ಹಾಸನ ಲೋಕಸಭಾ ಕ್ಷೇತ್ರ ಪರಿಚಯ

Date:

Advertisements

ಜೆಡಿಎಸ್‌ನ ಭದ್ರಕೋಟೆ ಎಂದೇ ಗುರುತಿಸಿಕೊಂಡಿರುವ ಹಾಸನ ಲೋಕಸಭಾ ಕ್ಷೇತ್ರವು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಅವರ ಕುಟುಂಬ ಪ್ರತಿನಿಧಿಸುತ್ತಾ ಬಂದಿರುವ ಕಾರಣಕ್ಕೆ ಸದಾ ಗಮನ ಸೆಳೆಯುತ್ತದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ವಿಧಾನಸಭಾ ಕ್ಷೇತ್ರ ಸೇರಿದಂತೆ ಹಾಸನ ಜಿಲ್ಲೆಯ ಶ್ರವಣ ಬೆಳಗೊಳ, ಅರಸೀಕೆರೆ, ಬೇಲೂರು, ಹಾಸನ, ಹೊಳೆನರಸೀಪುರ, ಅರಕಲಗೂಡು, ಸಕಲೇಶಪುರ ವಿಧಾನಸಭಾ ಕ್ಷೇತ್ರಗಳನ್ನು ಹಾಸನ ಲೋಕಸಭಾವು ಒಳಗೊಂಡಿದೆ.

ಹಾಸನ ಕ್ಷೇತ್ರದಲ್ಲಿ ಒಟ್ಟು 16,52,999 ಮತದಾರರು ಇದ್ದಾರೆ. 2019ರಲ್ಲಿ ಒಟ್ಟು 12,77,552 ಮತದಾರರು ಇದ್ದರು. 2019ರಲ್ಲಿ ಕ್ಷೇತ್ರದಲ್ಲಿ ಶೇ. 77.29%ರಷ್ಟು ಮತದಾನ ನಡೆದಿತ್ತು. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು 1991 ರಿಂದ 1994, 1998 ರಿಂದ 1999 ಮತ್ತು ಮತ್ತೆ 2004 ಮತ್ತು 2014ರವರೆಗೆ ಪ್ರತಿನಿಧಿಸಿದ್ದರು. ಕಳೆದ ಚುನಾವಣೆಯಲ್ಲಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಗೆಲುವು ಸಾಧಿಸಿದ್ದರು.

Advertisements

2019ರ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊಮ್ಮಗನಿಗೆ ಕ್ಷೇತ್ರವನ್ನು ಬಿಟ್ಟುಕೊಟ್ಟು ’ಕಾಂಗ್ರೆಸ್‌- ಜೆಡಿಎಸ್‌’ ಮೈತ್ರಿಯ ಅಭ್ಯರ್ಥಿಯಾಗಿ ತುಮಕೂರಿನಿಂದ ಸ್ಪರ್ಧಿಸಿದ್ದ ದೇವೇಗೌಡರು ಸೋಲು ಕಂಡಿದ್ದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಎ.ಮಂಜು ಅವರನ್ನು ಪ್ರಬಲವಾಗಿ ಎದುರಿಸಿದ ಪ್ರಜ್ವಲ್ ರೇವಣ್ಣ 6,76,606 ಮತಗಳನ್ನು ಪಡೆದು 1,00,462 ಅಂತರದಲ್ಲಿ ಗೆಲುವು ಸಾಧಿಸಿದ್ದರು. ಎ.ಮಂಜು ಅವರು 5,35,282 ಮತಗಳನ್ನು ಗಳಿಸಿದ್ದರು.

1999ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಜಿ.ಪುಟ್ಟಸ್ವಾಮಿ ಗೌಡ ಅವರು ಗೆಲುವು ಸಾಧಿಸಿದ್ದರು. ಮಾಜಿ ಸಚಿವರೂ ಆದ ಪುಟ್ಟಸ್ವಾಮಿಗೌಡ ಅವರ ಮೊಮ್ಮಗ ಶ್ರೇಯಸ್ ಪಟೇಲ್‌ ಅವರು ಕಾಂಗ್ರೆಸ್‌ನಿಂದ ಈ ಬಾರಿ ಕಣಕ್ಕೆ ಇಳಿಯುತ್ತಿದ್ದಾರೆ.

1957ರಿಂದ ಈವರೆಗಿನ ಸಾರ್ವತ್ರಿಕ ಚುನಾವಣೆಯಲ್ಲಿ ಎಚ್‌.ಸಿದ್ದನಂಜಪ್ಪ, ಎನ್‌.ಶಿವಪ್ಪ, ಆರ್‌.ಎಚ್‌.ಲಕ್ಷ್ಮಣ್‌, ಎಸ್.ನಂಜೇಶ ಗೌಡ, ಎಚ್.ಎನ್.ನಂಜೇಗೌಡ, ಎಚ್.ಸಿ.ಶ್ರೀಕಂಠಯ್ಯ, ಎಚ್.ಡಿ.ದೇವೇಗೌಡ, ರುದ್ರೇಶ್‌ಗೌಡ, ಜಿ.ಪುಟ್ಟಸ್ವಾಮಿಗೌಡ, ಪ್ರಜ್ವಲ್ ರೇವಣ್ಣ ಅವರು ಈವರೆಗೆ ಹಾಸನ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ವಿರುದ್ಧ ಹೊಳೆನರಸೀಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ 31 ವರ್ಷದ ಶ್ರೇಯಸ್ ಪಟೇಲ್‌ ಅವರು, ರೇವಣ್ಣ ಅವರಿಗೆ ನಡುಕ ಹುಟ್ಟಿಸಿದ್ದರು. ಕೇವಲ 3152 ಮತಗಳ ಅಂತರದಲ್ಲಿ ಸೋತಿದ್ದ ಶ್ರೇಯಸ್ ಅವರಿಗೆ ಕಾಂಗ್ರೆಸ್‌ ಈ ಬಾರಿ ಹಾಸನ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಸಿದೆ. ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣನವರಿಗೆ ಟಿಕೆಟ್ ಸಿಕ್ಕಲ್ಲಿ ಈ ಸಲದ ಹಾಸನ ಚುನಾವಣೆ ರೋಚಕವಾಗುವುದಂತೂ ಖಚಿತ.

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗರೇ ಮೆಜಾರಿಟಿ. ನಂತರದಲ್ಲಿ ಪರಿಶಿಷ್ಟ ಜಾತಿಗಳು, ಲಿಂಗಾಯತರು, ಕುರುಬರು, ಮುಸ್ಲಿಮರು ಹಾಗೂ ಇತರ ಹಿಂದುಳಿದ ಜಾತಿಯವರು ಇದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X