ಹೊಳೆನರಸೀಪುರ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ತವರು ಕ್ಷೇತ್ರ. ಹಾಗಾಗಿ ಈ ಕ್ಷೇತ್ರವು ಹಲವು ದಶಕಗಳಿಂದ ಜೆಡಿಎಸ್ ಭದ್ರಕೋಟೆಯಾಗಿಯೇ ಉಳಿದಿದೆ. ಪ್ರತಿ ಚುನಾವಣೆಯಲ್ಲಿ ಸಾಂಪ್ರದಾಯಿಕ ಎದುರಾಳಿಯಾಗಿರುವ ಕಾಂಗ್ರೆಸ್ ಇಲ್ಲಿ ಗೆಲವು ಸಾಧಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಲೇ ಇದೆ.
ಹಾಸನ ಜಿಲ್ಲೆ ಹೊಳೆನರಸೀಪುರ ಕ್ಷೇತ್ರವು ಜೆಡಿಎಸ್ ಅಭ್ಯರ್ಥಿ ಮತ್ತು ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಭದ್ರ ಕೋಟೆಯಾಗಿದೆ. ಈ ಕ್ಷೇತ್ರದಲ್ಲಿ 1962 ರಿಂದ 1985 ರವರೆಗೆ ಮಾಜಿ ಪ್ರಧಾನಿ ದೇವೇಗೌಡರು ಎರಡು ಬಾರಿ ಪಕ್ಷೇತರ, ಒಂದು ಬಾರಿ ಕಾಂಗ್ರೆಸ್, ಮೂರು ಬಾರಿ ಜೆಡಿಎಸ್‌ನಿಂದ ಸತತ ಆರು ಬಾರಿ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಿಂದ ಗೆದ್ದು ವಿಧಾನಸೌಧದ ಮೆಟ್ಟಿಲೇರಿದ್ದಾರೆ.
1994ರ ಚುನಾವಣೆಯಲ್ಲಿ ಎಚ್ ಡಿ ರೇವಣ್ಣ ಜೆಡಿಎಸ್ ಅಭ್ಯರ್ಥಿಯಾಗಿದ್ದರೆ, ಜಿ ಪುಟ್ಟಸ್ವಾಮಿಗೌಡ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಎಚ್ ಡಿ ರೇವಣ್ಣ ಅವರು ಇವರ ವಿರುದ್ಧ ಕೇವಲ 122 ಮತಗಳ ಅಂತರದಿಂದ ಪ್ರಯಾಸದ ಗೆಲವು ಸಾಧಿಸಿದ್ದರು.
2004ರಿಂದ 2018ರವರೆಗೆ ಎಚ್ ರೇವಣ್ಣ ಸತತವಾಗಿ ಜೆಡಿಎಸ್ ಗೆಲವು ಸಾಧಿಸುತ್ತಲೇ ಬಂದಿದ್ದಾರೆ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರು ಬದಲಾವಣೆ ಬಯಸಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ಪುರಸಭೆಯ ಮಾಜಿ ಅಧ್ಯಕ್ಷ ಎಚ್ ವಿ ಪುಟ್ಟರಾಜು ಮತ್ತು ಓಲೆ ಕುಮಾರ್ ಅವರು ಜೆಡಿಎಸ್ ಪ್ರಮುಖ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದು ಜೆಡಿಎಸ್‌ಗೆ ಕೊಂಚ ಹಿನ್ನಡೆಯಾಗುವ ಸಾಧ್ಯತೆ ಇದೆ ಎನ್ನನಾಗಿದೆ. ಇದು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್‌ಗೆ ವರದಾನ ಆಗಲಿದೆ ಎಂಬ ಲೆಕ್ಕಾಚಾರವಿದೆ.
ಈ ಸುದ್ದಿ ಓದಿದ್ದೀರಾ? ಹಾಸನ | ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಅರ್ಚನಾ
ರಾಜ್ಯದಲ್ಲಿ ಜೆಡಿಎಸ್ ಬಹುಮತದಿಂದ ಅಧಿಕಾರಕ್ಕೆ ಬರುವುದು ಕಷ್ಟವಿದ್ದು, ಮತ್ತೊಂದೆಡೆ ಬಿಜೆಪಿ ವಿರುದ್ಧದ ಆಡಳಿತ ವಿರೋಧಿ ಅಲೆ ಕಾಂಗ್ರೆಸ್ ಈ ಬಾರಿ ಅನುಕೂಲ ಉಂಟಾಗಲಿದೆ ಎಂಬ ಕಾರಣಕ್ಕೆ ಜೆಡಿಎಸ್ ಮುಖಂಡರು ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿರುವ ದೇವರಾಜೇಗೌಡ, ಹಿಂದೆ ಕಾಂಗ್ರೆಸ್‌ನಲ್ಲಿಯೇ ಇದ್ದವರು. ಹೈಕೋರ್ಟ್ ವಕೀಲಾರಾಗಿರುವ ಇವರು ಕಳೆದ ಎರಡು ವರ್ಷಗಳಿಂದಲೇ ತಂಡಕಟ್ಟಿಕೊಂಡು ಹೊಳೆನರಸೀಪುರದಲ್ಲಿ ಸುತ್ತುತ್ತಿದ್ದಾರೆ. ಆದರೆ, ಹೊಳೆನರಸೀಪುರದಲ್ಲಿ ಈವರೆಗೆ ಒಂದು ಬಾರಿಯೂ ಬಿಜೆಪಿ ಖಾತೆ ತೆರದಿಲ್ಲ. ಹಾಘಾಗಿ ಈ ಬಾರಿಯೂ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆಯೇ ನೇರ ಹಣಾಹಣಿ ನಡೆಯುವ ಸಾಧ್ಯತೆ ಹೆಚ್ಚು.