ಕಾಂಗ್ರೆಸ್‌ನ 50 ಅಭ್ಯರ್ಥಿಗಳ ಮೇಲೆ ಐಟಿ ದಾಳಿ ನಡೆಯಲಿದೆ: ಲಕ್ಷ್ಮಿ ಹೆಬ್ಬಾಳ್ಕರ್

Date:

  • ಆತ್ಮೀಯರಿಂದ ಮಾಹಿತಿ ತಿಳಿದಿದೆ ಎಂದ ಲಕ್ಷ್ಮಿ ಹೆಬ್ಬಾಳ್ಕರ್
  • ಚುನಾವಣೆ ಹೊತ್ತಲ್ಲೇ ಬಿಜೆಪಿ ವಾಮಮಾರ್ಗ ಅನುಸರಿಸುತ್ತಿದೆ

ನನ್ನನ್ನು ಸೇರಿದಂತೆ ಸುಮಾರು 50 ಕಾಂಗ್ರೆಸ್ ಅಭ್ಯರ್ಥಿಗಳ ಮತ್ತು ಅವರ ಸಂಬಂಧಿಕರ ಮನೆಯ ಮೇಲೆ ತನಿಖಾ ಸಂಸ್ಥೆಗಳಿಂದ ದಾಳಿ ಮಾಡುವ ಹುನ್ನಾರ ನಡೆದಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು 10 ದಿನಗಳು ಮಾತ್ರ ಬಾಕಿ ಉಳಿದಿವೆ. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬಿಜೆಪಿ ನಾಯಕರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಿಜೆಪಿಯವರು ಹತಾಶೆಯಿಂದ ಕೆಲವು ವಾಮಮಾರ್ಗ ಅನುಸರಿಸುತ್ತಿದ್ದಾರೆ. ಬೆಳಗಾವಿಯಲ್ಲಿ ನಾನು ಸೇರಿ ಮೂವರು ಹಾಗೂ ಸಂಬಂಧಿಕರ ಮೇಲೆ ಲೋಕಾಯುಕ್ತ, ಐಟಿ ದಾಳಿ ಮಾಡುವ ಸುಳಿವು ಬಂದಿವೆ” ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಎಲ್ಲ ಕಡೆಗಳಲ್ಲಿ ನಮ್ಮ ಮಾಹಿತಿದಾರರು ಮತ್ತು ಕಾಂಗ್ರೆಸ್‌ಗೆ ಒಳ್ಳೆಯದನ್ನು ಬಯಸುವವರು ಇರುತ್ತಾರೆ. ಅವರಿಂದ ಈ ಮಾಹಿತಿ ಗೊತ್ತಾಗಿದೆ” ಎಂದು ಹೇಳಿದ್ದಾರೆ.

“ಚುನಾವಣೆಗೆ ಕೇವಲ 10 ದಿನ ಮಾತ್ರ ಇದೆ. ನಮ್ಮ ಕಾರ್ಯಕರ್ತರು ಹಾಗೂ ಜನರು ಗೊಂದಲಕ್ಕೆ ಈಡಾಗುವ ಪರಿಸ್ಥಿತಿ ತರುವ ಕುತಂತ್ರ ನಡೆಸಿದ್ದಾರೆ” ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಆರೋಪಿಸಿದ್ದಾರೆ.

“ಚುನಾವಣಾ ಸಂದರ್ಭದಲ್ಲಿ ವಿಪಕ್ಷಗಳ ಮತದಾರರ ದಿಕ್ಕು ತಪ್ಪಿಸುವ ಕೆಲಸ ಹವ್ಯಾಸವಾಗಿ ಬಿಟ್ಟಿದೆ. ಸಮಯ ಬಹಳ ಮುಖ್ಯವಾಗಿದೆ. ಕೊನೆಯ ಹಂತದ ಪ್ರಚಾರದ ಸಂದರ್ಭದಲ್ಲಿ ಇಂಥ ಮಾರ್ಗವನ್ನು ಬಿಜೆಪಿ ಕೈ ಬಿಡಬೇಕು” ಎಂದು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಪ್ರದೇಶ | ಈದ್‌ ವೇಳೆ ರಸ್ತೆಯಲ್ಲಿ ನಮಾಜ್‌ ಮಾಡಿದ ಸಾವಿರಾರು ಮಂದಿ ವಿರುದ್ಧ 6 ಪ್ರಕರಣ

“ಚುನಾವಣಾ ಸೋಲು ಗೆಲುವನ್ನು ಮತಕ್ಷೇತ್ರ ಜನರು ತೀರ್ಮಾನಿಸುತ್ತಾರೆ. ಬಿಜೆಪಿ ಇಂತಹ ವಾಮ ಮಾರ್ಗ ಬಿಡಬೇಕು. ಇದು ಸರಿಯಾದ ನಡೆಯಲ್ಲ” ಎಂದಿದ್ದಾರೆ. 

ಕರ್ನಾಟಕದಲ್ಲಿ ಈ ಬಾರಿ ಎಲ್ಲ ಕಡೆ ಕಾಂಗ್ರೆಸ್ ಪರವಾದ ವಾತಾವರಣ ಇದೆ. ಮತದಾರರು ಕಾಂಗ್ರೆಸ್ ಸರಕಾರ ತರುವ ಮನಸ್ಸು ಮಾಡಿದ್ದಾರೆ ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...

ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಘರ್ಜಿಸಿದ ಸಿದ್ದರಾಮಯ್ಯ

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ...

ಪಿಎಂ ಮೋದಿ ಸೂಪರ್‌ ಮ್ಯಾನ್ ಅಲ್ಲ ದುಬಾರಿ ಮ್ಯಾನ್: ಪ್ರಿಯಾಂಕಾ ಗಾಂಧಿ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ಸೂಪರ್ ಮ್ಯಾನ್ ಅಲ್ಲ ಬದಲಾಗಿ ಅವರು ದುಬಾರಿ...