ಹಾಸನ | ಜೆಡಿಎಸ್ ಅಭ್ಯರ್ಥಿ ಎಚ್ ಪಿ ಸ್ವರೂಪ್ ಬೆಂಬಲಿಸಲು ದಸಂಸ ನಿರ್ಧಾರ

Date:

Advertisements
  • ʼಸಂವಿಧಾನದಲ್ಲಿ ನೀಡಿರುವ ಮೀಸಲಾತಿ ನೀತಿ ದುರ್ಬಲಗೊಳಿಸುತ್ತಿರುವ ಬಿಜೆಪಿʼ
  • ʼಸುಳ್ಳು ಪ್ರಮಾಣ ಪತ್ರ ಪಡೆದಿರುವ ವೀರಶೈವ ಜಂಗಮರ ಮೇಲೆ ಕಾನೂನು ಕ್ರಮಕ್ಕೆ ಬಿಜೆಪಿ ಹಿಂದೇಟುʼ

ಕೋಮುವಾದಿ, ಜಾತಿವಾದಿ ದಲಿತ ವಿರೋಧಿ, ಭ್ರಷ್ಟ ಬಿಜೆಪಿ ಸರ್ಕಾರ ತೊಲಗಿಸಿ, ಜಾತ್ಯಾತೀತ ಜನತಾದಳದ ಅಭ್ಯರ್ಥಿ ಎಚ್ ಪಿ ಸ್ವರೂಪ್ ಅವರನ್ನು ಬೆಂಬಲಿಸಲು ದಲಿತ ಸಂಘಟನೆಗಳು ನಿರ್ಧಾರಿಸಿದ್ದೇವೆ ಎಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಕೃಷ್ಣದಾಸ್ ತಿಳಿಸಿದರು.

ಹಾಸನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ರಾಜ್ಯದಲ್ಲಿ ಮೇ 10ರಂದು ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಇದು ರಾಜ್ಯದ ಜನರ ಭವಿಷ್ಯವನ್ನು ನಿರ್ಧರಿಸುವ ಮಹತ್ತರವಾದ ಚುನಾವಣೆಯಾಗಿದೆ” ಎಂದರು.

“ನಮ್ಮ ರಾಜ್ಯ ಹಲವು ಧರ್ಮ, ಜಾತಿ, ಭಾಷೆ, ವಿಭಿನ್ನ ಆಚಾರ-ವಿಚಾರ ಸೇರಿದಂತೆ ಬಹುಸಂಸ್ಕೃತಿಯ ನೆಲೆಬೀಡಾಗಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಧರ್ಮ, ಜಾತಿ ಹೆಸರಿನಲ್ಲಿ ಸಮಾಜದಲ್ಲಿ ವಿಷಬೀಜ ಬಿತ್ತಿ ಜನರ ಮನಸ್ಸನ್ನು ಬಿಜೆಪಿ ನೇತೃತ್ವದ ಸಂಘ ಪರಿವಾರ ಘಾಸಿಗೊಳಿಸಿದೆ” ಎಂದು ಆರೋಪಿಸಿದರು.

Advertisements

“ಸಮಸಮಾಜದ ನಿರ್ಮಾಣಕ್ಕಾಗಿ ಸಂವಿಧಾನದಲ್ಲಿ ನೀಡಿರುವ ಮೀಸಲಾತಿ ನೀತಿಯನ್ನು ದುರ್ಬಲಗೊಳಿಸಲಾಗುತ್ತಿದೆ. ಸರ್ಕಾರಿ ಒಡೆತನದಲ್ಲಿರುವ ಉದ್ದಿಮೆಗಳನ್ನು ಖಾಸಗೀಕರಣ ಮಾಡುವ ಪ್ರಕ್ರಿಯೆ ತೀವ್ರ ಗತಿಯಲ್ಲಿ ಸಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿಯನ್ನು ಸದನದಲ್ಲಾಗಲಿ ಅಥವಾ ಸಾರ್ವಜನಿಕವಾಗಿ ಆಗಲಿ ಬಹಿರಂಗ ಚರ್ಚೆಗೊಳಪಡಿಸದೆ ಕೇವಲ ಸಚಿವ ಸಂಪುಟ ಉಪಸಮಿತಿಯ ಶಿಫಾರಸ್ಸುಗಳನ್ನು ಅಸಮರ್ಪಕವಾಗಿ ಜಾರಿಗೊಳಿಸಿ, ಪರಿಶಿಷ್ಟ ಜಾತಿಯ 101 ಉಪಜಾತಿಗಳ ನಡುವೆ ಅಸಹನೆ ದ್ವೇಷ ಹುಟ್ಟುವಂತೆ ಮಾಡಿದ್ದಾರೆ” ಎಂದು ಆರೋಪಿಸಿದರು.

“ಪ್ರಜಾತಿಯ ಬೇಡಜಂಗಮರ ಹೆಸರಿನಲ್ಲಿ ವೀರಶೈವ ಜಂಗಮರು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದುಕೊಂಡು ಬೇಡಜಂಗಮರ ಸೌಲಭ್ಯಗಳನ್ನು ಕಬಳಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಬಿಜೆಪಿ ಸರ್ಕಾರ ಹಿಂದೇಟು ಹಾಕುತ್ತಿದೆ” ಎಂದರು.

“ದೇಶದ ಸುಪ್ರೀಂ ಕೋರ್ಟ್ ಪಿಟಿಸಿಎಲ್‌ ಕಾಯಿದೆಗೆ ಕಾಲಮಿತಿ ನಿಗದಿಪಡಿಸಿ ಮಾಡಿರುವ ಆದೇಶಕ್ಕೆ ತಿದ್ದುಪಡಿ ತರುವಂತೆ ಕಳೆದ ಮೂರ್ನಾಲ್ಕು ವರ್ಷಗಳಿಂದ ಜಿಲ್ಲೆ ರಾಜ್ಯಾದ್ಯಂತ ಸತ್ಯಾಗ್ರಹ ಹೋರಾಟ ಮಾಡಿದರೂ ಯಾವುದೇ ಕಿಮ್ಮತ್ತು ನೀಡದೆ ಬಿಜೆಪಿ ಸರ್ಕಾರ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ” ಎಂದು ಗುಡುಗಿದರು.

“ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಕೆಪಿಎಸ್‌ಸಿ, ಶಿಕ್ಷಕರ ನೇಮಕಾತಿ, ಪೊಲೀಸ್ ನೇಮಕಾತಿ, ಕೆಪಿಟಿಸಿಎಲ್‌ನಲ್ಲಿ ಎಗ್ಗಿಲ್ಲದಂತೆ ಭ್ರಷ್ಟಾಚಾರ ಸಾಗುತ್ತಿದೆ. ಸರ್ಕಾರದ ಏಜೆಂಟರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಶೇ. 40ರಷ್ಟು ಕಮಿಷನ್ ಪಡೆದು ಬಿಜೆಪಿ ಸರ್ಕಾರ ದೇಶದಲ್ಲೇ ಭ್ರಷ್ಟಾಚಾರದಲ್ಲಿ ಕುಖ್ಯಾತಿ ಪಡೆದಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಕಾಂಗ್ರೆಸ್‌ಗೆ ಷರತ್ತುಬದ್ಧ ಬೆಂಬಲ ಸೂಚಿಸಿದ ದಸಂಸ ಐಕ್ಯ ಹೋರಾಟ ಚಾಲನಾ ಸಮಿತಿ

ಎಸ್‌ಸಿ – ಎಸ್‌ಟಿ ಸಮುದಾಯದ ಮತದಾರರು ಮುಂಬರುವ ಚುನಾವಣೆಯಲ್ಲಿ ಬಹಳ ಎಚ್ಚರದಿಂದ ಮತ ಚಲಾಯಿಸಬೇಕಾಗಿದೆ. ಈ ಹಿನ್ನೆಲೆ ಜಿಲ್ಲೆಯ ಬಹುತೇಕ ದಲಿತ ಸಂಘಟನೆಗಳ ಮುಖಂಡರು ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರೀತಂ ಜೆ ಗೌಡ ಅವರನ್ನು ಸೋಲಿಸಲು ಜಾತ್ಯಾತೀತ ಜನತಾದಳದ ಅಭ್ಯರ್ಥಿ ಎಚ್‌ ಪಿ ಸ್ವರೂಪ್  ಅವರನ್ನು ಬೆಂಬಲಿಸಲು ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ. ಆದುದರಿಂದ ಜಿಲ್ಲೆಯಲ್ಲಿ ಕೋಮುವಾದಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಜಾತ್ಯಾತೀತ ಪಕ್ಷಗಳಿಗೆ ಬೆಂಬಲಿಸುವಂತೆ ಆಯಾ ವಿಧಾನಸಭಾ ಕ್ಷೇತ್ರದ ದಲಿತ ಸಂಘಟನೆಗಳ ಮುಖಂಡರು ತೀರ್ಮಾನ ಕೈಗೊಳ್ಳಲಿದ್ದಾರೆ” ಎಂದು ಹೇಳಿದರು.

ದಲಿತ ಸಂಘಟನೆಗಳ ಸಮನ್ವಯ ಸಮಿತಿ ಗೌರವಾಧ್ಯಕ್ಷ ನಾರಾಯಣ ದಾಸ್, ಅಧ್ಯಕ್ಷ ಕೆ ಈರಪ್ಪ, ಉಪಾಧ್ಯಕ್ಷ ಎಚ್‌ ಕೆ ಸಂದೇಶ್‌, ದಲಿತ ಮುಖಂಡರಾದ ವೀರಭದ್ರಯ್ಯ ಅಣಚನಹಳ್ಳಿ, ಕ್ರಾಂತಿ ಪ್ರಸಾದ್ ತ್ಯಾಗಿ, ದಂಡೋರ ಸೋಮು ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X