ಸಿಟಿ ರವಿ ಕ್ಷೇತ್ರದ ಉಸ್ತುವಾರಿಯಾಗಿದ್ದ ಕಾಂಗ್ರೆಸ್ಸಿನ ವಿವೇಕ್ ಮನೆ-ಕಚೇರಿ ಮೇಲೆ ಐಟಿ ದಾಳಿ : ಡಿ ಕೆ ಶಿವಕುಮಾರ್‌

Date:

ಯಾರು ನಮ್ಮ ಜೊತೆಗೆ ಇದ್ದಾರೋ ಅವರ ಮೇಲೆ ಐಟಿ ದಾಳಿ ನಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪಿಸಿದರು.

- Advertisement -

ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್‌ನವರನ್ನು ಹೆದರಿಸೋಕೆ ಅವರು ಏನು ಬೇಕಾದರೂ ಮಾಡಲಿ. ನಾವು ರಾಜ್ಯದಲ್ಲಿ ಬದಲಾವಣೆ ತಂದೇ ತರುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

“ಕಾಂಗ್ರೆಸ್ ಮುಖಂಡ, ಉದ್ಯಮಿ ವಿವೇಕ್ ಪೂಜಾರಿಯ ಅವರ ಮನೆ ಮತ್ತು ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಶನಿವಾರ ಬೆಳಗ್ಗೆ 14 ಮಂದಿ ಅಧಿಕಾರಿಗಳು ವಿವೇಕ್ ಪೂಜಾರಿಗೆ ಸೇರಿದ ಎರಡು ಮನೆಗಳ ಮೇಲೆ ದಾಳಿ ನಡೆಸಿದ್ದರು. ಸಿ ಟಿ ರವಿ ಸ್ಪರ್ಧಿಸುವ ಚಿಕ್ಕಮಗಳೂರು ಕ್ಷೇತ್ರದ ಉಸ್ತುವಾರಿಯನ್ನು ಕಾಂಗ್ರೆಸ್ ಹೈಕಮಾಂಡ್ ವಿವೇಕ್ ಅವರಿಗೆ ನೀಡಿದೆ” ಎಂದು ಹೇಳಿದರು.

“ಬಿವಿ ನಾಯಕ್ ಅವರು ಕಾಂಗ್ರೆಸ್ ತೊರೆದಿರುವುದು ಗೊತ್ತಿದೆ. ಆದರೆ ದೇವದುರ್ಗ ಕಾಂಗ್ರೆಸ್ ಅಭ್ಯರ್ಥಿ ಬದಲಾಯಿಸುವ ಬಗ್ಗೆ ಯಾವುದೇ ಬೇಡಿಕೆ ಸ್ಥಳೀಯವಾಗಿ ಬಂದಿಲ್ಲ. ನಮ್ಮ ಕ್ಯಾಂಡಿಡೇಟ್ ಸ್ಟ್ರಾಂಗ್ ಆಗಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ನವರು ಚೆಸ್ ಆಟ ಆಡ್ತಿದ್ದಾರೆ. ನಾವೂ ಆಡುತ್ತಿದ್ದೇವೆ” ಎಂದರು.

ಪದ್ಮನಾಭನಗರದಲ್ಲಿ ಡಿಕೆ ಸುರೇಶ್ ಸ್ಪರ್ಧೆ ಸಾಧ್ಯತೆ ಕುರಿತು ಪತ್ರಕರ್ತರು ಪ್ರಶ್ನಿಸಿದಾಗ, “ಕಾಂಗ್ರೆಸ್ ಅಭ್ಯರ್ಥಿ ರಘುನಾಥ ನಾಯ್ಡುಗೆ ಬೆಂಬಲ ಉತ್ತಮವಾಗಿಯೇ ಇದೆ. ರಘುನಾಥ ನಾಯ್ಡು ನಮ್ಮ ಅಭ್ಯರ್ಥಿ. ಅವರು ನಾಮಪತ್ರ ಸಲ್ಲಿಸುತ್ತಾರೆ. ನಾನೂ ಕೂಡ ನಾಮಪತ್ರ ಸಲ್ಲಿಕೆಗೆ ಹೋಗುತ್ತೇನೆ. ರಘುನಾಥ ನಾಯ್ಡುಗೆ ಗೆಲ್ಲುವ ವಾತಾವರಣ ಇದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆಯಿಂದ ಸ್ಪರ್ಧಿಸಿ ಗೆದ್ದು ತೋರಿಸಿ: ಸಿಎಂ ಯೋಗಿಗೆ ಅಖಿಲೇಶ್ ಯಾದವ್ ಬಹಿರಂಗ ಸವಾಲು

ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು...

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...