ಕಲಬುರಗಿ | ಬಿಜೆಪಿ ಡೇಟಾ ಕಾಲ್ ಸೆಂಟರ್ ಮೇಲೆ ಪೊಲೀಸರ ದಾಳಿ

Date:

ರಾಜ್ಯಾದ್ಯಂತ ಇಂದು (ಬುಧವಾರ) ಮತದಾನ ನಡೆಯುತ್ತಿದೆ. ಇದೇ ಸಮಯದಲ್ಲಿ, ಕಲಬುರಗಿಯ ಸಂಗಮ ಕಾಂಪ್ಲೆಕ್ಸ್‌ನಲ್ಲಿರುವ ಬಿಜೆಪಿ ಡೇಟಾ ಕಾಲ್ ಸೆಂಟರ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಕಲಬುರಗಿ ನಗರ ಪೊಲೀಸ್ ‌ಕಮಿಷನರ್ ಚೇತನ್ ಆರ್ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು ಯುವತಿ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕೆಲವರು ಪರಾರಿ ಆಗಿದ್ದಾರೆ ಎಂದು ವರದಿಯಾಗಿದೆ.

“ಕಳೆದ ಮೂರು ತಿಂಗಳಿಂದ ಸಕ್ರಿಯವಾಗಿ ಈ ಕಾಲ್ ಸೆಂಟರ್‌ ಮತದಾರರಿಗೆ ನಿರಂತರವಾಗಿ ಕರೆ ಮಾಡಿ ಬಿಜೆಪಿಗೆ ಮತ ಹಾಕುವಂತೆ ಮನವೊಲಿಕೆ ಮಾಡುತ್ತಿತ್ತು. ಮತದಾನದ ದಿನವಾದ ಬುಧವಾರ ಮುಂಜಾನೆ 4 ಗಂಟೆ ಸುಮಾರಿಗೆ ಯುವತಿಯರನ್ನು ಸೆಂಟರ್‌ಗೆ ಕರೆ ತಂದು ಅವರಿಂದ ಮತದಾರರಿಗೆ ಕರೆ ಮಾಡಿಸಲಾಗಿದೆ. ಕಾಂಗ್ರೆಸ್‌ಗೆ ಮತ ಹಾಕುವುದನ್ನು ತಪ್ಪಿಸುವುದನ್ನೇ ಟಾರ್ಗೆಟ್ ಮಾಡಿಕೊಂಡು ಮನವೊಲಿಕೆ ಮಾಡಲಾಗುತ್ತಿತ್ತು” ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯರು ಮತದಾನದ ಕಾರಣ ಕೆಲಸಕ್ಕೆ ಬರಲು ಹಿಂದೇಟು ಹಾಕಿ, ಮತಚಲಾಯಿಸಲು ಹೋಗುವುದಾಗಿ ಹೇಳಿದ್ದರು. ಕಾಲ್ ಸೆಂಟರ್‌ನಲ್ಲಿಯೇ ಮತ ಹಾಕುವ ವ್ಯವಸ್ಥೆ ಮಾಡಲಾಗಿದೆ ಎಂದು ನಂಬಿಸಿ ಕರೆ ತರಲಾಗಿತ್ತು. ಆ ಬಳಿಕ‌‌‌ ಅವರಿಂದ ಕರೆ ಮಾಡಿಸಿದ್ದಾರೆ ಎಂದು‌ ಕಾಂಗ್ರೆಸ್ಸಿಗರು ದೂರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...