ಶೋಭಾ ಕರಂದ್ಲಾಜೆ ಸೀತಾಮಾತೆ ಆಗಲಿ, ಶೂರ್ಪನಕಿ ಪಾತ್ರ ಬೇಡ: ರಮೇಶ್‌ ಬಾಬು

Date:

  • ಮೋದಿ ರೋಡ್ ಶೋ ಬಗ್ಗೆ ತಕರಾರು ಇಲ್ಲ, ಜನಸಮಾನ್ಯರಿಗೆ ತೊಂದರೆ ಬಗ್ಗೆ ಅರಿವು ಇರಲಿ
  • ಶೋಭಾ ಕರಂದ್ಲಾಜೆ ಉತ್ತಮ ಮ್ಯಾನಿಪುಲೇಟರ್ ಆಗಿದ್ದು, ಹೀಗಾಗಿ ಉಸ್ತುವಾರಿಗಳಾಗಿದ್ದಾರೆ

ಶೋಭಾ ಕರಂದ್ಲಾಜೆ ಅವರು ರಾಜ್ಯ ರಾಜಕಾರಣದಲ್ಲಿ ಸೀತಾಮಾತೆಯ ಪಾತ್ರ ನಿರ್ವಹಿಸಬೇಕು. ಅದನ್ನು ಬಿಟ್ಟು ಶೂರ್ಪನಕಿ ಪಾತ್ರ ನಿರ್ವಹಣೆ ಮಾಡುವುದು ಬೇಡ. ಕೇಂದ್ರ ಸಚಿವರಾಗಿ ತಾವು ಮೋದಿ ಅವರಿಗೆ ಜನರಿಗೆ ತೊಂದರೆ ಆಗದಂತೆ ರೋಡ್ ಶೋ ಮಾಡಲು ಸಲಹೆ ನೀಡಿ ಎಂದು ಕೆಪಿಸಿಸಿ ವಕ್ತಾರ ರಮೇಶ್‌ ಬಾಬು ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಮೋದಿ ಅವರು ರೋಡ್ ಶೋ ಬಗ್ಗೆ ತಕರಾರು ಇಲ್ಲ. ಕಳೆದ ಸಲ ರಿಂಗ್ ರೋಡ್ ನಲ್ಲಿ ನಡೆದ ರೋಡ್ ಶೋನಲ್ಲಿ ಜನರಿಗೆ ಆದ ತೊಂದರೆಗಳ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದವು. ಸಾರ್ವಜನಿಕರ ಹಿತಾಸಕ್ತಿಯಿಂದ ನಾವು ಕೆಲವು ಪ್ರಶ್ನೆ ಎತ್ತಿದ್ದೇವೆ. ಆದರೆ, ಶೋಭಾ ಕರಂದ್ಲಾಜೆ ಅವರು ಉತ್ತಮ ಮ್ಯಾನಿಪುಲೇಟರ್ ಆಗಿದ್ದು, ಇದೇ ಕಾರಣಕ್ಕೆ ಅವರನ್ನು ಚುನಾವಣಾ ಉಸ್ತುವಾರಿಗಳನ್ನಾಗಿ ಮಾಡಿದ್ದಾರೆ” ಎಂದರು.

“ನಾವು ರಾಜಕೀಯ ಉದ್ದೇಶದಿಂದ ದೂರು ನೀಡಿಲ್ಲ. ನಿನ್ನೆ ಮಳೆಯಾಗಿದ್ದು, ಮುಂದಿನ ಮೂರು ದಿನ ಮಳೆ ಬೀಳುವ ಸಾಧ್ಯತೆ ಇದೆ. ಇವರು ರೋಡ್ ಶೋ ಮಾಡಿದರೆ, ದಿನನಿತ್ಯದ ಬದುಕು ನಡೆಸುವವರು ಏನಾಗಬೇಕು? ಪ್ರಧಾನಮಂತ್ರಿಗಳ ಭದ್ರತೆಗಾಗಿ ರಸ್ತೆ ಬದಿಯ ಅಂಗಡಿ ಮುಂಗಟ್ಟು ಬಂದ್ ಮಾಡಿಸಲಾಗುತ್ತದೆ. ಇದರಿಂದ ಮಂತ್ರಿಯಾಗಿರುವ ಶೋಭಾ ಅವರಿಗೆ ತೊಂದರೆ ಆಗದಿರಬಹುದು. ಜನಸಾಮಾನ್ಯರಿಗೆ ತೊಂದರೆ ಆಗಲಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಹುಲ್ ಗಾಂಧಿ ಅವರು ರೋಡ್ ಶೋ ಮಾಡುವುದಿಲ್ಲವೇ ಎಂದು ಕೇಳಿದಾಗ, “ರಾಹುಲ್ ಗಾಂಧಿ ಅವರು ಪ್ರಧಾನಿಯೂ ಅಲ್ಲ, ರಾಷ್ಟ್ರಪತಿಗಳೂ ಅಲ್ಲ. ಅವರಿಗೆ ಇರುವ ಶಿಷ್ಟಾಚಾರಗಳು ಬೇರೆ, ಪ್ರಧಾನಮಂತ್ರಿಗಳಿಗೆ ಇರುವ ಶಿಷ್ಟಾಚಾರಗಳು ಬೇರೆ. ನಡ್ಡಾ ಅವರಿಗೆ ಇರುವ ಶಿಷ್ಟಾಚಾರ ಬೇರೆ. ನಾವು ಮೋದಿ ಅವರಂತೆ ಬೆಳಗಿನಿಂದ ರಾತ್ರಿವರೆಗೂ ರಸ್ತೆ ಕಬಳಿಸಿಕೊಂಡು ರೋಡ್ ಶೋ ಮಾಡುತ್ತಿಲ್ಲ” ಎಂದು ಉತ್ತರಿಸಿದರು.

ಈ ಸುದ್ದಿ ಓದಿದ್ದೀರಾ? ಈದಿನ.ಕಾಮ್‌ ಸಮೀಕ್ಷೆ-8: ಕಾಂಗ್ರೆಸ್‌ಗೆ ಸಿಗಲಿದೆ ಸ್ಪಷ್ಟ ಬಹುಮತ; 132-140 ಸೀಟುಗಳ ನಿರೀಕ್ಷೆ

“ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ರಾಜ್ಯದ ಜನ ಬೇಸತ್ತಿದ್ದು, ಈ ಚುನಾವಣೆಯಲ್ಲಿ ಜನ ಈ 40% ಕಮಿಷನ್ ಸರ್ಕಾರವನ್ನು ತೆಗೆಯಲಿದ್ದಾರೆ. ರೈತರು, ಮಹಿಳೆಯರು, ಯುವಕರು, ಕಾರ್ಮಿಕರು ಸೇರಿದಂತೆ ಸಮಾಜದ ಎಲ್ಲಾ ವರ್ಗಗಳು ಈ 40% ಸರ್ಕಾರದ ದುರಾಡಳಿತಕ್ಕೆ ಬಲಿಯಾಗಿವೆ. ಬಿಜೆಪಿ ರಾಷ್ಟ್ರೀಯ ನಾಯಕರು ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪ್ರವಾಸ ಮಾಡುತ್ತಿದ್ದು, ಉಳಿದ ನಾಲ್ಕು ದಿನಗಳಲ್ಲಿ ಈ ನಾಯಕರು ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಉತ್ತರ ನೀಡಬೇಕು” ಎಂದು ಎಐಸಿಸಿ ಮಾಧ್ಯಮ ಹಾಗೂ ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಆಗ್ರಹಿಸಿದರು.

ಬಿಜೆಪಿ ನಾಯಕರು ಭ್ರಷ್ಟಾಚಾರ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಮಾಡುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಪವನ್ ಖೇರಾ ಅವರು, ‘ಈ ಬಗ್ಗೆ ರಾಜ್ಯದ ಜನರಿಗೆ ಗೊತ್ತಿದೆ. ಇದಕ್ಕೆ ಮೇ 10ರಂದು ರಾಜ್ಯದ ಜನರೇ ಉತ್ತರ ನೀಡುತ್ತಾರೆ. ಬಿಜೆಪಿ ನಾಯಕರು ನಮಗೆ ಸಿಕ್ಕಾಗ ವೈಯಕ್ತಿಕವಾಗಿ ನಿಮ್ಮ ಪ್ರಕಾರ ನಾವು ಕೇವಲ 40 ಸ್ಥಾನ ಪಡೆಯುತ್ತೀವೋ ಅಥವಾ 50 ಪಡೆಯುತ್ತೀವೋ ಎಂದು ಕೇಳುತ್ತಿದ್ದಾರೆ” ಎಂದರು.

“ಮಣಿಪುರ ಹೊತ್ತಿ ಉರಿಯುತ್ತಿರುವಾಗ ಅನೇಕ ಜೀವಗಳ ಬಲಿಯಾಗಿರುವಾಗ ಪ್ರಧಾನಿಗಳು 9 ಗಂಟೆಗಳ ರೋಡ್ ಶೋದಲ್ಲಿ ಮಗ್ನರಾಗಿದ್ದಾರೆ. ಅವರಿಗೆ ಚುನಾವಣೆ ಹೊರತಾಗಿ ಬೇರೆ ಯಾವುದೂ ಮುಖ್ಯವಲ್ಲ. ಅವರಿಗೆ ಆಡಳಿತ ಗೊತ್ತಿಲ್ಲ. ಪ್ರಧಾನಮಂತ್ರಿಗಳು, ಗೃಹ ಸಚಿವರು ಹಾಗೂ ಮಂತ್ರಿಗಳು ಕರ್ನಾಟಕದಲ್ಲಿದ್ದಾರೆ. ಮಣಿಪುರದ ಜನ ಮೋದಿ ಅವರನ್ನು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ” ಎಂದು ತಿಳಿಸಿದರು.

“ಪ್ರಧಾನಿ ನರೇಂದ್ರ ಮೋದಿ ಅವರು ಅಚ್ಛೇ ದಿನ, ವಿಕಾಸದ ಬಗ್ಗೆ ಮಾತನಾಡುತ್ತಾರೆ. ಆದರೆ ರಾಜ್ಯದ ವಿಚಾರಕ್ಕೆ ಬಂದರೆ ಕೇವಲ ವೈಯಕ್ತಿಕ ವಿಚಾರಗಳ ಬಗ್ಗೆ ಮಾತ್ರ ಯಾಕೆ ಮಾತನಾಡುತ್ತಾರೆ? ಮೋದಿ, ಅಮಿತ್ ಶಾ, ನಡ್ಡಾ ಅವರಿಂದ ಎಲ್ಲಾ ನಾಯಕರಿಗೂ ತಮ್ಮ ಸರ್ಕಾರದ ಅವಧಿಯಲ್ಲಿ ಯಾವುದೇ ಪ್ರಗತಿ ಕೆಲಸ ಆಗಿಲ್ಲ, ಪ್ರತಿಯೊಬ್ಬರೂ 40, 50, 60% ಪಡೆದಿದ್ದಾರೆ ಎಂಬುದು ತಿಳಿದಿದೆ. ಕರ್ನಾಟಕ ಚುನಾವಣೆ ಸ್ಥಳೀಯ ವಿಚಾರಗಳ ಬಗ್ಗೆ ಚರ್ಚೆ ಆಗಬೇಕೇ ಹೊರತು ಬೇರೆ ವಿಚಾರಗಳ ಬಗ್ಗೆ ಅಲ್ಲ. ಪ್ರಧಾನಿ ಮೋದಿ ಅವರು ರೋಡ್ ಶೋ ಮಾಡುತ್ತಾ, ಬೆಂಗಳೂರಿನಲ್ಲಿರುವ ಮೂಲಭೂತ ಸೌಕರ್ಯ, ಪರಿಸ್ಥಿತಿಗಳನ್ನು ಒಮ್ಮೆ ನೋಡಬೇಕು. ಆಗ ನಿಮ್ಮ ಸರ್ಕಾರದ ಸಾಧನೆ ಏನು ಎಂದು ಅರಿವಾಗುತ್ತದೆ” ಐಶ್ವರ್ಯ ಮಹದೇವ್ ಕುಟುಕಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಮೋದಿಯವರ ‘ಚಾರ್‌ ಸವ್ ಪಾರ್’ ಘೋಷಣೆ ಹಿಂದಿನ ಉದ್ದೇಶವೇನು? ಅರಿತಿದ್ದಾರೆಯೇ ‘ಒಬಿಸಿ’ಗಳು!

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. ಮೀಸಲಾತಿಯನ್ನು...

ಭಯಗೊಂಡಿರುವ ಪ್ರಧಾನಿ ವೇದಿಕೆಯಲ್ಲೇ ಕಣ್ಣೀರು ಹಾಕಬಹುದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...