ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ : ಹಾಸನಕ್ಕೆ ಅಭ್ಯರ್ಥಿಯಾದ ಸ್ವರೂಪ್

Date:

  • ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ
  • ಸ್ವರೂಪ್ ಪಾಲಾದ ಹಾಸನ ವಿಧಾನಸಭಾ ಕ್ಷೇತ್ರ

ಹಾಸನದ ಟಿಕೆಟ್ ಸಲುವಾಗಿ ಜೆಡಿಎಸ್‌ನಲ್ಲಿ ಎದ್ದಿದ್ದ ಅಂತೆ ಕಂತೆಗಳ ಲೆಕ್ಕಾಚಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೆರೆ ಎಳೆದಿದ್ದಾರೆ.

- Advertisement -

ಇಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಕುಮಾರಸ್ವಾಮಿ, ಹಾಸನದಿಂದ ಸ್ವರೂಪ್ ನಮ್ಮ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕುಮಾರಸ್ವಾಮಿ ಪತ್ರಿಕಾಗೋಷ್ಠಿ ವೇಳೆ ಹೊಳೆನರಸೀಪುರ ಶಾಸಕ, ಕುಮಾರಸ್ವಾಮಿ ಸಹೋದರ ಎಚ್ ಡಿ ರೇವಣ್ಣ ಕೂಡ ಉಪಸ್ಥಿತರಿದ್ದರು.

ಹಾಸನ ಟಿಕೆಟ್ ವಿಚಾರದಲ್ಲಿ ದೇವೇಗೌಡರದ್ದೇ ಅಂತಿಮ ನಿರ್ಧಾರ ಎಂದಿದ್ದ ಇಬ್ಬರೂ ನಾಯಕರುಗಳು ಈಗ ಏಕಾಏಕಿ ಪತ್ರಿಕಾಗೋಷ್ಠಿ ನಡೆಸಿ ಪ್ರಕಾಶ್‌ಗೆ ಟಿಕೆಟ್ ಘೋಷಣೆ ಮಾಡಿ ಅಚ್ಚರಿ ಮೂಡಿಸಿದ್ದಾರೆ.

ಇದಾದ ಬಳಿಕ ಜೆಡಿಎಸ್ ಪಕ್ಷದ 49 ಉಮೇದುವಾರರ ಎರಡನೇ ಪಟ್ಟಿಯನ್ನೂ ಕುಮಾರಸ್ವಾಮಿ ಬಿಡುಗಡೆ ಮಾಡಿದರು.ಎರಡನೇ ಪಟ್ಟಿ

ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಹಾಸನದ ಟಿಕೆಟ್‌ ವಿಚಾರವಾಗಿ ಭವಾನಿ ಹಾಗೂ ರೇವಣ್ಣ ಅವರ ಜೊತೆಗೆ ಚರ್ಚೆ ಮಾಡಿಯೇ ನಿರ್ಧಾರ ತೆಗೆದುಕೊಂಡು ಅವರ ಸಹಮತದೊಂದಿಗೆ ಹಾಸನದಲ್ಲಿ ಸ್ವರೂಪ್‌ ಪ್ರಕಾಶ್‌ಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? : ಜೆಡಿಎಸ್‌ಗೆ ವರವಾದ ರಾಷ್ಟ್ರೀಯ ಪಕ್ಷಗಳ ಬಂಡಾಯ : ಕಾಂಗ್ರೆಸ್‌ನ ರಘು ಆಚಾರ್ ಸೇರಿದಂತೆ ಹಲವರ ಸೇರ್ಪಡೆ

ಎರಡನೇ ಪಟ್ಟಿಯಂತೆ ಕುಡುಚಿ ಕ್ಷೇತ್ರದಿಂದ ಆನಂದ್ ಮಾಳಗಿ, ರಾಯಭಾಗ ಕ್ಷೇತ್ರದಲ್ಲಿ ಪ್ರದೀಪ್ ಮಾಳಗಿ, ಅಥಣಿ ಶಶಿಕಾಂತ ಪಡಸಲಗಿ, ಜೇವರ್ಗಿ ದೊಡ್ಡಪ್ಪಗೌಡ ಪಾಟೀಲ್ ಗೆ ಟಿಕೆಟ್ ನೀಡಲಾಗಿದೆ.

ಕಡೂರಿನಲ್ಲಿ ಪಕ್ಷಕ್ಕೆ ಮರಳಿದ ವೈ ಎಸ್‌ ವಿ ದತ್ತ, ಸಕಲೇಶಪುರದಲ್ಲಿ ಮಾಜಿ ಪಕ್ಷಾಧ್ಯಕ್ಷ ಎಚ್‌ ಕೆ ಕುಮಾರಸ್ವಾಮಿ, ಬೇಲೂರಿನಿಂದ ಲಿಂಗೇಶ್‌, ಭಟ್ಕಳ – ನಾಗೇಂದ್ರ ನಾಯ್ಕ್, ಯಲ್ಲಾಪುರ -ನಾಗೇಶ್‌ ನಾಯ್ಕ್‌ , ಹಗರಿ ಬೊಮ್ಮನಹಳ್ಳಿ – ಪರಮೇಶ್ವರಪ್ಪ ನವರಿಗೆ ಟಿಕೆಟ್‌ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...