ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ; ಪೀಡೆ ತೊಲಗಿತು ಎಂದ ರಮೇಶ್ ಜಾರಕಿಹೊಳಿ

Date:

  • ಯಾರಿಗೂ ಹೆದರಬೇಡಿ ಎಂದ ಜಾರಕಿಹೊಳಿ
  • ಮಹೇಶ್ ಕುಮಟಳ್ಳಿ ವಿರುದ್ಧ ಸವದಿ ಕಣಕ್ಕೆ

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಲಕ್ಷ್ಮಣ ಸವದಿ ಅವರ ಕುರಿತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, “ಪೀಡೆ ತೊಲಗಿದಂತಾಗಿದೆ” ಎಂದಿದ್ದಾರೆ.

- Advertisement -

ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಅಥಣಿ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನಿರಾಕರಿಸಿ, ರಮೇಶ್ ಜಾರಕಿಹೊಳಿ ಬೆಂಬಲಿತ ಮಹೇಶ್ ಕುಮಟಳ್ಳಿ ಅವರಿಗೆ ಟಿಕೆಟ್ ನೀಡಲಾಗಿತ್ತು. ಈ ಬೆನ್ನಲ್ಲೇ ಬಿಜೆಪಿ ವಿರುದ್ಧ ಬಂಡಾಯ ಸಾರಿದ್ದ ಸವದಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಕುರಿತು ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿರುವ ರಮೇಶ್ ಜಾರಕಿಹೊಳಿ, “ಲಕ್ಷ್ಮಣ ಸವದಿ ಕಳೆದ ಚುನಾವಣೆಯಲ್ಲಿ ಸೋತಿದ್ದರು ಸಹ ಅವರನ್ನು ಬಿಜೆಪಿ ಉಪಮುಖ್ಯಮಂತ್ರಿ ಮಾಡಿತ್ತು. ಆದರೆ, ಅವನು ಪಕ್ಷ ನಿಷ್ಠೆ ತೋರಿಸಿಲ್ಲ” ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.

“ಸವದಿ ಪಕ್ಷ ಬಿಟ್ಟು ಹೋಗಿದ್ದು ನಮಗೆ ಒಳ್ಳೆಯದೆ. ನಾನು ಕಾಂಗ್ರೆಸ್‌ ಸೇರುತ್ತೇನೆ ಎಂದು ಸವದಿ ಭಾವಿಸಿದ್ದನು. ನನಗೆ ಮಂತ್ರಿ ಸ್ಥಾನ ನೀಡದಿದ್ದರೂ ನಾನು ಪಕ್ಷದಲ್ಲೇ ಇದ್ದೇನೆ. ಉದ್ದ ಅಂಗಿ ಹಾಕಿರುವವನು ಪಕ್ಷದಿಂದ ಹೊರನಡೆದಿದ್ದಾನೆ. ನನಗೆ ಸಂತೋಷ ತಂದಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಬಿ.ಎಲ್ ಸಂತೋಷ್-ಯಡಿಯೂರಪ್ಪರ ದೋಸ್ತಿ-ಕುಸ್ತಿಗೆ ಕಂಗಾಲಾದ ಕರ್ನಾಟಕ

“ಒಂದೂವರೆ ವರ್ಷದಿಂದ ಸವದಿ ಮಂತ್ರಿಯಾಗಿದ್ದರೂ ಅಥಣಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗಿರಲಿಲ್ಲ. ಸವದಿಯನ್ನು ವಿಶೇಷ ವಿಮಾನದಲ್ಲಿ ಡಿಕೆ ಶಿವಕುಮಾರ್ ಕರೆದುಕೊಂಡು ಹೋಗಿದ್ದಾನೆ. ಡಿಕೆಶಿ ಕುತಂತ್ರಿ” ಎಂದಿದ್ದಾರೆ.

“ಮಹೇಶ್‌ ಕುಮಟಳ್ಳಿ ಅವರನ್ನು ಕ್ಷೇತ್ರದ ಜನರು ಗೆಲ್ಲಿಸಬೇಕು. ಲಕ್ಷ್ಮಣ ಸವದಿ ಸೋಲಬೇಕು. ನಾನು ಅಥಣಿಯಲ್ಲಿ ಇರುತ್ತೇನೆ. ಹಾಗೂ ಬೆಳಗಾವಿ ಗ್ರಾಮೀಣ ಭಾಗದಲ್ಲಿ ಇರುತ್ತೇನೆ. ನೀವು ನನಗೆ ಶಕ್ತಿ ಆಗಬೇಕು” ಎಂದು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

“ಯಾವುದೇ ದಬ್ಬಾಳಿಕೆಗೆ ಹೆದರಬೇಡಿ. ಅಥಣಿ ಕ್ಷೇತ್ರದಲ್ಲಿ ನಾನು ಬರುತ್ತೇನೆ. ಇಷ್ಟು ದಿನ ಲಕ್ಷ್ಮಣ ಸವದಿ ನಮ್ಮ ಪಕ್ಷದಲ್ಲಿ ಇದ್ದರು ಎಂದು ನಾನು ಸುಮ್ಮನೆ ಇದ್ದೆ. ಇನ್ನು ಮೇಲೆ ನಾನು ಇಲ್ಲೇ ಇರುತ್ತೇನೆ“ ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....