ಚುನಾವಣೆ 2023 | ಕಣದಲ್ಲಿದ್ದಾರೆ ಕ್ರಿಮಿನಲ್ ಕೇಸುಗಳ ನೂರಾರು ಆಪಾದಿತರು           

Date:

ಈ ಬಾರಿಯ ಚುನಾವಣಾ ಕಣದಲ್ಲಿರುವ ನೂರಾರು ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್‌ಗಳಲ್ಲೇ ಈ ಕುರಿತ ವಿವರಗಳಿವೆ.

- Advertisement -

ಕರ್ನಾಟಕ ರಾಜ್ಯ ಚುನಾವಣಾ ಕಣ ದಿನೇ ದಿನೆ ರಂಗೇರುತ್ತಿದೆ, ಅಭ್ಯರ್ಥಿಗಳ ಪ್ರಚಾರ ಬಿರುಸು ಪಡೆದುಕೊಳ್ಳುತ್ತಿದೆ. ಅಖಾಡದಲ್ಲಿ ಬೈಗುಳಗಳ ಅಬ್ಬರ, ಚಾಟಿಯೇಟುಗಳ ಜೋರು ಸ್ವರ ಕೇಳಿಬರುತ್ತಿದೆ. ಇದರ ನಡುವೆಯೇ ಜನರು ಬೆಚ್ಚಿಬೀಳುವಂಥ ಮಾಹಿತಿಯನ್ನು ಈದಿನ.ಕಾಮ್ ಜನರೆದುರು ಇಡುತ್ತಿದೆ. ಈ ಬಾರಿಯ ಚುನಾವಣಾ ಕಣದಲ್ಲಿರುವ ನೂರಾರು ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಅಭ್ಯರ್ಥಿಗಳ ಅಫಿಡವಿಟ್‌ಗಳಲ್ಲೇ ಈ ಕುರಿತ ವಿವರಗಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕಾಂಗ್ರೆಸ್‌ನ 119 ಮಂದಿ ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ, ಗಂಭೀರವಾದ ಕ್ರಿಮಿನಲ್ ಪ್ರಕರಣ, ವಂಚನೆ ಮತ್ತಿತರ ಪ್ರಕರಣಗಳಿವೆ. ಎರಡನೇ ಸ್ಥಾನದಲ್ಲಿ ಬಿಜೆಪಿ ಇದ್ದು, ಆ ಪಕ್ಷದ 94 ಮಂದಿಯ ವಿರುದ್ಧ ಕ್ರಿಮಿನಲ್ ಮತ್ತಿತರ ಪ್ರಕರಣಗಳಿವೆ. ಇನ್ನು ಜೆಡಿಎಸ್‌ನ 70 ಮಂದಿ ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಕ್ರಿಮಿನಲ್ ಕೇಸುಗಳಿರುವ ಅಭ್ಯರ್ಥಿಗಳ ವಿವರ

ಕಾಂಗ್ರೆಸ್ ಪಕ್ಷದಲ್ಲಿ ಅತಿ ಹೆಚ್ಚು ಪ್ರಕರಣಗಳಿರುವ ಅಭ್ಯರ್ಥಿಗಳು

ಕ್ರಿಮಿನಲ್ ಪ್ರಕರಣ

ಕಾಂಗ್ರೆಸ್‌ನ ಸಿದ್ಧರಾಮಯ್ಯ, ಡಿ ಕೆ ಶಿವಕುಮಾರ್, ಎಂ ಬಿ ಪಾಟೀಲ್, ಪ್ರಿಯಾಂಕ್ ಖರ್ಗೆಯವರಂಥ ಮುಖಂಡರಿಂದ ಹಿಡಿದು ಯುವ ನಾಯಕರವರೆಗೆ ಅನೇಕರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಬಳ್ಳಾರಿಯ ಬಿ ನಾಗೇಂದ್ರ ವಿರುದ್ಧ ನಾಲ್ಕು ಸಿಬಿಐ, 13 ಲೋಕಾಯುಕ್ತ, ಒಂದು ಸಿಐಡಿ ಪ್ರಕರಣಗಳು ಸೇರಿದಂತೆ ಒಟ್ಟು 40 ಪ್ರಕರಣಗಳಿವೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ 19 ಪ್ರಕರಣಗಳಿವೆ; ಅದರಲ್ಲಿ ಸಿಬಿಐ, ಇಡಿ, ಲೋಕಾಯುಕ್ತ ಸೇರಿದಂತೆ ನಾಲ್ಕು ಪ್ರಕರಣಗಳು ಗಂಭೀರ ಸ್ವರೂಪದ್ದಾಗಿವೆ. ಶಿಡ್ಲಘಟ್ಟದ ಬಿ ವಿ ರಾಜೀವ್ ಗೌಡ ಅವರ ವಿರುದ್ಧ 11 ಪ್ರಕರಣಗಳು ದಾಖಲಾಗಿವೆ. ವಿಶೇಷ ಅಂದರೆ, ಕ್ರಿನಿಮಲ್ ಪ್ರಕಣಗಳಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಕಾಂಗ್ರೆಸ್ ಮುಂದಿದೆ. ಅದಕ್ಕೆ ಇರುವ ಹಲವು ಕಾರಣಗಳಲ್ಲಿ ಮೇಕೆದಾಟು ಪಾದಯಾತ್ರೆಯೂ ಒಂದಾಗಿದೆ. ಮೇಕೆದಾಟು ಪಾದಯಾತ್ರೆ ವೇಳೆ ಬಿಜೆಪಿ ಸರ್ಕಾರ ಕಾಂಗ್ರೆಸ್‌ನ 39 ಮುಖಂಡರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗ ಕಾಯ್ದೆ ಅಡಿ ಪ್ರಕರಣಗಳನ್ನು ದಾಖಲಿಸಿತ್ತು. ಈ ಪಟ್ಟಿಯಲ್ಲಿರುವ ಕಾಂಗ್ರೆಸ್‌ನ 18 ಮಂದಿ ವಿರುದ್ಧ ಮೇಕೆದಾಟು ಪಾದಯಾತ್ರೆ ಪ್ರಕರಣ ಹೊರತುಪಡಿಸಿ ಇತರೆ ಯಾವ ಪ್ರಕರಣವೂ ಇಲ್ಲ.

ಬಿಜೆಪಿಯಲ್ಲಿ ಅತಿ ಹೆಚ್ಚು ಪ್ರಕರಣಗಳಿರುವ ಅಭ್ಯರ್ಥಿಗಳು

ಕ್ರಿಮಿನಲ್ ಅರೋಪಿಗಳು

ಇನ್ನು ಕ್ರಿಮಿನಲ್ ಆಪಾದಿತರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಬಿಜೆಪಿ ವಿಚಾರಕ್ಕೆ ಬಂದರೆ, ಚಿತ್ತಾಪುರದ ಮಣಿಕಂಠ ರಾಥೋಡ್ ವಿರುದ್ಧ ಬರೋಬ್ಬರಿ 40 ಕ್ರಿಮಿನಲ್ ಪ್ರಕರಣಗಳಿವೆ. ಅವುಗಳಲ್ಲಿ ಅನ್ನಭಾಗ್ಯ ಅಕ್ಕಿ ಕಳ್ಳಸಾಗಾಣಿಕೆಗೆ ಸಂಬಂಧಿಸಿದ 24 ಪ್ರಕರಣಗಳು, ದ್ವೇಷ ಭಾಷಣದಂಥ ಪ್ರಕರಣ ಸೇರಿವೆ. ಚನ್ನಪಟ್ಟಣದ ಸಿ ಪಿ ಯೋಗೇಶ್ವರ್ ವಿರುದ್ಧ ಜನರಿಗೆ ವಂಚಿಸಿದ ಪ್ರಕರಣ ಸೇರಿದಂತೆ 10 ಪ್ರಕರಣಗಳಿವೆ. ರಾಜರಾಜೇಶ್ವರಿನಗರದ ಮುನಿರತ್ನ ವಿರುದ್ಧ ಎಂಟು ಪ್ರಕರಣಗಳಿದ್ದು, ಅವುಗಳಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ, ದ್ವೇಷ ಭಾಷಣ, ಭ್ರಷ್ಟಾಚಾರ ಪ್ರಕರಣಗಳು ಸೇರಿವೆ.

ಕಂಪ್ಲಿಯ ಟಿ ಎಚ್ ಸುರೇಶ್ ಬಾಬು ವಿರುದ್ಧ ಬಿಹಾರದಲ್ಲಿ ವ್ಯಕ್ತಿಯೊಬ್ಬರನ್ನು ಜೀವ ಬೆದರಿಕೆ ಒಡ್ಡಿ ಸುಲಿಗೆಗೆ ಯತ್ನಿಸಿದ ಪ್ರಕರಣ ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿವೆ. ಬಳ್ಳಾರಿ ನಗರದ ಜಿ ಸೋಮಶೇಖರ ರೆಡ್ಡಿ ವಿರುದ್ಧ ಅಕ್ರಮ ಗಣಿಗಾರಿಕೆ, ಭ್ರಷ್ಟಾಚಾರ, ದ್ವೇಷ ಭಾಷಣದ ಪ್ರಕರಣಗಳು ದಾಖಲಾಗಿವೆ. ಐಎಂಎ ಪ್ರಕರಣದ ಆರೋಪಿ, ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ಆಗಿದ್ದ ಎಲ್ ಸಿ ನಾಗರಾಜು ಅವರು ಸದ್ಯ ಮಧುಗಿರಿಯಿಂದ ಬಿಜೆಪಿ ಅಭ್ಯರ್ಥಿಯಾಗಿದ್ದು, ಅವರ ವಿರುದ್ಧ ಒಟ್ಟು 5 ಕ್ರಿಮಿನಲ್ ಪ್ರಕರಣಗಳಿವೆ. ಹೆಬ್ಬಾಳದ ಜಗದೀಶ್ ಕಟ್ಟಾ ವಿರುದ್ಧ ಕೊಲೆ ಯತ್ನ ಸೇರಿದಂತೆ ಇ.ಡಿ., ಲೋಕಾಯುಕ್ತ ಪ್ರಕರಣಗಳಿವೆ.   

ಜೆಡಿಎಸ್‌ನಲ್ಲಿ ಅತಿ ಹೆಚ್ಚು ಪ್ರಕರಣಗಳಿರುವ ಅಭ್ಯರ್ಥಿಗಳು

ಕ್ರಿಮಿನಲ್ ಪ್ರಕರಣಗಳು
ಜೆಡಿಎಸ್‌ನಲ್ಲಿ ಅತಿ ಹೆಚ್ಚು ಪ್ರಕರಣಗಳಿರುವ ಅಭ್ಯರ್ಥಿ ಕಡೂರಿನ ವೈಎಸ್‌ವಿ ದತ್ತ. ವಿಶೇಷ ಎಂದರೆ, ಅವರ ವಿರುದ್ಧ 41 ಪ್ರಕರಣಗಳಿದ್ದು, ಎಲ್ಲವೂ ಚೆಕ್ ಬೌನ್ಸ್ ಪ್ರಕರಣಗಳಾಗಿವೆ. ಇನ್ನು ದೊಡ್ಡಬಳ್ಳಾಪುರದ ಮುನೇಗೌಡ ವಿರುದ್ಧ ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದ ಪ್ರಕರಣವೂ ಸೇರಿದಂತೆ 8 ಪ್ರಕರಣಗಳಿವೆ. ದೇವದುರ್ಗದ ಕರೆಮ್ಮ ವಿರುದ್ಧ ಏಳು ಪ್ರಕರಣಗಳಿದ್ದು, ಎಲ್ಲವೂ ಅಕ್ರಮ ಕೂಟಕ್ಕೆ ಸಂಬಂಧಿಸಿವೆ.

ಬಳ್ಳಾರಿ ನಗರದ ಅನಿಲ್ ಲಾಡ್ ವಿರುದ್ಧ ಅಕ್ರಮ ಗಣಿಗಾರಿಕೆ ಕುರಿತ ಸಿಬಿಐ ಪ್ರಕರಣ ಸೇರಿದಂತೆ, ಲೋಕಾಯುಕ್ತ ಪ್ರಕರಣಗಳಿವೆ. ಇನ್ನು ಚಿಕ್ಕಪೇಟೆಯ ಇಮ್ರಾನ್ ಪಾಶಾ ವಿರುದ್ಧ ಕೊಲೆ ಪ್ರಕರಣ, ದೊಂಬಿ ಪ್ರಕರಣಗಳು ದಾಖಲಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....