ಹಾವೇರಿ ತಾಲೂಕಿನ ಕುರುಬಗೊಂಡ ಗ್ರಾಮದ ಯೂನಿಯನ್ ಬ್ಯಾಂಕ್ ನಲ್ಲಿ ಲಕ್ಷಾಂತರ ನಗದು ಮತ್ತು ಚಿನ್ನಾಭರಣ ಗ್ರಾಹಕರಿಗೆ ವಂಚಿಸಿದ ಆರೋಪದ ಮೇಲೆ, ಬ್ಯಾಂಕಿನ ಸಹಾಯಕ ವ್ಯವಸ್ಥಾಪಕಿ ಅರ್ಚನಾ ಬೆಟಿಗೇರಿಯನ್ನು ಹಾವೇರಿಯ ಸಿಇಎನ್ ಅಪರಾಧ ಪೊಲೀಸ್ ಬಂಧಿಸಿದ್ದಾರೆ.
ಬ್ಯಾಂಕಿನಲ್ಲಿ ನಡೆದಿರುವ ಅವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಸಹಾಯಕ ವ್ಯವಸ್ಥಾಪಕ ಅರ್ಚನಾ ಬೆಟಗೇರಿ, ದಿನಗೂಲಿ ಕೆಲಸಗಾರ ಶಾಂತಪ್ಪ ಎಲಗಚ್ಚ, ಬಿಜಿನೆಸ್ ಕರೆಸ್ಪಾಂಡೆಂಟ್ ಪ್ರವೀಣ್ ಚಿಕ್ಕಲಿಂಗದಹಳ್ಳಿ ಈ ಮೂವರ ವಿರುದ್ಧ, ಬ್ಯಾಂಕ್‌ನ ಶಾಖ ವ್ಯವಸ್ಥಾಪಕ ರವಿರಾಜ್ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಕುರುಬಗೊಂಡ ಶಾಖೆಯ ಯೂನಿಯನ್ ಬ್ಯಾಂಕ್ ನಲ್ಲಿ ಅರ್ಚನಾ ಬೆಟಿಗೇರಿ ಕಳೆದ ಎರಡುವರೆ ವರ್ಷಗಳಿಂದ ಪ್ರಭಾರ ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸ್ವಂತ ಲಾಭಕ್ಕಾಗಿ ಗ್ರಾಹಕರಿಗೆ ಸಂಬಂಧಿಸಿದ 1,12,78,920ರೂ. ನಗದು ಮತ್ತು 49,47,792ರೂ. ಮೌಲ್ಯದ ಚಿನ್ನಾಭರಣ ಸೇರಿ ಒಟ್ಟು 1.62ರೂ. ಕೋಟಿಯನ್ನ ವಂಚಸಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.
ಬ್ಯಾಂಕಿಗೆ ಹಣ ಡಿಪಾಸಿಟ್ ಮಾಡಲು ಬಂದಿದ್ದ ಗ್ರಾಹಕರಿಂದ ಒಟ್ಟು 81,45,420 ಪಡೆದುಕೊಂಡು ನಗದು ರಸೀದಿಗಳಿಗೆ ಮತ್ತು ಭದ್ರತಾ ಪತ್ರಗಳಿಗೆ ಸಹಿ ಮಾಡಿ ಸೀಲು ಹಾಕಿ ಗ್ರಾಹಕರಿಗೆ ಕೊಟ್ಟಿದ್ದಾರೆ. ನಂತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡದೆ, ಅರ್ಚನಾ ತಮ್ಮ ಸ್ವಂತಕ್ಕೆ ಉಪಯೋಗಿಸಿಕೊಂಡಿರುವ ಆರೋಪ ಅವರ ಮೇಲಿದೆ.