ರಾಜ್ಯ ವಿಧಾನಸಭಾ ಚುನಾವಣೆಗೆ 20 ದಿನ ಬಾಕಿ ಉಳಿದಿದ್ದು, ಏಳು ವಿಧಾನಸಭಾ ಕ್ಷೇತ್ರದಲ್ಲಿ ಬೇರೆ ಬೇರೆ ಪಕ್ಷಗಳ ಅಭ್ಯರ್ಥಿಗಳಿಗೆ ಅಧಿಕೃತವಾಗಿ ಜೆಡಿಎಸ್ ಬಾಹ್ಯ ಬೆಂಬಲ ಘೋಷಿಸಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರು ಬಾಹ್ಯ ಬೆಂಬಲ ಸೂಚಿಸಿರುವ ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಿದ್ದು, “ಕಲಬುರಗಿ ಗ್ರಾಮಾಂತರ ಕ್ಷೇತ್ರದಲ್ಲಿ ಸಿಪಿಐಎಂ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದಾರೆ.
ಬಾಗೇಪಲ್ಲಿ ಸಿಪಿಐಎಂ, ಕೆ ಆರ್ ಪುರಂ ಸಿಪಿಐಎಂ, ಸಿ ವಿ ರಾಮನ್ ನಗರ ಆರ್‌ಪಿಐ, ವಿಜಯನಗರ ಆರ್‌ಪಿಐ, ಮಹದೇವಪುರ ಆರ್‌ಪಿಐ ಅಭ್ಯರ್ಥಿಗಳಿಗೆ ಬೆಂಬಲ ನೀಡಿದೆ.
ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರವನಾರಾಯಣ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ.
