ಹಾಸನ | ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆ; ಬನವಾಸೆ ರಂಗಸ್ವಾಮಿಗೆ ಕೈ ಟಿಕೆಟ್

Date:

Advertisements
  • ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಘೋಷಣೆಯಾಗದ ಕಾಂಗ್ರೆಸ್ ಅಭ್ಯರ್ಥಿ
  • ಎರಡು ಮೂರು ದಿನಗಳ ಬಳಿಕ ಉಳಿದ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ ಕೆ.ಎಮ್ ಶಿವಲಿಂಗೇಗೌಡ ಹಾಗೂ ಹಾಸನ ವಿಧಾನಸಭಾ ಕ್ಷೇತ್ರದಿಂದ ಬನವಾಸೆ ರಂಗಸ್ವಾಮಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಹಾಸನ ವಿಧಾನಸಭಾ ಕ್ಷೇತ್ರದಿಂದ ಪ್ರಮುಖ ಮೂರು ರಾಜಕೀಯ ಪಕ್ಷಗಳಿಂದ ಅಭ್ಯರ್ಥಿಗಳ ಘೋಷಣೆ ಕೊನೆಯಾದಂತಾಗಿದೆ. ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಲಿ ಶಾಸಕ ಪ್ರೀತಮ್ ಜೆ ಗೌಡ  ಶುಕ್ರವಾರ ರ್‍ಯಾಲಿ ನಡೆಸಿ ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್ ಎಚ್.ಪಿ ಸ್ವರೂಪ್ ಅವರನ್ನು ಕಣಕ್ಕಿಳಿಸಿದ್ದು, ಕಳೆದ ಮೂರು ನಾಲ್ಕು ತಿಂಗಳಿಂದ ಇದ್ದಂತಹ ಟಿಕೆಟ್ ಹಂಚಿಕೆ ಗೊಂದಲಕ್ಕೆ ತೆರೆ ಎಳೆಯಲಾಗಿದೆ. ಕಾಂಗ್ರೆಸ್‌ನಿಂದ ನಿರೀಕ್ಷೆಯಂತೆ ಬನವಾಸೆ ರಂಗಸ್ವಾಮಿ ಕಣಕ್ಕಿಳಿದಿದ್ದಾರೆ.

ಸದ್ಯ, ರಂಗಸ್ವಾಮಿ ಅವರು ಇನ್ನೂ ಪ್ರಚಾರ ಆರಂಭಿಸಿಲ್ಲ. ಬಿಜೆಪಿ ಹಾಲಿ ಶಾಸಕ ಪ್ರೀತಂ ಗೌಡ ಈಗಾಗಲೇ ವಿಧಾನಸಭಾ ಕ್ಷೇತ್ರದಲ್ಲಿ ಹಲವು ಸುತ್ತಿನ ಪ್ರಚಾರ ಮಾಡಿದ್ದಾರೆ. ಅಂತೆಯೇ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪ್ರಕಾಶ್ ಕೂಡ ಟಿಕೆಟ್ ಘೋಷಣೆ ಮುನ್ನವೇ ಕ್ಷೇತ್ರದಲ್ಲಿ ಮಿಂಚಿನ ಸಂಚಾರ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Advertisements

ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕೆ.ಎಂ ಶಿವಲಿಂಗೇಗೌಡ ಹಾಗೂ ಬಿಜೆಪಿಯಿಂದ ಜಿ.ವಿ ಬಸವರಾಜು ಹೆಸರು ಘೋಷಣೆಯಾಗಿದ್ದು, ಜೆಡಿಎಸ್‌ನಿಂದ ಎನ್‌.ಅರ್ ಸಂತೋಷ್‌ಗೆ ಟಿಕೆಟ್ ದೊರೆಯುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.

ಅರಕಲಗೂಡು ವಿಧಾನಸಭಾ ಕ್ಷೇತ್ರದದಿಂದ ಘೋಷಣೆಯಾಗದ ಕಾಂಗ್ರೆಸ್ ಅಭ್ಯರ್ಥಿ

ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯ ಕಗ್ಗಂಟು ಮುಂದುವರೆದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೊಡ್ಡಮಗ್ಗೆ ಕೃಷ್ಣೇಗೌಡರನ್ನು ಕಣಕ್ಕಿಳಿಸಲು ಒಲವು ತೋರಿದ್ದರೆ, ಡಿ.ಕೆ.ಶಿವಕುಮಾರ್ ಅವರು ಮಾಜಿ ಪೊಲೀಸ್ ಅಧಿಕಾರಿ ಶ್ರೀಧರ್ ಗೌಡ ಅವರನ್ನು ಕಣಕ್ಕಿಳಿಸಲು ಉತ್ಸುಕರಾಗಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ವಿಧಾನಸಭಾ ಚುನಾವಣೆ | ನೀತಿ ಸಂಹಿತೆ ಜಾರಿ ಬಳಿಕ 150 ಕೋಟಿ ರೂ. ವಶ

ಈಗಾಗಲೇ ಅರಕಲಗೂಡು ಕ್ಷೇತ್ರದಲ್ಲಿ ಅಪಾರ ಜನಬೆಂಬಲವಿರುವ ಕೃಷ್ಣೇಗೌಡರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿ ಹಲವು ಸುತ್ತಿನ ಪ್ರಚಾರ ನಡೆಸಿದ್ದು, ಕಾಂಗ್ರೆಸ್ ಟಿಕೆಟ್ ತಮಗೆ ದೊರೆಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ತನ್ನ ಮೂರನೇ ಪಟ್ಟಿಯನ್ನೂ ಬಿಡುಗಡೆ ಮಾಡಿದೆ. ಅದರಲ್ಲಿಯೂ ಅರಕಲಗೂಡು ವಿಧಾನಸಭಾ ಕ್ಷೇತ್ರ ಹಾಗೂ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತು ತೀರ್ಮಾನವಾಗದ ಹಿನ್ನಲೆಯಲ್ಲಿ ಕಾಂಗ್ರೆಸ್ ಎರಡು ಮೂರು ದಿನಗಳ ಬಳಿಕ ಉಳಿದ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿ ಘೋಷಣೆ ಮಾಡಲಿದೆ ಎಂದು ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧ್ಯಪ್ರದೇಶ ಚುನಾವಣೆ | ಆಡಳಿತ ವಿರೋಧಿ ಅಲೆಯ ನಡುವೆಯೂ ಬಿಜೆಪಿ ಜಯಭೇರಿ

ಮಧ್ಯಪ್ರದೇಶದಲ್ಲಿ ಬಿಜೆಪಿ ಉಗ್ರ ಹಿಂದುತ್ವ ಪ್ರತಿಪಾದಿಸಿದರೆ, ಕಾಂಗ್ರೆಸ್‌ನ ಕಮಲನಾಥ್ ಸಾಫ್ಟ್ ಹಿಂದುತ್ವದ...

ಛತ್ತೀಸ್‌ಗಡ: ಹಗರಣಗಳ ಆರೋಪಕ್ಕೆ ಸಿಲುಕಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್

ಛತ್ತೀಸ್‌ಗಢ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರ...

ಕಾಂಗ್ರೆಸ್‌ ಕೈ ಜಾರಿದ ರಾಜಸ್ಥಾನ- ವಾಡಿಕೆ ತಪ್ಪಿಸದೆ ಪಕ್ಷ ಬದಲಿಸಿದ ಮತದಾರರು

ರಾಜಸ್ಥಾನದಲ್ಲಿ ಪ್ರತಿ ಅವಧಿಗೂ ಸರ್ಕಾರ ಬದಲಾಯಿಸುವ ರೂಢಿಯಿದೆ ಹಾಲಿ ಚುನಾವಣೆಯಲ್ಲಿ...

ತೆಲಂಗಾಣ ಫಲಿತಾಂಶ: ಕೆಸಿಆರ್ ಸರ್ವಾಧಿಕಾರಕ್ಕೆ ಏಟು; ಕಾಂಗ್ರೆಸ್ ಗ್ಯಾರಂಟಿಗಳಿಗೆ ಓಟು

2014ರಿಂದಲೂ ಕಾಂಗ್ರೆಸ್ ತೆಲಂಗಾಣದ ಗದ್ದುಗೆ ಮೇಲೆ ಕಣ್ಣಿಟ್ಟಿತ್ತು. ಈ ಬಾರಿ ಕರ್ನಾಟಕದಲ್ಲಿ...

Download Eedina App Android / iOS

X