಡಿದ್ದಾರೆ. ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ತನ್ನ ಫೇಸ್ ಬುಕ್ ಖಾತೆಯಲ್ಲಿ ಚಿತ್ರ ಹಂಚಿಕೊಂಡಿದ್ದರು. ಈ ಚಿತ್ರವನ್ನು ನೋಡಿದ ಸಾರ್ವಜನಿಕರು, “ಅವರ ಮನೆಯ ಪರಿಸ್ಥಿತಿ ನೋಡಿ ಮತ ಹಾಕಿಸಿಕೊಳ್ಳಲು ನಿಮಗೆ ಹೇಗೆ ಮನಸ್ಸು ಬಂತು” ಎಂದು ಜಿಲ್ಲಾಧಿಕಾರಿಯನ್ನು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಡಾ. ಬಿ ಸಿ ಸತೀಶ್, “ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಮಹಿಳೆಯ ಮನೆಗೆ ತೆರಳಿದ್ದ ಅಧಿಕಾರಿಗಳ ಹೇಳಿಕೆ ಪ್ರಕಾರ, ವೃದ್ಧೆ ತಾತ್ಕಾಲಿಕವಾಗಿ ಈ ಮನೆಯಲ್ಲಿ ವಾಸವಿದ್ದಾರೆ. ಈ ಮನೆಯ ಹಿಂದೆ ಬೇರೊಂದು ಮನೆ ಕಟ್ಟಿಸುತ್ತಿದ್ದಾರೆ. ಚುನಾವಣೆ ಮುಗಿದ ಮೇಲೆ ಈ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಲಾಗುವುದು” ಎಂದು ಸ್ಪಷ್ಟನೆ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಹಿಂದು ಯುವತಿಯೊಂದಿಗಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ!

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಕಾಂಗ್ರೆಸ್‌ಗೆ ಮಡಿವಾಳ ಸಮಾಜ ಬೆಂಬಲ; ಬೇಡಿಕೆಗಳ ಈಡೇರಿಕೆಗೆ ಆಗ್ರಹ

ರಾಜ್ಯದಲ್ಲಿನ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವುದು, ರಾಜ್ಯದ ಎಲ್ಲ ತಾಲೂಕಿನಲ್ಲಿ...

ಚಿಕ್ಕಮಗಳೂರು | ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮಲೆನಾಡಿನ ಸಂರಕ್ಷಣ ವೇದಿಕೆ ಕರೆ

ಬಿಜೆಪಿ ಪಕ್ಷ ಬಿಟ್ಟು ಕಾಂಗ್ರೇಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮಲೆನಾಡಿನ ಸಂರಕ್ಷಣ ವೇದಿಕೆ...

ಚಿಕ್ಕಬಳ್ಳಾಪುರ | ಕೋಮುವಾದದ ಮಾತುಗಳನ್ನಾಡುವ ಪ್ರಧಾನಿ ದೇಶಕ್ಕೆ ಬೇಕೆ?: ಸಚಿವ ಎಂ ಸಿ ಸುಧಾಕರ್

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಸಿಯುತ್ತಾರೆ, ದೇಶದ ಸಂಪತ್ತು ಹೆಚ್ಚು ಮಕ್ಕಳನ್ನು...