ಹಾವೇರಿ | ಬೆಲೆ ಕುಸಿತ; ರಸ್ತೆ ಮೇಲೆ ಹೂವು ಸುರಿದು ರೈತರ ಪ್ರತಿಭಟನೆ

Date:

ಹೂವಿನ ಬೆಲೆ ಕುಸಿತ ಹಾಗೂ ವ್ಯಾಪಾರಿಗಳು ಬೇರೆ ಜಿಲ್ಲೆಯಿಂದ ಹೂವು ಖರೀದಿಸುತ್ತಿದ್ದಾರೆ ಎಂಬ ಕಾರಣಕ್ಕೆ ಆಕ್ರೋಶಗೊಂಡ ಸ್ಥಳೀಯ ಹೂವು ಬೆಳೆಗಾರರು ಜಿಲ್ಲಾಸ್ಪತ್ರೆ ಎದುರು ಸೋಮವಾರ(ಅ.30) ರಸ್ತೆ ಮೇಲೆ ಹೂವು ಸುರಿದು ಪ್ರತಿಭಟಿಸಿದ್ದಾರೆ.

- Advertisement -

ಸೂಕ್ತ ಬೆಲೆ ಸಿಗದ ಕಾರಣ ಕಣ್ಣೀರು ಸುರಿಸುತ್ತಿದ್ದು, ಜಿಲ್ಲೆಯಲ್ಲೇ ರೈತರ ಹೂವು ಇದ್ದರೂ ದಲ್ಲಾಳಿಗಳು ಅವರ ಲಾಭಕ್ಕೋಸ್ಕರ ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ವಿಜಯಪುರದಿಂದ ಹೂವು ಖರೀದಿಸುತ್ತಿದ್ದಾರೆ. ಇದರಿಂದ ಸ್ಥಳೀಯ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬರದ ನಡುವೆಯೂ ಕಷ್ಟಪಟ್ಟು ಬೆಳೆದ ಹೂವು ಮಾರಾಟವಾಗದೇ ಬೀದಿ ಪಾಲಾಗುವಂತಾಗಿದೆ ಎಂದು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕೇವಲ 10, 15 ರೂಪಾಯಿಗೆ ಕೆಜಿ ಕೊಟ್ಟರೂ ಹೂವು ಖರೀದಿಸಲು ವ್ಯಾಪಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಜಿಲ್ಲೆಯ ರೈತರಿಗೆ ಅನ್ಯಾಯ ಆಗಲು ಬಿಡಲ್ಲ. ಸೂಕ್ತ ಬೆಲೆಗೆ ಸ್ಥಳೀಯ ರೈತರ ಮಾಲು ಮೊದಲು ಖರೀದಿಸಬೇಕು. ಈ ಬಗ್ಗೆ ಸರ್ಕಾರ ಗಮನಹರಿಸಬೇಕು. ಇಲ್ಲದಿದ್ದರೆ ಹೋರಾಟ ಚುರುಕುಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

ಕಳೆದ ವರ್ಷ ಸೇವಂತಿ ಹೂವು ಕೆಜಿಗೆ 100, 200 ರೂ.ಗೆ ಮಾರಾಟವಾಗಿತ್ತು. ಹಾಗಾಗಿ, ಒಂದು ಎಕರೆ ಹೂವು ಬೆಳೆಯುವ ರೈತರು ಮೂರು, ಐದು ಎಕರೆ ಹೂವು ಬೆಳೆದಿದ್ದಾರೆ. ಆದ್ದರಿಂದ ಈ ಸಲ ಬೆಲೆ ಕಡಿಮೆಯಾಗಿದೆ ಎನ್ನುತ್ತಿದ್ದಾರೆ ಹೂವಿನ ವ್ಯಾಪಾರಿಗಳು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...