ಹಾಸನ | ಎನ್.ಆರ್ ಸಂತೋಷ್‌ ಬೆಂಬಲಿಗರ ಆಕ್ರೋಶ; ಬಿಜೆಪಿ ಬಾವುಟ, ಫ್ಲೆಕ್ಸ್‌ಗಳಿಗೆ ಬೆಂಕಿ

Date:

  • ಬಿಜೆಪಿ ಅಭ್ಯರ್ಥಿ ಜಿ.ವಿ ಬಸವರಾಜು 5 ಸಾವಿರ ಮತ ಪಡೆಯಲು ಸಾಧ್ಯವಿಲ್ಲ
  • ʼಬಿಜೆಪಿ ಸೋಲಲಿ ಎಂದು ಗಡ್ಡ ಬೋಳಿಸಿ ಬೆಂಗಳೂರಿನ ಬಿಜೆಪಿ ಕಚೇರಿಗೆ ಕಳುಹಿಸಿತ್ತೇನೆʼ

ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಎನ್.ಆರ್ ಸಂತೋಷ್‌ ಅವರಿಗೆ ಟಿಕೆಟ್ ತಪ್ಪಿದ್ದರಿಂದ ಬೆಂಬಲಿಗರು ಆಕ್ರೋಶಗೊಂಡಿದ್ದು, ಬಿಜೆಪಿ ಬಾವುಟಗಳು, ಫ್ಲೆಕ್ಸ್‌ಗಳನ್ನು ಸುಟ್ಟು ಹಾಕಿದ್ದಾರೆ. 

ಹಾಸನ ಜಿಲ್ಲೆ ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಎನ್.ಆರ್ ಸಂತೋಷ್‌ ಬೆಂಬಲಿಗರು ಬಿಜೆಪಿ ಫ್ಲೆಕ್ಸ್‌ಗಳನ್ನು ಹರಿದು ಹಾಕಿದ್ದು, ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಿಜೆಪಿ ಟಿಕೆಟ್ ನೀಡಿರುವ ಜಿ.ವಿ ಬಸವರಾಜು 5 ಸಾವಿರ ಮತ ಪಡೆಯಲು ಸಾಧ್ಯವಿಲ್ಲ. ಇಡೀ ಅರಸೀಕೆರೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ಹಾಳು ಮಾಡಿದ್ದಾರೆ” ಎಂದು ಆರೋಪಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಅರಸೀಕೆರೆ | ಕೈ ತಪ್ಪಿದ ಬಿಜೆಪಿ ಟಿಕೆಟ್‌; ಜೆಡಿಎಸ್‌ನತ್ತ ಎನ್‌ ಆರ್‌ ಸಂತೋಷ್‌

“ನಾನು ಎನ್.ಆರ್ ಸಂತೋಷ್ ಗೆಲ್ಲಲಿ ಎಂದು ಗಡ್ಡ ಬಿಟ್ಟಿದ್ದೆ. ಈಗ ಅವರಿಗೆ ಟಿಕೆಟ್ ನೀಡಿಲ್ಲ. ಬಿಜೆಪಿ ಸೋಲಲಿ ಎಂದು ಗಡ್ಡ ಬೋಳಿಸಿ ಬೆಂಗಳೂರಿನ ಬಿಜೆಪಿ ಕಚೇರಿಗೆ ಕಳುಹಿಸಿತ್ತೇನೆ” ಎಂದು ಸಂತೋಷ್ ಬೆಂಬಲಿಗ ರಂಗನಾಥ್ ಅಸಮಾಧಾನ ವ್ಯಕ್ತಪಡಿಸಿದರು.

ಈ ಮಧ್ಯೆ ಎನ್‌.ಆರ್‌. ಸಂತೋಷ್‌ ಬೆಂಬಲಿಗರ ಜೊತೆ ಸಭೆ ನಡೆಸಿದ್ದು, “ಸೋಮವಾರ ನಾಮಪತ್ರ ಸಲ್ಲಿಸುತ್ತೇನೆ. ಜೆಡಿಎಸ್‌ನಿಂದ ಬಿ.ಫಾರಂ ದೊರೆತಲ್ಲಿ ಜೆಡಿಎಸ್‌ನಿಂದ ಇಲ್ಲವೇ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್‌ ಕೈ ಜಾರಿದ ರಾಜಸ್ಥಾನ- ವಾಡಿಕೆ ತಪ್ಪಿಸದೆ ಪಕ್ಷ ಬದಲಿಸಿದ ಮತದಾರರು

ರಾಜಸ್ಥಾನದಲ್ಲಿ ಪ್ರತಿ ಅವಧಿಗೂ ಸರ್ಕಾರ ಬದಲಾಯಿಸುವ ರೂಢಿಯಿದೆ ಹಾಲಿ ಚುನಾವಣೆಯಲ್ಲಿ...

ತೆಲಂಗಾಣ ಫಲಿತಾಂಶ: ಕೆಸಿಆರ್ ಸರ್ವಾಧಿಕಾರಕ್ಕೆ ಏಟು; ಕಾಂಗ್ರೆಸ್ ಗ್ಯಾರಂಟಿಗಳಿಗೆ ಓಟು

2014ರಿಂದಲೂ ಕಾಂಗ್ರೆಸ್ ತೆಲಂಗಾಣದ ಗದ್ದುಗೆ ಮೇಲೆ ಕಣ್ಣಿಟ್ಟಿತ್ತು. ಈ ಬಾರಿ ಕರ್ನಾಟಕದಲ್ಲಿ...

ರಾಜಸ್ಥಾನ | ಬಿಜೆಪಿ ವಿರುದ್ಧ ಬಂಡಾಯವೆದ್ದ 26 ವರ್ಷದ ಸ್ವತಂತ್ರ ಅಭ್ಯರ್ಥಿಗೆ ಭಾರಿ ಮುನ್ನಡೆ

ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಭಾರಿ...

ರಾಜಸ್ಥಾನ | ಬಿಜೆಪಿ ಮುನ್ನಡೆ ಕಾಯ್ದುಕೊಂಡಂತೆ ಸಿಎಂ ಸ್ಥಾನಕ್ಕೆ ಮೂವರ ಪೈಪೋಟಿ!

ರಾಜಸ್ಥಾನ ರಾಜ್ಯದ 199 ವಿಧಾನಸಭಾ ಕ್ಷೇತ್ರಗಳ ಪೈಕಿ ಮಧ್ಯಾಹ್ನ 12 ಗಂಟೆ...