ಬ್ಯಾನರ್ ವಿಚಾರವಾಗಿ ಪೌರ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಪೀರಪ್ಪ ಶಾಂತವ್ವ ಶಿರಬಾಡಗಿ ದೂರು ನೀಡಿದ್ದು, ದೂರು ನೀಡಿದ್ದು, ಆರೋಪಿಗಳಾದ ಶಾಂತಪ್ಪ ಕೊರವರ, ಅರ್ಜುನ ಕೊರವರ, ಪ್ರಥಮ, ಫಕ್ಕೀರೇಶ ಕೊರವರ, ಮುಕೇಶ್ ಪಟೇಲ್, ಪ್ರಜ್ವಲ್ ಅಡವಿಮಠ ಹಾಗೂ ಗಣೇಶ ಭಜಂತ್ರಿ ಬಂಧಿತ ಆರೋಪಿಗಳು ಬಂಧಿಸಿದ್ದಾರೆ. ಆದರೆ ಪ್ರಕರಣದ ಮೊದಲ ಆರೋಪಿ ಅಕ್ಷತಾಳನ್ನು ಬಂಧಿಸಿಲ್ಲ.
ಆಗಿದ್ದೇನು? ಪತ್ರಿಕಾ ವರದಿ ಪ್ರಕಾರ “ಕೊರವರ ಓಣಿಯ ವೃತ್ತದಲ್ಲಿ ಅಕ್ರಮವಾಗಿ ಆರೋಪಿ ಶಾಂತು ಜನ್ಮದಿನದ ಶುಭಾಷಯ ಕೋರುವ ಬ್ಯಾನರ್ ಹಾಕಲಾಗಿತ್ತು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಪೌರಾಯುಕ್ತ ಗಂಗಾಧರ ಬೆಲ್ಲದ ಅವರು ಬ್ಯಾನರ್ ತೆರವುಗೊಳಿಸಲು ಸಿಬ್ಬಂದಿ ರಂಗಪ್ಪ ಹೆರ್ಕಲ್ ಅವರಿಗೆ ಸೂಚಿಸಿದ್ದರು. ಬ್ಯಾನರ್ ತೆರವುಗೊಳಿಸಲು ರಂಗಪ್ಪ ಅವರು ಸ್ಥಳಕ್ಕೆ ಹೋದಾಗ ಆರೋಪಿ ಕೆ.ಸಿ.ಅಕ್ಷತಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಬಳಿಕ, ರಂಗಪ್ಪ ಸ್ಥಳದಿಂದ ಹೊರಟು ನಗರಸಭೆಗೆ ಬಂದಿದ್ದರು.
ಕ್ರಿಕೆಟ್ ಆಟವಾಡುತ್ತಿದ್ದ ಕೆಲ ಆರೋಪಿಗಳು, ಇತರೆ ಆರೋಪಿಗಳ ಜೊತೆ ಸೇರಿ ಬ್ಯಾಟ್‌ಗಳ ಸಮೇತ ನಗರಸಭೆ ಆವರಣಕ್ಕೆ ನುಗ್ಗಿದ್ದರು. ಸ್ಥಳದಲ್ಲಿದ್ದ ಪೌರಕಾರ್ಮಿಕರ ಜೊತೆ ಜಗಳ ತೆಗೆದಿದ್ದರು. ಗುತ್ತಿಗೆ ಪೌರಕಾರ್ಮಿಕರಾದ ಪೀರಪ್ಪ ಹಾಗೂ ಕಾಂತೇಶ್ ಅವರಿಗೆ ಹೊಡೆದು ಜೀವ ಬೆದರಿಕೆ ಹಾಕಿದ್ದರು.
ಪ್ರತಿಭಟನೆ : ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನ ಬಂಧಿಸಬೇಕು ಎಂದು ಒತ್ತಾಯಿಸಿ ನಗರಸಭೆಯ ಪೌರಕಾರ್ಮಿಕರು ಹಾವೇರಿ ಟೌನ್ ಪೊಲೀಸ್ ಠಾಣೆ ಎದುರು ಶನಿವಾರ ಪ್ರತಿಭಟನೆ ನಡೆಸಿದ್ದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಅಂಬೇಡ್ಕರ್ ಚಿಂತನೆಗೆ ಹೊಸ ವೇದಿಕೆ; ಬುದ್ಧವಿಹಾರದಲ್ಲಿ ಗ್ರಂಥಾಲಯ
ನಗರಸಭೆ ಎದುರು ನಡೆದ ಗಲಾಟೆ ಸಂಬಂಧ ತಮ್ಮ ವಿರುದ್ಧ ದೂರು ನೀಡಿದರೆಂಬ ಕಾರಣಕ್ಕೆ ಪೌರ ಕಾರ್ಮಿಕರ ಮೇಲೆ ಶನಿವಾರ ಪುನಃ ಹಲ್ಲೆ ಮಾಡಲಾಗಿದ್ದು, ಈ ಸಂಬಂಧ ಪ್ರತ್ಯೇಕ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ.
.
