ಬೆಂಗಳೂರಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ ಜೆಡಿಎಸ್

Date:

Advertisements
  • ಸಿಲಿಕಾನ್ ಸಿಟಿ ಅಭಿವೃದ್ಧಿಗೆ ಹೊಸ ಯೋಜನೆ ಹಮ್ಮಿಕೊಂಡ ಜೆಡಿಎಸ್
  • ಪಕ್ಷದ ಪ್ರಣಾಳಿಕೆ ಅನಾವರಣಗೊಳಿದ ಮಾಜಿ ಪಿಎಂ ದೇವೇಗೌಡ

ರಾಜ್ಯದ ಚುಕ್ಕಾಣಿ ಹಿಡಿಯುವ ಆಶಯದೊಂದಿಗೆ ಅಮಿತೋತ್ಸಾಹದಲ್ಲಿ ಸಾಗುತ್ತಿರುವ ಪ್ರಾದೇಶಿಕ ಪಕ್ಷ ಜೆಡಿಎಸ್ ಈಗ ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯುವಂತೆ ಮತ್ತೊಂದು ಹೆಜ್ಜೆ ಇಟ್ಟಿದೆ.

ಎರಡೂ ಪಕ್ಷಗಳಿಗೂ ಮೊದಲೇ ರಾಜಧಾನಿ ಬೆಂಗಳೂರಿಗೆ ಪ್ರತ್ಯೇಕ ಪ್ರಣಾಳಿಕೆ ರೂಪಿಸಿರುವ ಪಕ್ಷ ಇಂದು ಅದನ್ನು ಬಿಡುಗಡೆ ಮಾಡಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಈ ಪ್ರಣಾಳಿಕೆ ಅನಾವರಣಗೊಳಿಸಿದ್ದಾರೆ. ಈ ಹಿಂದೆ ರಾಜ್ಯಕ್ಕೊಂದು ಭರವಸೆಯ ಪ್ರಣಾಳಿಕೆ ನೀಡಿದ್ದ ಜೆಡಿಎಸ್ ಈಗ ಉದ್ಯಾನ ನಗರಿಗೆ ಪ್ರತ್ಯೇಕ ಭರವಸೆ ನೀಡಿದೆ.

Advertisements

ಪದ್ಮನಾಭನಗರ ನಿವಾಸದಲ್ಲಿ ಬೆಂಗಳೂರು ಪ್ರಣಾಳಿಕೆ ಬಿಡುಗಡೆ ಮಾಡಿದ ದೇವೇಗೌಡ ಎಲ್ಲಾ ವರ್ಗಕ್ಕೂ ಅನುಕೂಲವಾಗುವ ರೀತಿ ಪ್ರಣಾಳಿಕೆ ಇದಾಗಿದೆ. ಬೆಂಗಳೂರು ಸಮಗ್ರ ಅಭಿವೃದ್ಧಿಗೆ ನಾವು ಬದ್ಧ. ಬೆಂಗಳೂರು ಸಾಕಷ್ಟು ಬೆಳೆದಿದೆ, 1 ಕೋಟಿಗೂ ಹೆಚ್ಚು ಜನ ಇದ್ದಾರೆ. ಬೆಂಗಳೂರಿನ ಸಮಸ್ಯೆ ಪರಿಹಾರದ ಬಗ್ಗೆ ಪ್ರಣಾಳಿಕೆಯಲ್ಲಿ ಪ್ರಕಟ ಮಾಡಿದ್ದೇವೆ ಎಂದವರು ಹೇಳಿದರು.

ಈ ಸುದ್ದಿ ಓದಿದ್ದೀರಾ?:ಕರ್ನಾಟಕದಲ್ಲಿ ನೆಮ್ಮದಿ ಬೇಕು ಎಂದರೆ ಬಿಜೆಪಿ ವಿರುದ್ಧ ಹೋರಾಡಲೇಬೇಕು: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರಿಗೆ ಸಂಬಂಧಿಸಿದಂತೆ ಜೆಡಿಎಸ್ ಪ್ರಣಾಳಿಕೆಯಲ್ಲಿ 8 ಭರವಸೆಗಳನ್ನು ನೀಡಲಾಗಿದೆ. ಸಾಮಾಜಿಕ ಭದ್ರತೆಗಳು ಮತ್ತು ಆರೋಗ್ಯ ಶ್ರೀರಕ್ಷೆ, ಮಹಾನಗರ ಪಾಲಿಕೆ ಆಡಳಿತ ಸುಧಾರಣೆ, ಶಿಕ್ಷಣ, ಆರೋಗ್ಯ, ಬೆಂಗಳೂರು ನಗರಕ್ಕೆ ಉತ್ತಮ ಸಾರಿಗೆ ವ್ಯವಸ್ಥೆ, ನಗರದಲ್ಲಿ ಹಸಿರೀಕರಣ ಮತ್ತು ಅರಣ್ಯೀಕರಣ, ನಗರದಲ್ಲಿನ ಕಣಿವೆ, ಕೆರೆಗಳ ಸಂರಕ್ಷಣೆ, ಕಾಲುವೆಗಳ ಪುನಶ್ಚೇತನ, ಕೋರಮಂಗಲ – ಚೆಲ್ಲಘಟ್ಟ ವ್ಯಾಲಿ ಏತ ನೀರಾವರಿ ಯೋಜನೆಯ ಆಧುನೀಕರಣ ಈ ಅಂಶಗಳನ್ನು ಪ್ರಣಾಳಿಕೆ ಒಳಗೊಂಡಿದೆ.

ಬೆಂಗಳೂರಿಗಾಗಿ ಜೆಡಿಎಸ್ ಪ್ರಮುಖ ಭರವಸೆಗಳು ಹೀಗಿವೆ:

  • ಖಾಸಗಿ ಶಾಲೆಗಳಲ್ಲಿ ದುಡಿಯುವ 10,000ಕ್ಕಿಂತ ಕಡಿಮೆ ವೇತನದ ಶಿಕ್ಷಕರಿಗೆ ಸಹಾಯಧನ.
  • ನಗರದ ಒಳಚರಂಡಿ ವ್ಯವಸ್ಥೆಯನ್ನು ಬಲಪಡಿಸುವುದು.
  • ಬಿಬಿಎಂಪಿ ವ್ಯಾಪ್ತಿಗೆ ಸೇರಿರುವ 110 ಗ್ರಾಮಗಳಿಗೆ ಕೊಳವೆ ಮಾರ್ಗದ ಮೂಲಕ ಕುಡಿಯುವ ನೀರು ಪೂರೈಕೆ.
  • ಸಭೆ ಸಮಾರಂಭಗಳಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ಬಳಕೆ ನಿಷೇಧ.
  • ತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆ ವ್ಯವಸ್ಥೆಯಲ್ಲಿ ಸುಧಾರಣೆ ತರುವುದು.
  • ಪಂಚರತ್ನ ಯೋಜನೆ ಅಡಿಯಲ್ಲಿ ಶಾಲಾ ಶಿಕ್ಷಣದಲ್ಲಿ ಸುಧಾರಣೆ.
  • ಮದರಸಾ ಸೇರಿದಂತೆ ಅಲ್ಪಸಂಖ್ಯಾತ ಸಮುದಾಯದ ಶಾಲೆಗಳಲ್ಲೂ ಹೊಸ ಶಿಕ್ಷಣ ನೀತಿ ಜಾರಿ.
  • ಬೆಂಗಳೂರು ಸಾರ್ವಜನಿಕ ಆರೋಗ್ಯ ಮಂಡಳಿ ರಚನೆ.
  • ಎಲ್ಲ ವಾರ್ಡ್ ಗಳಲ್ಲೂ 30 ಹಾಸಿಗೆಗಳ ಸಾಮರ್ಥ್ಯದ ಸುಸಜ್ಜಿತ ಆಸ್ಪತ್ರೆ ಆರಂಭ.
  • ಬೆಂಗಳೂರು ನಗರ ಮತ್ತು ಹೊರವಲಯ ಸೇರಿದಂತೆ ಸ್ಥಳೀಯ ರೈಲು ಯೋಜನೆ ಅನುಷ್ಠಾನ.
  • ದೀರ್ಘ ಕಾಲದಿಂದ ನನೆಗುದಿಗೆ ಬಿದ್ದಿರುವ ಹೊರವರ್ತುಲ ರಸ್ತೆ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವುದು.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X