ಹಾಸನ | ರಾಜಕಾರಣದಲ್ಲಿ ಮೌಲ್ಯವಿಲ್ಲ, ವ್ಯಾಪಾರವೇ ಎಲ್ಲ: ಎ.ಟಿ ರಾಮಸ್ವಾಮಿ

Date:

  • ನಾನು ಟಿಕೆಟ್ ಕೇಳಿರಲಿಲ್ಲ, ಕೈ ತಪ್ಪಿದೆ ಎನ್ನುವುದು ಅಪಪ್ರಚಾರ
  • ಪ್ರಜಾಪ್ರಭುತ್ವ ಬಲಾಢ್ಯರ ಪಾಲಾಗುತ್ತಿದೆ, ಯೋಗ್ಯರಿಗಿದು ಕಾಲವಲ್ಲ

ಹಾಸನ ವಿಧಾನಸಭೆ ಚುನಾವಣೆಯಲ್ಲಿ ನಾನು ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿರಲಿಲ್ಲ. ನನಗೆ ಟಿಕೆಟ್ ಕೈತಪ್ಪಿದೆ ಎಂಬ ಅಪಪ್ರಚಾರಕ್ಕೆ ಯಾರೂ ಕಿವಿಗೊಡಬೇಡಿ ಎಂದು ಮಾಜಿ ಶಾಸಕ ಎ.ಟಿ ರಾಮಸ್ವಾಮಿ ಬೆಂಬಲಿಗರಲ್ಲಿ ಮನವಿ ಮಾಡಿದ್ದಾರೆ.

- Advertisement -

ಹಾಸನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ನಾನು ಬಿಜೆಪಿ ಸೇರಿದ್ದು ಯಾವುದೇ ಅಧಿಕಾರದ ಆಸೆಗಾಗಿ ಅಲ್ಲವೆಂದು ಈಗಾಗಲೇ ಎಲ್ಲೆಡೆ ಹೇಳಿದ್ದೇನೆ. ನಾನು ಟಿಕೆಟ್ ಅಪೇಕ್ಷಿತ ಅಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೆ. ವರಿಷ್ಠರೂ ಕೂಡ ಬಹಳ ಒತ್ತಡ ಹಾಕಿ ಅಭ್ಯರ್ಥಿ ಆಗಲು ಹೇಳಿದ್ದರು. ನಾನು ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡುವುದಿಲ್ಲವೆಂದು ಅವರಿಗೆ ಹೇಳಿದ್ದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ನಾನು ಮಾತಿನಂತೆ ನಡೆದುಕೊಂಡಿದ್ದೇನೆ. ರಾಮಸ್ವಾಮಿ ಅವರು ಬಿಜೆಪಿಗೆ ಹೋದರೂ ಟಿಕೆಟ್ ಸಿಗಲಿಲ್ಲ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದ ಮಾತು. ನಾನು ಆಡಿದ ಮಾತಿನಂತೆ ನಡೆದುಕೊಂಡಿದ್ದೇನೆ. ನನ್ನ ನಡೆಯಿಂದ ಯಾರಿಗಾದರೂ ಬೇಸರವಾಗಿದ್ದರೆ ಕ್ಷಮಿಸಿ” ಎಂದು ಮನವಿ ಮಾಡಿದರು.

“ಈಗ ರಾಜಕಾರಣದಲ್ಲಿ ಮೌಲ್ಯ ಇಲ್ಲದಂತಾಗಿದೆ. ರಾಜಕೀಯ ಈಗ ವ್ಯಾಪಾರ ಆಗಿದೆ. ಕೆಲವರು 50 ಕೋಟಿ ರೂಪಾಯಿವರೆಗೂ ಬಂಡವಾಳ ಹೂಡಲು ಹೊರಟಿದ್ದಾರೆ. ಬಂಡವಾಳ ಹೂಡಿದ ಮೇಲೆ ಅದನ್ನು ಹಿಂಪಡೆಯಬೇಕಾಗುತ್ತದೆ. ಹಾಗಿದ್ದಲ್ಲಿ ಒಳ್ಳೆಯವರು, ಪ್ರಾಮಾಣಿಕರು, ಯೋಗ್ಯರು ರಾಜಕಾರಣಕ್ಕೆ ಬರಲು ಹೇಗೆ ಸಾಧ್ಯವಾಗುತ್ತದೆ?” ಎಂದು ಪ್ರಶ್ನಿಸಿದರು.

“ಈ ರಾಜಕೀಯ ವ್ಯವಸ್ಥೆ ಬದಲಾಗಬೇಕಿದೆ. ರಾಜಕಾರಣದಲ್ಲಿ ಮೌಲ್ಯ ಉಳಿಸಬೇಕಾಗಿದೆ. ಚುನಾವಣಾ ಆಯೋಗ ಕೂಡ ಕಟ್ಟು ನಿಟ್ಟಿನ ಕ್ರಮ ವಹಿಸಬೇಕಿದೆ. ಇಲ್ಲವಾದರೆ ಪ್ರಜಾಪ್ರಭುತ್ವ ಬಲಾಢ್ಯರ ಪಾಲಾಗುತ್ತದೆ. ಸತ್ಯ, ಧರ್ಮ, ನ್ಯಾಯದ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಅದರೆ, ಆಳವಡಿಸಿಕೊಳ್ಳಲು ಹಿಂದೆ ಸರಿಯುತ್ತಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮಗಳು ಬಿಜೆಪಿ ಸೇರಿದ್ದು ಎದೆಗೆ ಚೂರಿ ಹಾಕಿದಂಗಾಗಿದೆ: ಕಾಗೋಡು ತಿಮ್ಮಪ್ಪ ಬೇಸರ

“ಮಾಜಿ ಸಿಎಂ ಯಡಿಯೂರಪ್ಪ, ಶೋಭ ಕರಂದ್ಲಾಜೆ ಅವರೆಲ್ಲಾ ನನಗೆ ಟಿಕೆಟ್‌ ಕೊಡುತ್ತೇವೆಂದು ಹೇಳಿದ್ದರು. ನನಗೆ ಅಗತ್ಯವಿಲ್ಲ. ʼಕೆಲವರು ನನಗೆ ಕೊಡಿ, ಮಕ್ಕಳಿಗೂ ಕೊಡಿ ಎಂದು ಕೇಳ್ತಾರೆ, ಆದರೆ, ನಿಮ್ಮದು ವಿಶೇಷ ಸ್ವಭಾವʼವೆಂದಿದ್ದರು” ಎಂದರು.

“ನಾನು ರಾಜಕೀಯದಿಂದ ತಟಸ್ಥನಾಗಿರಬೇಕು ಎನ್ನೋ ಭಾವನೆ ಇತ್ತು. ಆದರೆ, ನನ್ನ ಹಿತೈಷಿಗಳು, ಬೆಂಬಲಿಗರ ರಕ್ಷಣೆಗಾಗಿ ಕೆಲಸ ಮಾಡಲು ಒಂದು ಪಕ್ಷ ಬೇಕೆಂದು ಈ ನಿರ್ಧಾರ ಕೈಗೊಂಡಿದ್ದೇನೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಫ್ರೀಡಂ ಪಾರ್ಕ್ ಸಮಗ್ರ ಅಭಿವೃದ್ಧಿಗೆ ಬಿಬಿಎಂಪಿ ಆಯುಕ್ತ ರಾಜೇಂದ್ರ ಚೋಳನ್ ಸೂಚನೆ

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸ್ವಾತಂತ್ರ್ಯ ಉದ್ಯಾನವನ (ಫ್ರೀಡಂ ಪಾರ್ಕ್)...

ಅರಕಲಗೂಡು ದಸರಾ ಮಹೋತ್ಸವ: ಬೂಕರ್ ಪ್ರಶಸ್ತಿ ವಿಜೇತ ಅನುವಾದಕಿ ದೀಪಾ ಬಸ್ತಿಗೆ ಆಹ್ವಾನ

ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ಪ್ರತಿವರ್ಷ ನಡೆಯುವ ಅದ್ಧೂರಿ ದಸರಾ ಮಹೋತ್ಸವ...

ಚಿತ್ರದುರ್ಗ | ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ವಿಸಿ: ಜಿಲ್ಲಾಧಿಕಾರಿ ವೆಂಕಟೇಶ್, ಅಧಿಕಾರಿಗಳು ಭಾಗಿ

ಭಾರತ ಚುನಾವಣಾ ಆಯೋಗದ ನಿರ್ದೇಶನದ ಅನ್ವಯ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಮತದಾರರ...