ಭೀಮಾ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಯಲು ಹೋಗಿದ್ದ ಪೊಲೀಸ್ ಪೇದೆಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ.
ಲೋಗಿ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮೈಸೂರ್ ಚೌಹಾಣ್ ಹತ್ಯೆಗೀಡಾದ ಹೆಡ್ ಕಾನ್ಸ್ಟೇಬಲ್ ಎಂದು ಗುರುತಿಸಲಾಗಿದೆ. ತಾಲೂಕಿನ ನಾರಾಯಣಪುರ ಬಳಿ ಗುರುವಾರ ರಾತ್ರಿ ಟ್ರ್ಯಾಕ್ಟರ್ ಹರಿಸಿ ಚೌಹಾಣ್ ಅವರನ್ನು ಹತ್ಯೆಗೈಯಲಾಗಿದೆ.
ರಾತ್ರಿ 10 ಗಂಟೆ ಸುಮಾರಿಗೆ ಚೌಹಾಣ್ ಅವರು ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಪರಿಶೀಲನೆ ನಡೆಸಲು ತೆರಳಿದ್ದರು. ಈ ವೇಳೆ, ಬೈಕ್ನಲ್ಲಿ ಹೋಗುತ್ತಿದ್ದ ಚೌಹಾಣ್ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಚೌಹಾಣ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.