ಪಕ್ಷ ತೊರೆಯಲು ಸಜ್ಜಾದ ಜಗದೀಶ್ ಶೆಟ್ಟರ್ : ಮನವೊಲಿಸುವಲ್ಲಿ ವಿಫಲವಾದ ಪ್ರಲ್ಹಾದ್ ಜೋಶಿ

Date:

  • ಜಗದೀಶ್ ಶೆಟ್ಟರ್ ಮನವೊಲಿಸಲು ಬಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
  • ಪಕ್ಷದ ವಿರುದ್ಧ ಮುನಿಸಿಕೊಂಡ ಮಾಜಿ ಸಿಎಂ ಜೊತೆ ಸಂಧಾನ ಮಾತುಕತೆ

ಬಿಜೆಪಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಹೊರಹಾಕಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮನವೊಲಿಕೆ ಕಾರ್ಯ ಭರದಿಂದ ಸಾಗಿದೆ.

- Advertisement -

ಪಕ್ಷದ ನಿರ್ಧಾರದ ವಿರುದ್ಧ ಬಹಿರಂಗವಾಗಿಯೇ ಕಿಡಿಕಾರಿ ಅಗತ್ಯ ಬಿದ್ದರೆ ಸ್ವತಂತ್ರ ಸ್ಪರ್ಧೆಗೂ ಸಿದ್ಧ ಎಂದಿದ್ದ ಜಗದೀಶ್ ಶೆಟ್ಟರ್ ಅವರನ್ನು ಸಮಾಧಾನ ಪಡಿಸಲು ರಾಜ್ಯ ಬಿಜೆಪಿ ಬ್ರಿಗೇಡ್ ಇನ್ನಿಲ್ಲದ ಕಸರತ್ತು ಆರಂಭಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಜಗದೀಶ್ ಶೆಟ್ಟರ್ ಪಕ್ಷಕ್ಕೆ ಬರುವುದಾದರೆ ಅವರಿಗೆ ಸ್ವಾಗತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿದ ಹೇಳಿಕೆ ಬಳಿಕ ಬಿಜೆಪಿ ಪಾಳೆಯ ಶೆಟ್ಟರ್ ಅಸಮಾಧಾನ ಶಮನಕ್ಕೆ ಇನ್ನಿಲ್ಲದ ಪ್ರಯತ್ನ ಆರಂಭಿಸಿದೆ.

ಇದರ ಭಾಗವಾಗಿ ಇಂದು( ಏಪ್ರಿಲ್15) ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಜಗದೀಶ್ ಶೆಟ್ಟರ್ ಆವರ ಹುಬ್ಬಳ್ಳಿ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು.

ಶೆಟ್ಟರ್ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳುವ ಸಲುವಾಗಿ ಶುಕ್ರವಾರ ಸಿಎಂ ಬೊಮ್ಮಾಯಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರೊಂದಿಗೂ ಚರ್ಚಿಸಿದ್ದರು.

ಪಕ್ಷಕ್ಕೆ ಶೆಟ್ಟರ್ ಅಗತ್ಯತೆಯನ್ನು ಅವರು ದೆಹಲಿ ನಾಯಕರಿಗೆ ಮನವರಿಕೆ ಮಾಡಿಕೊಟ್ಟಿದ್ದರು. ಈಗ ಅದೇ ಹಾದಿಯಲ್ಲಿ ಸಾಗಿರುವ ಪ್ರಲ್ಹಾದ್ ಜೋಶಿ, ಮುನಿಸು ಮರೆತು ಪಕ್ಷದೊಂದಿಗೆ ಸಾಗಲು ಶೆಟ್ಟರ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಜೊತೆಗೆ ಅವರ ಬೇಡಿಕೆಯನ್ನೂ ಪಕ್ಷದ ಅಧ್ಯಕ್ಷರಿಗೆ ತಿಳಿಸುವುದಾಗಿ ಜೋಶಿ, ಶೆಟ್ಟರ್ ಗೆ ಭರವಸೆ ನೀಡಿದ್ದಾರೆ ಎನ್ನಲಾಗುತ್ತಿದೆ.

ಆರಂಭದಲ್ಲಿ ಜಗದೀಶ್ ಶೆಟ್ಟರ್ ವಿಚಾರದಲ್ಲಿ ಕೊಂಚ ಹಗುರವಾಗಿಯೇ ನಡೆದುಕೊಂಡಿದ್ದ ಬಿಜೆಪಿಗೆ, ಹುಬ್ಬಳ್ಳಿ ಪಾಲಿಕೆಯಲ್ಲಿದ್ದ ಶೆಟ್ಟರ್ ಬೆಂಬಲಿಗರು ಸರಿಯಾದ ಪಾಠ ಕಲಿಸಿದ್ದರು. ತಮ್ಮ ನಾಯಕನಿಗಾದ ಅನ್ಯಾಯ ಪ್ರತಿಭಟಿಸಲು ತಮ್ಮ ಪಾಲಿಕೆ ಸದಸ್ಯ ಸ್ಥಾನಕ್ಕೆ ಆರಕ್ಕೂ ಹೆಚ್ಚುಮಂದಿ ರಾಜೀನಾಮೆ ಸಲ್ಲಿಸಿದ್ದರು.

ಈ ಬೆಳವಣೆಗೆ ಬಳಿಕ ಪಕ್ಷ ಎಚ್ಚೆತ್ತುಕೊಂಡು ಜಿಲ್ಲೆಯಲ್ಲಿ ಪಕ್ಷಕ್ಕಾಗುವ ಅಪಮಾನ ಮತ್ತು ಹಿನ್ನಡೆ ತಪ್ಪಿಸಲು ಹಿರಿಯ ನಾಯಕರನ್ನು ಮಾತುಕತೆಗೆ ಕಳುಹಿಸಿಕೊಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? : ಜೆಡಿಎಸ್‌ನ ಭರವಸೆ ಪತ್ರ ಬಿಡುಗಡೆ

ಮತ್ತೊಂದು ಮಾಹಿತಿ ಪ್ರಕಾರ ಶೆಟ್ಟರ್ ಗೆ ಟಿಕೆಟ್ ಕೈ ತಪ್ಪಲು ಜೋಶಿ ಕಾರಣ ಎನ್ನುವ ಸುದ್ದಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಶೆಟ್ಟರ್‌ಗೆ ಈ ಬಗ್ಗೆ ಸ್ಪಷ್ಟೀಕರಣ ನೀಡಲು ಅವರು ಮುಂದಾಗಿದ್ದಾರೆ.

ತಮ್ಮ ವಿರುದ್ಧ ಬಂದಿರುವ ಆರೋಪದಿಂದ ಮುಕ್ತವಾಗಲು ಜೋಶಿ, ಶೆಟ್ಟರ್ ಜೊತೆಗೆ ಮಾತುಕತೆ ನಡೆಸಲು ಅವರ ನಿವಾಸಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.

ಇತ್ತ ಇಂದೇ ತಮ್ಮ ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಜಗದೀಶ್ ಶೆಟ್ಟರ್ ಈಗ ಇನ್ನೆರಡು ದಿನಗಳಿಗೆ ಅದನ್ನು ಮುಂದೂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...