ಪ್ರಚಾರಕ್ಕಾಗಿ ದಲಿತ ವ್ಯಕ್ತಿಯ ಮಾತು ತಿರುಚಿದ ಪಕ್ಷೇತರ ಅಭ್ಯರ್ಥಿ?; ಸಮಾಜ ಕಲ್ಯಾಣ ಇಲಾಖೆ ಸ್ಪಷ್ಟನೆ

Date:

Advertisements

ದಲಿತರನ್ನು ಬೇರೆಡೆಗೆ ಸ್ಥಳಾಂತರಿಸಿ ಎಂದು ಕೇಳಿದ್ದ ವ್ಯಕ್ತಿಯೂ ದಲಿತರೇ ಆಗಿದ್ದಾರೆ. ದಲಿತರು ವಾಸಿಸುವ ಪ್ರದೇಶವು ಪ್ರಬಲ ಜಾತಿಗರ ಮನೆಗಳಿಂದ ಸುತ್ತುವರಿದ್ದು, ತಮ್ಮ ಸಾಕು ಪ್ರಾಣಿಗಳು ಪ್ರಬಲ ಜಾತಿಗರ ನಿವಾಸದೆಡೆಗೆ ಹೋದರೆ ಜಗಳಾಗುತ್ತವೆ ಎಂಬ ಉದ್ದೇಶದಿಂದ ಸ್ಥಳಾಂತರದ ಬಗ್ಗೆ ಕೇಳಿದ್ದಾರೆಂದು ತಿಳಿದುಬಂದಿದೆ.

ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ವಿಧಾನಸಭಾ ಕ್ಷೇತ್ರದ ಕುಪ್ಪಳ್ಳಿಯಲ್ಲಿ ಪಕ್ಷೇತರ ಅಭ್ಯರ್ಥಿ ಚಂದನ್ ಗೌಡಗೆ ಗ್ರಾಮಸ್ಥರೊಬ್ಬರು ದಲಿತರನ್ನು ಬೇರೆಡೆಗೆ ಸ್ಥಳಾಂತರಿಸಿ ಎಂದು ಹೇಳಿದ್ದ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಸಮಾಜ ಕಲ್ಯಾಣ ಇಲಾಖೆಯಲ್ಲಿಯೂ ದೂರು ದಾಖಲಾಗಿತ್ತು.

ಬಳಿಕ ಸ್ಥಳಕ್ಕೆ ಭೇಟಿ ನೀಡಿದ್ದ ಇಲಾಖೆಯ ಅಧಿಕಾರಿಗಳು ಘಟನೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. “ಸ್ಥಳಾಂತರದ ಬಗ್ಗೆ ಕೇಳಿದ ವ್ಯಕ್ತಿಯೂ ಪರಿಶಿಷ್ಟ ಜಾತಿಯ ಅದಿ ಕರ್ನಾಟಕ ಜನಾಂಗಕ್ಕೆ ಸೇರಿದವರಾಗಿದ್ದಾರೆ. ಗ್ರಾಮದಲ್ಲಿ 12 ದಲಿತ ಕುಟುಂಬಗಳು ವಾಸಿಸುತ್ತಿದ್ದಾರೆ. ಅವರಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಸಿಸಿ ರಸ್ತೆ, ಚರಂಡಿ ವ್ಯವಸ್ಥೆಗಳನ್ನು ಒದಗಿಸಲಾಗಿದೆ. ಯಾವುದೇ ತೊಂದರೆ ಇಲ್ಲ” ಎಂದು ಹೇಳಿದ್ದಾರೆ.

Advertisements
WhatsApp Image 2023 05 03 at 9.28.54 AM

“ಸ್ಥಳಾಂತರದ ಕುರಿತು ಮಾತನಾಡಿದವರು ಆದಿ ಕರ್ನಾಟಕ ಜನಾಂಗಕ್ಕೆ ಸೇರಿರುವುದರಿಂದ ಈ ಪ್ರಕರಣವು ದಲಿತ ದೌರ್ಜನ್ಯ ತಡೆ ಕಾಯ್ದೆಯ ವ್ಯಾಪ್ತಿಗೆ ಬರುವುದಿಲ್ಲ” ಎಂದೂ ಇಲಾಖೆ ಹೇಳಿದ್ದಾರೆ.

ಗ್ರಾಮಕ್ಕೆ ಕರ್ನಾಟಕ ಭೀಮ ಸೇನೆಯ ಮುಖಂಡರೂ ಭೇಟಿ ನೀಡಿದ್ದು, ತಮ್ಮನ್ನು ಸ್ಥಳಾಂತರಿಸುವಂತೆ ಕೇಳಿದ್ದ ವ್ಯಕ್ತಿಯೊಂದಿಗೆ ಚರ್ಚೆ ನಡೆಸಿದ್ದಾರೆ. “ಗ್ರಾಮದಲ್ಲಿ ಸಹೋದರಂತೆ ವಾಸಿಸುತ್ತಿದ್ದಾರೆ. ಆದರೆ, ಪಕ್ಷೇತರ ಅಭ್ಯರ್ಥಿ ಚಂದನ್‌ ಗೌಡ ತಮ್ಮ ಪ್ರಚಾರಕ್ಕಾಗಿ ‘ಪ್ರಬಲ ಜಾತಿಯ ವ್ಯಕ್ತಿ ದಲಿತ ವಿರೋಧಿ ಹೇಳಿಕೆ ನೀಡಿದ್ದಾರೆ’ ಎಂಬಂತೆ ತಿರುಚಿದ್ದಾರೆ. ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X