- ನಾಮಪತ್ರ ಸಲ್ಲಿಸಲು ಕುಟುಂಬ ಸಮೇತ ತೆರಳಿದ ರೇವಣ್ಣ
- ಹೊಳೆನರಸೀಪುರ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ
ಶಾಸಕ ಹೆಚ್.ಡಿ ರೇವಣ್ಣ ಅವರು ಎಪ್ರಿಲ್ 17ರ ಬೆಳಿಗ್ಗೆ ಕುಟುಂಬ ಸಮೇತರಾಗಿ ತೆರಳಿ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.
ಹೊಳೆನರಸೀಪುರದಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರ ಸಮ್ಮುಖದಲ್ಲಿ ಅಪಾರ ಜನಬೆಂಬಲದೊಂದಿಗೆ ರೇವಣ್ಣ ಬೃಹತ್ ಮೆರವಣಿಗೆ ನಡೆಸಿದರು. ನಗರದ ಕೋಟೆ ಮುಖ್ಯ ರಸ್ತೆಯ ಮೂಲಕ ಜಯಚಾಮರಾಜೇಂದ್ರ ವೃತ್ತದ ಮಹಾತ್ಮಾ ಗಾಂಧಿಯವರ ಪ್ರತಿಮೆ, ಅಂಬೇಡ್ಕರ್ ವೃತ್ತದ ಮೂಲಕ ಸಾಗಿ, ಮಧ್ಯಾಹ್ನ 12-15ಕ್ಕೆ ಹೊಳೆನರಸಿಪುರ ತಾಲೂಕು ಕಚೇರಿಗೆ ತೆರಳಿದ ಅವರು ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಸುದೀಪ್ ಆಯ್ತು ಈಗ ದರ್ಶನ್: ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆಗೆ ಜೊತೆಯಾಗಲಿರುವ ನಟ
ಪ್ರಸ್ತುತ ಸಾಲಿನ ವಿಧಾನಸಭಾ ಚುನಾವಣೆಗೆ ಜೆಡಿಎಸ್‌ನ ಅಧಿಕೃತ ಅಭ್ಯರ್ಥಿಯಾಗಿ ಎಚ್.ಡಿ ರೇವಣ್ಣ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಹೆಚ್.ಎಸ್. ಪುಟ್ಟಸೋಮಪ್ಪ ಮಾಹಿತಿ ನೀಡಿದ್ದಾರೆ.