ಹಳೆ ಮೈಸೂರು, ಬೆಂಗಳೂರು ಭಾಗದಲ್ಲಿ ಕಾಂಗ್ರೆಸ್‌ ಅಬ್ಬರ; ಜೆಡಿಎಸ್‌ ತತ್ತರ

Date:

Advertisements

ಹಳೆ ಮೈಸೂರು ಮತ್ತು ಬೆಂಗಳೂರು ಭಾಗದ 11 ಜಿಲ್ಲೆಗಳಲ್ಲಿ ಕಾಂಗ್ರೆಸ್‌ ಅಬ್ಬರಕ್ಕೆ ಜೆಡಿಎಸ್‌ ಬಲ ಸಂಪೂರ್ಣವಾಗಿ ಕುಸಿದುಹೋಗಿದೆ. 2018ರ ಚುನಾವಣೆಗೆ ಹೋಲಿಸಿದರೆ ಈ ಜಿಲ್ಲೆಗಳಲ್ಲಿ 14 ಸ್ಥಾನಗಳನ್ನು ಹೆಚ್ಚುವರಿ ಸ್ಥಾನಗಳನ್ನು ಕಾಂಗ್ರೆಸ್‌ ಗಳಿಸದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಹಾಸನ, ಮಂಡ್ಯ, ರಾಮನಗರ, ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಿದೆ. ಬೆಂಗಳೂರು ನಗರದಲ್ಲಿ ಮಾತ್ರ ಹಿಂದಿನ ಚುನಾವಣೆಗೆ ಹೋಲಿಸಿದರೆ ಕಾಂಗ್ರೆಸ್‌ ಈ ಬಾರಿ ಎರಡು ಸ್ಥಾನ ಕಳೆದುಕೊಂಡಿದೆ.

2018ರ ಚುನಾವಣೆಯಲ್ಲಿ 11 ಜಿಲ್ಲೆಗಳ ಒಟ್ಟು 89 ಕ್ಷೇತ್ರಗಳ ಪೈಕಿ ಬಿಜೆಪಿ 22, ಕಾಂಗ್ರೆಸ್‌ 34 ಮತ್ತು ಜೆಡಿಎಸ್‌ 31 ಸ್ಥಾನಗಳನ್ನು ಗಳಿಸಿದ್ದವು. ಒಂದು ಕಡೆ ಬಿಎಸ್‌ಪಿ ಮತ್ತು ಇನ್ನೊಂದು ಕಡೆ ಪಕ್ಷೇತರರು ಗೆದ್ದಿದ್ದರು. ಈ ಬಾರಿ ಕಾಂಗ್ರೆಸ್‌ 52 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ. ಜೆಡಿಎಸ್‌ ಬಲ 14ಕ್ಕೆ ಕುಗ್ಗಿದ್ದರೆ, ಬಿಜೆಪಿ ಕಳೆದ ಬಾರಿಗಿಂತ ಒಂದು ಸ್ಥಾನವನ್ನಷ್ಟೇ ಕಡಿಮೆ ಪಡೆದಿದೆ. ಈ ಬಾರಿಯೂ ಎರಡು ಕ್ಷೇತ್ರಗಳಲ್ಲಿ ಇತರರು ಗೆಲುವು ಸಾಧಿಸಿದ್ದು, ಮೇಲುಕೋಟೆಯಲ್ಲಿ ಸರ್ವೋದಯ ಕರ್ನಾಟಕ ಪಕ್ಷ ಹಾಗೂ ಗೌರಿಬಿದನೂರಿನಲ್ಲಿ ಪಕ್ಷೇತರ ಅಭ್ಯರ್ಥಿ ಜಯ ಗಳಿಸಿದ್ದಾರೆ.

Advertisements

ಜೆಡಿಎಸ್‌ನ ಭದ್ರ ಕೋಟೆಗಳಂತಿದ್ದ ಜಿಲ್ಲೆಗಳಲ್ಲೇ ಕಾಂಗ್ರೆಸ್‌ ಪ್ರಾಬಲ್ಯ ಮೆರೆದಿದೆ., ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್‌ ಸ್ವತಃ ಐದು ಸ್ಥಾನಗಳನ್ನು ಗೆದ್ದಿದ್ದರೆ, ಮೇಲುಕೋಟೆಯಲ್ಲೂ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಕಳೆದ ಚುನಾವಣೆಗಳಲ್ಲಿ ಪೂರ್ತಿ ಏಳು ಕ್ಷೇತ್ರಗಳನ್ನು ಗೆದ್ದು ಬೀಗಿದ್ದ ಜೆಡಿಎಸ್‌ ಈ ಬಾರಿ ಒಂದಕ್ಕೆ ಕುಸಿದಿದೆ. 2019ರಲ್ಲಿ ಆಪರೇಷನ್‌ ಕಮಲದಿಂದ ಬಿಜೆಪಿ ತೆಕ್ಕೆಗೆ ಹೋಗಿದ್ದ ಕೆ.ಆರ್‌ ಪೇಟೆ ಕ್ಷೇತ್ರವೂ ಕಾಂಗ್ರೆಸ್‌ ವಶಕ್ಕೆ ಬಂದಿದೆ.

ಮೈಸೂರಿನಲ್ಲಿ ಕಾಂಗ್ರೆಸ್ ಐದು ಕ್ಷೇತ್ರಗಳನ್ನು ಹೆಚ್ಚುವರಿಯಾಗಿ ಗೆದ್ದುಕೊಂಡಿದೆ. ಅಲ್ಲಿ ಬಿಜೆಪಿ ಎರಡು ಸ್ಥಾನ ಕಳೆದುಕೊಂಡಿದ್ದರೆ, ಜೆಡಿಎಸ್‌ ಮೂರನ್ನು ಕಳೆದುಕೊಂಡಿದೆ. ಬಿಜೆಪಿಯ ಭದ್ರ ನೆಲೆ, ‘ಕೇಸರಿ ರಾಜಕಾರಣ’ದ ನೆಲದಂತೆ ಬಿಂಬಿತವಾಗಿದ್ದ ಕೊಡಗು ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿಯೂ ಠೇವಣಿ ಕಳದುಕೊಂಡಿದ್ದು, ಕಾಂಗ್ರೆಸ್‌ಗೆ ಗೆಲುವಾಗಿದೆ. ತುಮಕೂರಿನಲ್ಲಿ ನಾಲ್ಕು, ಹಾಸನ, ಬೆಂಗಳೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ತಲಾ ಒಂದು ಕ್ಷೇತ್ರಗಳು ಕಾಂಗ್ರೆಸ್‌ಗೆ ಹೆಚ್ಚುವರಿಯಾಗಿ ಲಭಿಸಿವೆ.

ಬೆಂಗಳೂರು ನಗರದಲ್ಲಿ ಜೆಡಿಎಸ್‌ ಬಲ ಶೂನ್ಯಕ್ಕೆ ಇಳಿದಿದ್ದು, ಉಳಿದಂತೆ ಹೆಚ್ಚೇನೂ ಬದಲಾವಣೆಗಳಾಗಿಲ್ಲ. ಬಹುತೇಕ ಹಾಲಿ ಶಾಸಕರು ಗೆದ್ದು ಬಂದಿದ್ದಾರೆ. ರಾಮನಗರದಲ್ಲಿ ಜೆಡಿಎಸ್‌ನ ಕೋಟೆ ಕುಸಿದಿದ್ದು, ಕಾಂಗ್ರೆಸ್‌ ಸಂಪೂರ್ಣ ಮೇಲುಗೈ ಪಡೆದಿದೆ.‌

ಈ ಸುದ್ದಿ ಓದಿದ್ದೀರಾ? ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್‌ ದಿಗ್ವಿಜಯ; ನೆಲಕಚ್ಚಿದ ಬಿಜೆಪಿ

ಒಕ್ಕಲಿಗ ಮತದಾರರ ಪ್ರಾಬಲ್ಯವಿರುವ ಜಿಲ್ಲೆಗಳಲ್ಲಿ ಕಾಂಗ್ರೆಸ್‌ನ ಸಾಧನೆ ಬಹುತೇಕ ದ್ವಿಗುಣಗೊಂಡಿದೆ. ಜೆಡಿಎಸ್‌ ವರಿಷ್ಠ ಎಚ್‌ ಡಿ ದೇವೇಗೌಡ ಮತ್ತು ಎಚ್‌ ಡಿ ಕುಮಾರಸ್ವಾಮಿ ರಾಜಕೀಯವಾಗಿ ಬಿಗಿ ಹಿಡಿತ ಹೊಂದಿದ್ದ ಜಿಲ್ಲೆಗಳಲ್ಲಿ ಈ ಬಾರಿ ಕಾಂಗ್ರೆಸ್‌ ಮೇಲುಗೈ ಸಾಧಿಸಿದೆ. ಒಕ್ಕಲಿಗ ನಾಯಕತ್ವವನ್ನು ಬೆಂಬಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮಾಡಿದ ಮನವಿ ಇಲ್ಲಿ ಹೆಚ್ಚು ಕೆಲಸ ಮಾಡಿರುವಂತೆ ಗೋಚರಿಸುತ್ತಿದೆ.

ಉರಿಗೌಡ– ನಂಜೇಗೌಡರ ಕಲ್ಪಿತ ಕತೆಯನ್ನು ಹರಿಯಬಿಟ್ಟು ಈ ಭಾಗದಲ್ಲಿ ರಾಜಕೀಯ ಲಾಭ ಪಡೆಯಲು ಹೊರಟಿದ್ದ ಬಿಜೆಪಿ ಪ್ರಯತ್ನಕ್ಕೆ ಎಳ್ಲು ನೀರು ಬಿಟ್ಟಂತಾಗಿದೆ. ಈ ಕತೆಯನ್ನು ಹರಿಯಬಿಟ್ಟ ರಂಗಕರ್ಮಿ ಅಡ್ಡಂಡ ಕಾರ್ಯಪ್ಪ ಅವರ ತವರು ಜಿಲ್ಲೆ ಕೊಡಗಿನಲ್ಲೇ ಬಿಜೆಪಿ ಎರಡೂ ಕ್ಷೇತ್ರಗಳ ಠೇವಣಿ ಕಳೆದುಕೊಂಡಿದೆ.

ಒಕ್ಕಲಿಗರನ್ನೇ ಕೇಂದ್ರೀಕರಿಸಿ ರಾಜಕಾರಣ ಮಾಡುತ್ತಿದ್ದ ಜೆಡಿಎಸ್‌ ಈ ಬಾರಿಯೂ ಒಕ್ಕಲಿಗ ಸಮುದಾಯ ಪಕ್ಷದ ಕೈ ಹಿಡಿಯಬಹುದು ಎಂಬ ನಿರೀಕ್ಷೆಯಲ್ಲಿತ್ತು. ಅದೂ ಹಳೆ ಮೈಸೂರು, ಬೆಂಗಳೂರು ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿ ಪ್ರಾಬಲ್ಯ ಮುಂದುವರಿಯುತ್ತದೆ ಎಂಬ ವಿಶ್ವಾಸದಲ್ಲಿತ್ತು. ಆದರೆ, ಜೆಡಿಎಸ್‌ನ ಮತ ಬ್ಯಾಂಕ್‌ ಈ ಬಾರಿ ಕಾಂಗ್ರೆಸ್‌ನತ್ತ ಹರಿದುಹೋಗಿರುವುದು ನಿಚ್ಚಳವಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X