ಗೋಕಾಕ್‌ | ಕಾಂಗ್ರೆಸ್‌ ಜೊತೆ ‘ಕೈ’ ಜೋಡಿಸಿದ ಜೆಡಿಎಸ್ ಅಭ್ಯರ್ಥಿ ಉಚ್ಚಾಟನೆ?

Date:

ಗೋಕಾಕ್ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಚಂದನ್ ಗಿಡ್ಡನವರ್ ಅವರು ತಮ್ಮ ನಾಮಪತ್ರ ವಾಪಸ್ ಪಡೆದುಕೊಂಡು ಕಾಂಗ್ರೆಸ್​ ಜೊತೆಗೆ ಕೈಜೋಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಚಾಟಿಸಲು ಜೆಡಿಎಸ್‌ ನಿರ್ಧರಿಸಿದೆ ಎನ್ನಲಾಗಿದೆ.

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹೊತ್ತಲ್ಲೇ ನಾನಾ ವಿದ್ಯಮಾನಗಳಿಗೆ ರಾಜಕಾರಣ ಸಾಕ್ಷಿಯಾಗುತ್ತಿದೆ. ಒಂದೆಡೆ ಪಕ್ಷಾಂತರ ಪರ್ವ ಜೋರಾಗಿದ್ದರೆ ಮತ್ತೊಂದೆಡೆ ಒಳಒಪ್ಪಂದಗಳು ಸದ್ದು ಮಾಡುತ್ತಿವೆ.

ಗೋಕಾಕ್ ವಿಧಾನಸಭಾ ಚುನಾವಣೆಯಿಂದ ಜೆಡಿಎಸ್ ಅಭ್ಯರ್ಥಿಯಾಗಿ ಚಂದನ್ ಗಿಡ್ಡನವರ್ ಕಣಕ್ಕಿಳಿದಿದ್ದರು. ಆದರೆ, ಬಿಜೆಪಿಯ ರಮೇಶ್ ಜಾರಕಿಹೊಳಿ ಅವರನ್ನು ಮಣಿಸಲು ಜೆಡಿಎಸ್ ವರಿಷ್ಠರ ಗಮನಕ್ಕೆ ತರದೆ ನಾಮಪತ್ರ ಹಿಂಪಡೆದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ಪಕ್ಷದ ನಾಯಕರಿಗೆ ಹೇಳದೆ ನಾಮಪತ್ರ ವಾಪಸ್ ಪಡೆದಿದ್ದಾರೆಂಬ ಟೀಕೆ ವ್ಯಕ್ತವಾಗಿದೆ.

ಈ ಸುದ್ದಿ ಓದಿದ್ದೀರಾ? ಬಡವರ ಕಣ್ಣೀರು ಒರೆಸಲು ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗಲಿ : ದೇವೇಗೌಡ

ನಾಮಪತ್ರ ವಾಪಸ್ ಪಡೆಯಲು ಸೋಮವಾರ ಕೊನೆಯ ದಿನವಾಗಿತ್ತು. ಕೊನೆಯ ಕ್ಷಣದಲ್ಲಿ ನಾಮಪತ್ರ ವಾಪಸ್ ಪಡೆದಿರುವ ಚಂದನ್ ಗಿಡ್ಡನವರ್, ಅವರು ಕಾಂಗ್ರೆಸ್​ ಅಭ್ಯರ್ಥಿ ಡಾ ಮಹಾಂತೇಶ ಕಡಾಡಿಗೆ ಬೆಂಬಲ ಘೋಷಿಸಿದ್ದಾರೆ. ನಾಮಪತ್ರ ವಾಪಸ್ ಪಡೆದ ಹಿನ್ನೆಲೆ ಚಂದನ್ ಗಿಡ್ಡನವರ್‌ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲು ಜೆಡಿಎಸ್ ನಿರ್ಧರಿಸಿದೆ ಎನ್ನಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವೇದಿಕೆಯಲ್ಲೇ ಮಾಜಿ ರಾಜ್ಯಪಾಲೆ ತಮಿಳ್‌ಸೈಗೆ ಎಚ್ಚರಿಕೆ ನೀಡಿದ ಅಮಿತ್ ಶಾ: ವಿಡಿಯೋ ವೈರಲ್

ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಎನ್ ಚಂದ್ರಬಾಬು ನಾಯ್ಡು ಅವರು ಪ್ರಮಾಣ ವಚನ...

ಜೂನ್ 15, 16ರಂದು ಬೆಂಗಳೂರಿನಲ್ಲಿ ‘ದಕ್ಷಿಣ ಭಾರತ ಉತ್ಸವ’: ಸಚಿವ ಡಾ. ಎಚ್ ಕೆ ಪಾಟೀಲ್

ದಕ್ಷಿಣ ಭಾರತದ ರಾಜ್ಯಗಳ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಯ ಅವಕಾಶ, ಉದ್ಯೋಗ ಸೃಷ್ಟಿಗೆ...

ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆಗೆ ವೇಗ ನೀಡಲು ಸಚಿವ ಜಮೀರ್ ಅಹಮದ್ ಖಾನ್ ಸೂಚನೆ

ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಕೈಗೊಂಡಿರುವ ವಸತಿ ಯೋಜನೆಗಳು ತ್ವರಿತ...

140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಚಲಾವಣೆಯಾದ ಮತಕ್ಕಿಂತ ಎಣಿಕೆಯಾದ ಮತಗಳ ಸಂಖ್ಯೆ ಹೆಚ್ಚು: ಏನು ಈ ವ್ಯತ್ಯಾಸ?

2024ರ ಲೋಕಸಭೆ ಚುನಾವಣೆಯ ಫಲಿತಾಂಶಗಳು ಹೊರಬಿದ್ದಿವೆ. ಮೂರನೇ ಬಾರಿಗೆ ಮೋದಿ ನೇತೃತ್ವದಲ್ಲಿ...