ಚಾಮರಾಜನಗರ | ಮಾಜಿ ಸಿಎಂಗೆ ಮುಜುಗರ ಆಗಬಾರದೆಂದು ಸಹಿಸಿಕೊಂಡಿದ್ದೇನೆ: ವಿ ಸೋಮಣ್ಣ

Date:

  • ನಿಜಲಿಂಗಪ್ಪ, ದೇವರಾಜ ಅರಸುಗಿಂತ ಸಿದ್ದರಾಮಯ್ಯ ದೊಡ್ಡವರಲ್ಲ
  • ಪ್ರಚಾರಕ್ಕೆ ಹೋದಾಗ ರಸ್ತೆಗೆ ಅಡ್ಡಲಾಗಿ ನೊಗ ಇಡುತ್ತಾರೆಂದು ಬೇಸರ

ವರುಣ ಕ್ಷೇತ್ರದಲ್ಲಿ ಒಂದು ದಿನ ಅಲ್ಲ, ಪ್ರತಿದಿನವೂ ಪ್ರಚಾರಕ್ಕೆ ಅಡ್ಡಿಪಡಿಸ್ತಿದ್ದಾರೆ. ಅವರು ಹತಾಶರಾಗಿರುವಂತೆ ಕಾಣುತ್ತಾರೆ. ರಾಜ್ಯದ ಮಾಜಿ ಮುಖ್ಯಮಂತ್ರಿಗೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ಸಹಿಸಿಕೊಂಡಿದ್ದೇನೆ. ಅರ್ಥ ಮಾಡಿಕೊಂಡಿಲ್ಲ ಎಂದರೆ ಹೇಗೆ ಎಂದು ಸಿದ್ದರಾಮಯ್ಯ ವಿರುದ್ಧ ಸಚಿವ ವಿ ಸೋಮಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -

ಚಾಮರಾಜನಗರದ ಉಗನೇಯ್ಯನಹುಂಡಿಯಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ವರುಣ ಕ್ಷೇತ್ರದಲ್ಲಿ ಪ್ರಚಾರಕ್ಕೆ ಅಡ್ಡಿಯಾಗುತ್ತಿರುವ ಬಗ್ಗೆ ಸುದ್ದಿಗಾರರಿಗೆ ಸೋಮಣ್ಣ ಮಾತನಾಡಿದರು. “ಸಿದ್ದರಾಮಯ್ಯ ಮತ್ತೆ ಯಾಕೆ ಈ ರೀತಿ ಮಾಡಿ ಚಿಕ್ಕವರಾಗ್ತಿದ್ದಾರೆ ಗೊತ್ತಿಲ್ಲ. ನಾವೇನೂ ಕಾಲು ಕೆರೆದುಕೊಂಡು ಹೋಗಿರಲಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

“ಪ್ರತಾಪ್ ಸಿಂಹ ಜವಾಬ್ದಾರಿಯುತ ಲೋಕಸಭಾ ಸದಸ್ಯ. ಆತ ನನಗೆ ಸಹೋದರ ಸಮಾನ, ಪಕ್ಷದ ಭವಿಷ್ಯದ ನಾಯಕ. ವಾಸ್ತವಾಂಶ ಇರುವುದನ್ನು ಮಾತನಾಡುತ್ತಾರೆ. ನಿಮ್ಮವರೇ ಜಗಳ ಮಾಡಿಸ್ತಿರೋದು. ಅವರು ಬಿಟ್ಟರೆ ಬೇರೆ ಯಾರೂ ಇಲ್ಲ. ನ್ಯಾಯಸಮ್ಮತ ಚುನಾವಣೆ ನಡೆಯಲಿ, ಮೇ 10ರಂದು ತೀರ್ಮಾನವಾಗಲಿ” ಎಂದು ಸಂಸದ ಪ್ರತಾಪ್ ಸಿಂಹ ಅವರಿಂದಲೇ ಗಲಾಟೆ ಆಗುತ್ತಿದೆ ಎಂಬ ಸಿದ್ದರಾಮಯ್ಯರ ಆರೋಪಕ್ಕೆ ತಿರುಗೇಟು ನೀಡಿದರು.

“ಸಿದ್ದರಾಮಯ್ಯ ಒಂದು ಬಾರಿ ವರುಣ ಕ್ಷೇತ್ರದಲ್ಲಿ ಓಡಾಡಲಿ. ಅದೆಷ್ಟು ಚೆನ್ನಾಗಿರುವ ರಸ್ತೆಗಳಿವೆ ನೋಡಲಿ. ಯಾವ ರೀತಿ ಅವ್ಯವಸ್ಥೆಯಿದೆ ನೋಡಲಿ. ಯಾವ ರೀತಿ ಜನರು ಒದ್ದಾಡ್ತಿದ್ದಾರೆ ಎಂದು ನೋಡಲಿ. ನಾನು ಒಬ್ಬನೇ ಅವರ ಜೊತೆಗೆ ಬರ್ತೀನಿ ಹೋಗೋಣ. ಸಿದ್ದರಾಮಯ್ಯ ಕರೆದರೆ ಹೋಗಲೂ ಸಿದ್ದ, ಹೋಗಿ ಸುತ್ತಾಡೋಣ. ಅವರು ಮಾಡಿರುವ ಕೆಲಸ ಅವರಿಗೆ ತೃಪ್ತಿ ತಂದಿದೆ ಅನಿಸಿದರೆ ಅವರಿಗೆ ನಮಸ್ಕಾರ ಮಾಡುತ್ತೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ದೇವನಹಳ್ಳಿ ರೈತ ಹೋರಾಟ | ಬಿಜೆಪಿಗೆ ಮತ ನೀಡದಿರಲು 13 ಗ್ರಾಮಗಳ ನಿರ್ಧಾರ

“ನಿಜಲಿಂಗಪ್ಪ, ದೇವರಾಜ ಅರಸುಗಿಂತ ಸಿದ್ದರಾಮಯ್ಯ ದೊಡ್ಡವರಲ್ಲ. ಜನರು ತೀರ್ಮಾನ ಮಾಡುತ್ತಾರೆ. ಹಿಂದೆ ನೀವೂ (ಸಿದ್ದರಾಮಯ್ಯ) ಸೋತಾಗ ಮಂತ್ರಿಯಾಗಿದ್ರಷ್ಟೇ. ಇವತ್ತು ಮಾಜಿ ಸಿಎಂ, ವಿರೋಧ ಪಕ್ಷದ ನಾಯಕರಾಗಿ ನಿಂತಿದ್ದೀರಾ. ಸಿದ್ದರಾಮಯ್ಯ ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದು ಬಿಟ್ಟು, ವಾಸ್ತಾವಾಂಶಕ್ಕೆ ಗಮನ ಕೊಟ್ಟರೆ ಒಳ್ಳೆಯದು” ಎಂದು ಹೇಳಿದರು.

“ನಾವು ಪ್ರಚಾರಕ್ಕೆ ಹೋದರೆ ಒಂದು ವರ್ಗದ ಜನ ರಸ್ತೆಗೆ ಅಡ್ಡಲಾಗಿ ನೊಗ ಇಟ್ಟು, ಆಚೆಗೆ ಹೋಗಬಾರದು ಎನ್ನುತ್ತಾರೆ. ನೀವೇ ಗೆಲ್ಲುವುದಾದರೆ ಇದೆಲ್ಲಾ ನಿಮಗೆ ಯಾಕೆ ಬೇಕು? ಪೊಲೀಸರಿಗೆ ಹಿಡಿದುಕೊಟ್ಟರೂ ಅವರನ್ನು ಬಿಟ್ಟು ಕಳುಹಿಸುತ್ತಾರೆ. ಚುನಾವಣಾ ಪ್ರಚಾರಕ್ಕೆ ಅಡ್ಡಿಪಡಿಸುವವರ ವಿರುದ್ಧ 326ರ ಅಡಿ ಪ್ರಕರಣ ದಾಖಲಿಸಬೇಕು” ಎಂದು ಆಗ್ರಹಿಸಿದರು.

“ನನ್ನ ವಿರುದ್ಧ ಏನಾದರೂ ಪಿತೂರಿ ಮಾಡಲಿ ಭಗವಂತ, ಚಾಮುಂಡಿ ತಾಯಿ ಇದ್ದಾರೆ. ಅಲ್ಲದೇ ಕ್ಷೇತ್ರದ ಜನರಿದ್ದಾರೆ. ನನ್ನ ಸೇವೆ ಬೇಕು ಎಂದರೆ ಕ್ಷೇತ್ರದ ಜನರು ಸಹಾಯ ಮಾಡುತ್ತಾರೆ. ಮಾಡದೇ ಇದ್ದರೆ ನನಗೇನೂ ಬೇಸರವಿಲ್ಲ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ‘ದ ಒರಿಜಿನಲ್ ಆಭರಣ ಜುವೆಲ್ಲರ್ಸ್’ ನವೀಕೃತ ಶೋರೂಂ ಲೋಕಾರ್ಪಣೆ

ಉಡುಪಿ ನಗರದ ಹೃದಯ ಭಾಗದಲ್ಲಿರುವ ಸಿಬಿ ರಸ್ತೆಯಲ್ಲಿ 1935 ರಲ್ಲಿ ಆರಂಭಗೊಂಡಿದ್ದ...

ವಿಜಯಪುರ |ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರ ಬದುಕಿಗೆ ಬೆಳಕಾದ ಎಂ.ಎಸ್. ಖೇಡ: 10ನೇ ಪುಣ್ಯಸ್ಮರಣೆ

ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರಿಗೆ ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ವಿಜಯಪುರ...

ಹಾಸನ | ಅಕ್ರಮ ಪೋಡಿ ದುರಸ್ತಿ: ರದ್ದು ಪಡಿಸಲು ನ್ಯಾಯಾಲಯ ಆದೇಶ 

ಸಕಲೇಶಪುರ ತಾಲೂಕಿನ ಸರ್ವೆಯರ್ ಹಾಗೂ ಸೂಪರ್‌ವೈಸರ್ ಸೇರಿ ಅಕ್ರಮವಾಗಿ ಕಿರುಹುಣಸೆ ಗ್ರಾಮದ...

ವಿಜಯಪುರ | ಮಧ್ವಾಚಾರ್ಯರ ದ್ವೈತ ಸಿದ್ಧಾಂತ ಭಾರತೀಯ ತತ್ವಶಾಸ್ತ್ರಕ್ಕೆ ಮಹತ್ವದ ಕೊಡುಗೆ: ಪ್ರೊ. ಪಿ.ಜಿ. ತಡಸ

ಮಧ್ವಾಚಾರ್ಯರು ದ್ವೈತ ತತ್ವವನ್ನು ದೇಶಾದ್ಯಂತ ಪಸರಿಸುವ ಮೂಲಕ ಭಾರತೀಯ ತತ್ವಶಾಸ್ತ್ರ ಹಾಗೂ...