ನಾವು ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ಶೇ 75ಕ್ಕೆ ಏರಿಸುತ್ತೇವೆ : ಸಿದ್ದರಾಮಯ್ಯ

Date:

Advertisements
  • ಮೀಸಲಾತಿ ಏರಿಕೆ ಭರವಸೆ ನೀಡಿದ ಸಿದ್ದರಾಮಯ್ಯ
  • ಪ್ರಣಾಳಿಕೆಯಲ್ಲಿ ಮೀಸಲು ಜಾರಿ ಪ್ರಸ್ತಾಪಕ್ಕೆ ಚರ್ಚೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈಗಿರುವ ಮೀಸಲಾತಿಯನ್ನು ಶೇ.75ಕ್ಕೆ ಏರಿಸಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಅವರು ಈಗಿರುವ ಶೇ.50ರಷ್ಟು ಮೀಸಲಾತಿಯನ್ನು ಶೇ. 75ಕ್ಕೆ ಹೆಚ್ಚಿಸಲಾಗುವುದು. ಮೀಸಲಾತಿಯನ್ನು ಶೆಡ್ಯುಲ್ 9 ಅನ್ವಯ ಜಾರಿ ಮಾಡುತ್ತೇವೆ ಎಂದರು.

ಇಂದಿರಾ ಸಾನಿ ಪ್ರಕರಣದಲ್ಲಿ ಶೇ.50ರಷ್ಟು ಮೀರಬಾರದು ಎಂದು ಸುಪ್ರೀಂಕೋರ್ಟ್ ತೀರ್ಪಿತ್ತಿದೆ. ಆದರೆ, ಮೀಸಲಾತಿಯನ್ನು ಹೆಚ್ಚಿಸಲೇಬಾರದು ಎಂದಿಲ್ಲ. ನೆರೆಯ ತಮಿಳುನಾಡಿನಲ್ಲಿ ಮೀಸಲಾತಿ ಪ್ರಮಾಣ ಶೇ.69ರಷ್ಟಿದೆ ಎಂದು ಮಾಹಿತಿ ನೀಡಿದರು.

Advertisements

ಈ ಮೀಸಲಾತಿಯಲ್ಲಿ ಮುಸ್ಲಿಮರಿಗೆ, ಲಿಂಗಾಯತರಿಗೆ, ಒಕ್ಕಲಿಗರಿಗೆ ಸೇರಿದಂತೆ ಎಲ್ಲ ಸಮುದಾಯಗಳಿಗೂ ನ್ಯಾಯ ಕಲ್ಪಿಸಲಾಗುವುದು. ಪ್ರಣಾಳಿಕೆಯಲ್ಲಿ ಈ ವಿಚಾರ ಸೇರಿಸುವ ಕುರಿತು ಚರ್ಚಿಸಲಾಗುವುದು ಎಂದರು.

ಈ ಸುದ್ದಿ ಓದಿದ್ದೀರಾ?:ರಕ್ತದಲ್ಲಿ ಪತ್ರ ಬರೆದಿದ್ದ ಯುವಕನ ಮನೆಗೆ ಜಗದೀಶ್ ಶೆಟ್ಟರ್ ಭೇಟಿ

ಇದೇ ವೇಳೆ ರಾಜ್ಯ ಬಿಜೆಪಿ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ, ರಾಜ್ಯದ ನಾಯಕರಿಗೆ ವೋಟ್ ತರುವ ಶಕ್ತಿಯಿಲ್ಲ. ಅದಕ್ಕೆ ಮೋದಿ, ಯೋಗಿ, ನಡ್ಡಾ, ಶಾ ಬಂದು ಪ್ರಚಾರ ಮಾಡುತ್ತಿದ್ದಾರೆ. ಇದು ರಾಜ್ಯ ನಾಯಕರ ಶಕ್ತಿ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಪೊಳ್ಳು ಭರವಸೆಗಳನ್ನು ನೀಡುತ್ತಾ ಜನರನ್ನು ದಿಕ್ಕತಪ್ಪಿಸುತ್ತಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಮತದಾರರು ಅವರಿಗೆ ತಕ್ಕಪಾಠ ಕಲಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X