ಚುನಾವಣೆ 2023 | ನ್ಯಾಯಾಧೀಶರ ಹುದ್ದೆಗೆ ರಾಜೀನಾಮೆ ನೀಡಿ ‘ರಾಜಕೀಯ’ಕ್ಕಿಳಿದ ರಾಠೋಡ್

Date:

Advertisements
  • ನ್ಯಾಯಾಂಗ ಸೇವೆಗೆ ರಾಜೀನಾಮೆ ನೀಡಿ, ಜೆಡಿಎಸ್‌ ಸೇರಿದ್ದಾರೆ
  • ಕಿರಿಯ ಸಿವಿಲ್‌ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದರು

ರಾಜ್ಯದಲ್ಲಿ ಹದಗೆಡುತ್ತಿರುವ ವ್ಯವಸ್ಥೆಯನ್ನು ಸರಿ ದಾರಿಗೆ ತರುವ ಕನಸು ಕಟ್ಟಿಕೊಂಡು ಸಿವಿಲ್‌ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ಸುಭಾಶ್ಚಂದ್ರ ರಾಠೋಡ್, ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ರಾಜಕೀಯಕ್ಕಿಳಿದಿದ್ದಾರೆ.

ಸುಭಾಶ್ಚಂದ್ರ ರಾಠೋಡ್ ಅವರು ಮೂಲತಃ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಸಂಕದಾಳ ಗ್ರಾಮದವರು. ಕಳೆದ 7 ವರ್ಷಗಳಿಂದ ಇವರು ಕಿರಿಯ ಸಿವಿಲ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದರು. ನ್ಯಾಯಾಂಗ ಸೇವೆಗೆ ರಾಜೀನಾಮೆ ನೀಡಿ, ಜೆಡಿಎಸ್‌ ಸೇರಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ಮೀಸಲು ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿಯಾಗಿ ಕಣ್ಣಕ್ಕಿಳಿದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಳೆಗಾಲಕ್ಕೂ ಮುನ್ನ ಕೆರೆಗಳ ಪುನಶ್ಚೇತನ ಕಾಮಗಾರಿ ಮಾಡಿ ; ಆಕ್ಷನ್ ಏಡ್ ಸಂಸ್ಥೆ

Advertisements

ಕಾನೂನು ವಿದ್ಯಾರ್ಥಿಯಾಗಿದ್ದಾಗಲೇ ‘ಭ್ರಷ್ಟಾಚಾರ ಮುಕ್ತ ನಾವು-ಸಮಾಜ’ ಎಂಬ ಸಂಘಟನೆ ಕಟ್ಟಿಕೊಂಡು ರಾಠೋಡ್ ಹೋರಾಟ ನಡೆಸುತ್ತಿದ್ದರು. ಅವರು ಅಣ್ಣಾ ಹಜಾರೆ, ಸಾಮಾಜಿಕ ಕಾರ್ಯಕರ್ತ ಎಸ್‌.ಆರ್‌ ಹಿರೇಮಠ, ಲೋಕಾಯುಕ್ತ ಸಂತೋಷ ಹೆಗ್ಡೆ ಅವರಿಂದ ಸ್ಫೂರ್ತಿ ಪಡೆದಿದ್ದಾಗಿ ಹೇಳಿಕೊಂಡಿದ್ದರು. ಇದೀಗ, ನ್ಯಾಯಾಧೀಶ ಹುದ್ದೆ ತೊರೆದು, ರಾಜಕೀಯಕ್ಕೆ ಇಳಿದಿದ್ದಾರೆ.

ಈ ಬಗ್ಗೆ ಮಾತನಾಡಿದ ಚಿತ್ತಾಪುರದ ಜೆಡಿಎಸ್‌ ಅಭ್ಯರ್ಥಿ ಸುಭಾಶ್ಚಂದ್ರ ರಾಠೋಡ್, “ರಾಜಕೀಯದಲ್ಲಿ ಪ್ರಾಮಾಣಿಕರ ಸಂಖ್ಯೆ ಕುಗ್ಗುತ್ತಿದ್ದು, ಅಪ್ರಾಮಾಣಿಕರ ಸಂಖ್ಯೆ ಹೆಚ್ಚಳವಾಗುತ್ತಿದೆ. ಪ್ರಜಾಪ್ರಭುತ್ವದ ಪ್ರಮುಖ ಕಂಬ ಕುಗ್ಗುತ್ತಿರುವುದನ್ನು ಕುಳಿತು ನೋಡಲು ನನ್ನಿಂದ ಆಗಲಿಲ್ಲ. ಹಾಗಾಗಿ, ರಾಜಕೀಯ ಸೇರಿದೆ. ಇದರಿಂದಲಾದರೂ ಹೆಚ್ಚೆಚ್ಚು ಜನರಿಗೆ ಧ್ವನಿ, ನ್ಯಾಯ ಕೊಡಬಹುದು. ರಾಜಕೀಯ ರಂಗದಲ್ಲಿ ಸುಧಾರಣೆ ತರಬಹುದು ಎಂಬುದು ನನ್ನ ಬಲವಾದ ನಂಬಿಕೆ. ಆ ನಂಬಿಕೆಯಲ್ಲೇ ನ್ಯಾಯಾಧೀಶ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X