ಹಾಸನ | ಬಿಜೆಪಿಗೆ ಶಾಕ್; ಇದ್ದ ಒಂದು ಕ್ಷೇತ್ರವನ್ನು ಕಳೆದುಕೊಳ್ಳುವ ಭೀತಿ

ಬಿಜೆಪಿ ಕೋರ್ ಕಮಿಟಿ

ಹಾಸನ ಒಟ್ಟು ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಒಬ್ಬನೇ ಒಬ್ಬ ಶಾಸಕರಿದ್ದರು. ಆದರೆ, ಈಗ ಆ ಒಂದು ಕ್ಷೇತ್ರವನ್ನೂ ಕೆಳದುಕೊಳ್ಳುವ ಭೀತಿ ಎದುರಾಗಿದೆ. ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ, ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ್ ತೀವ್ರ ಹಿನ್ನಡೆ ಸಾಧಿಸಿದ್ದು, ಸೋಲಿನ ಭಯ ಎದುರಾಗಿದೆ.

ಪ್ರೀತಂ ಗೌಡ ವಿರುದ್ಧ ಜೆಡಿಎಸ್‌ನಿಂದ ಕಣಕ್ಕಿಳಿದಿದ್ದ ಸ್ವರೂಪ್ ಪ್ರಕಾಶ್ ಭಾರೀ ಮುನ್ನಡೆಯಲಿದ್ದು, ಗೆಲುವಿನ ಸಮೀಪದಲ್ಲಿದ್ದಾರೆ. ಕ್ಷೇತ್ರದಲ್ಲಿ ಸ್ವರೂಪ್‌ ಗೆಲುವು ಬಹುತೇಕ ಖಚಿತವಾಗಿದ್ದು, ಜೆಡಿಎಸ್‌ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ.

ಹಾಸನ ಜಿಲ್ಲೆಯ ಒಟ್ಟು ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ, ನಾಲ್ಕು ಕ್ಷೇತ್ರಗಳಲ್ಲಿ ಜೆಡಿಎಸ್, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆಯಲ್ಲಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

LEAVE A REPLY

Please enter your comment!
Please enter your name here