ಹೊಳೆನರಸೀಪುರದಲ್ಲಿ ದೊಡ್ಡ ರೇವಣ್ಣ, ರಾಮದುರ್ಗದಲ್ಲಿ ಚಿಕ್ಕರೇವಣ್ಣ ಮುನ್ನಡೆ

Date:

Advertisements

ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ರೋಚಕ ಘಟ್ಟ ತಿರುವು ಪಡೆಯುತ್ತಿದ್ದು, ಪ್ರಸ್ತುತ 224 ಕ್ಷೇತ್ರಗಳ ಮತ ಎಣಿಕೆಯಲ್ಲಿ ಕಾಂಗ್ರೆಸ್ 115, ಬಿಜೆಪಿ 76, ಜೆಡಿಎಸ್ 28 ಹಾಗೂ ಇತರರು 6 ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಬಿಜೆಪಿಯ 10 ಸಚಿವರು ಭಾರಿ ಹಿನ್ನಡೆಯಲ್ಲಿದ್ದಾರೆ.

ಹಾಸನದ ಹೊಳೆನರಸೀಪುರ ಕ್ಷೇತ್ರದಲ್ಲಿ ಜೆಡಿಎಸ್‌ನ ಹೆಚ್‌ ಡಿ ರೇವಣ್ಣ ಮುನ್ನಡೆ ಕಾಯ್ದುಕೊಂಡಿದ್ದರೆ, ಬೆಳಗಾವಿಯ ರಾಮದುರ್ಗದಲ್ಲಿ ಬಿಜೆಪಿಯ ಚಿಕ್ಕರೇವಣ್ಣ ಮುನ್ನಡೆಯಲ್ಲಿದ್ದಾರೆ.

ಬಿಜೆಪಿಯಿಂದ ಕಾಂಗ್ರೆಸ್‌ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಕೂಡ 10 ಸಾವಿರಕ್ಕೂ ಅಧಿಕ ಮತಗಳ ಹಿನ್ನಡೆಯಲ್ಲಿದ್ದಾರೆ. ಬಳ್ಳಾರಿ ಗ್ರಾಮೀಣದಲ್ಲಿ ಬಿ ಶ್ರೀರಾಮುಲು 5 ಸಾವಿರ ಮತಗಳ ಹಿನ್ನಡೆಯಲ್ಲಿದ್ದಾರೆ.

Advertisements

ಸೊರಬದಲ್ಲಿ ಕಾಂಗ್ರೆಸ್‌ನ ಮಧು ಬಂಗಾರಪ್ಪ, ಶಿಕಾರಿಪುರದಲ್ಲಿ ಬಿಜೆಪಿಯ ಬಿ ವೈ ವಿಜಯೇಂದ್ರ, ಅಥಣಿಯಲ್ಲಿ ಲಕ್ಷಣ್ ಸವದಿ, ಚಿತ್ತಾಪುರದಲ್ಲಿ ಪ್ರಿಯಾಂಕ್‌ ಖರ್ಗೆ, ಜೇವರ್ಗಿಯಲ್ಲಿ ಅಜಯ್‌ ಧರಂಸಿಂಗ್, ಚನ್ನಪಟ್ಟಣದಲ್ಲಿ ಹೆಚ್‌ ಡಿ ಕುಮಾರಸ್ವಾಮಿ ಮುನ್ನಡೆ ಪಡೆದಿದ್ದಾರೆ.

ವಿಜಯಪುರ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ್‌ 9132 ಮತಗಳ ಮುನ್ನಡೆ ಸಾಧಿಸಿದ್ದಾರೆ. ಹಾಗೆಯೇ ಬಬಲೇಶ್ವರದಲ್ಲಿ ಕಾಂಗ್ರೆಸ್‌ನ ಎಂ ಬಿ ಪಾಟೀಲ ಅವರು 3873 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X