ಕಲಬುರಗಿ | ಎಲ್‌ಪಿಜಿ ದರ ಏರಿಕೆ ವಿರೋಧಿಸಿ ಆಟೋ ಚಾಲಕರ ಪ್ರತಿಭಟನೆ

Date:

ಎಲ್‌ಪಿಜಿ ಗ್ಯಾಸ್‌ ದರವನ್ನು ಏಕಾಏಕಿ ಹೆಚ್ಚಿಸಿರುವುದನ್ನು ಖಂಡಿಸಿ ಆಟೋ ಚಾಲಕರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

- Advertisement -

ಗ್ಯಾಸ್‌ ಬಂಕ್ ಮಾಲೀಕರು ಯಾವುದೇ ಸ್ಪಷ್ಟ ಕಾರಣವಿಲ್ಲದೆ ದರ ಏರಿಕೆ ಮಾಡಿರುವುದು ಬಡ ಆಟೋ ಚಾಲಕರ ಮೇಲೆ ಭಾರೀ ಹೊರೆ ಆಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈಗಾಗಲೇ ನಗರದಲ್ಲಿ ಆಟೋಗಳ ಸಂಖ್ಯೆ ಹೆಚ್ಚಿರುವುದರಿಂದ ಸಮರ್ಪಕ ಆದಾಯ ಸಿಗುತ್ತಿಲ್ಲ. ಇಂತಹ ಸಂಕಷ್ಟದ ನಡುವೆಯೇ ದರ ಏರಿಕೆ ಮಾಡಿರುವುದು ಅವರ ಬದುಕಿಗೆ ಮತ್ತಷ್ಟು ಕಷ್ಟ ತಂದಿದೆ ಎಂದು ಹೇಳಿದರು.

‘ದಿನಪೂರ್ತಿ ಆಟೋ ಚಲಾಯಿಸಿದರೂ ಹೊಟ್ಟೆಪಾಡಿಗೂ ಹಣ ಸಾಕಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ದರ ಏರಿಕೆ ಅಸಹನೀಯವಾಗಿದೆ’ ಎಂದು ಚಾಲಕರು ಬೇಸರ ವ್ಯಕ್ತಪಡಿಸಿದರು.

‘ಪೆಟ್ರೋಲ್, ಡೀಸೆಲ್ ಹಾಗೂ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರಗಳಲ್ಲಿ ಏರಿಕೆ ಇಲ್ಲದಿದ್ದರೂ ಆಟೋಗಳಿಗೆ ಬಳಸುವ ಎಲ್‌ಪಿಜಿ ದರವನ್ನು ಮಾತ್ರ ಹೆಚ್ಚಿಸಿರುವುದು ಉದ್ದೇಶಪೂರ್ವಕ ಕ್ರಮವಾಗಿದೆ. ಈ ಮೂಲಕ ಗ್ಯಾಸ್ ಏಜೆನ್ಸಿಗಳು ಅನ್ಯಾಯವಾಗಿ ಹಣ ವಸೂಲಿ ಮಾಡುತ್ತಿವೆ’ ಎಂದು ಆರೋಪಿಸಿದರು.

‘ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ದರ ಏರಿಕೆಯನ್ನು ಹಿಂಪಡೆಯಬೇಕು. ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ದರ ಹೆಚ್ಚಿಸಬಾರದು’ ಎಂದು ಒತ್ತಾಯಿಸಿದರು.

ಒಂದು ವೇಳೆ ನಮ್ಮ ಮನವಿಗೆ ಸ್ಪಂದಿಸದಿದ್ದರೆ, ನಗರದಲ್ಲಿನ ಎಲ್ಲಾ ಆಟೋ ಚಾಲಕರ ನೇತೃತ್ವದಲ್ಲಿ ಕಲಬುರಗಿ ಬಂದ್‌ಗೆ ಕರೆ ನೀಡುವುದಾಗಿ ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಕೃಷಿ ಹೊಂಡದಲ್ಲಿ ಮುಳುಗಿ ನಾಲ್ಕು ಮಕ್ಕಳ ದುರ್ಮರಣ

ಈ ಸಂದರ್ಭದಲ್ಲಿ ಶ್ರೀರಾಮ ಸೇನೆ ಜಿಲ್ಲಾ ಅಧ್ಯಕ್ಷ ಲಕ್ಷ್ಮಿಕಾಂತ್ ಸ್ವಾದಿ ಸೇರಿದಂತೆ ಶಾಂತಪ್ಪ ಕಟ್ಟಾ, ಅಭಿಷೇಕ್ ಭುವಿ, ಅಲೋಕ್ ಮಾಡೇದ, ಜಗನ್ನಾಥ ಹರಸೂರ್, ಅಭಿಷೇಕ್ ಠಾಕುರ, ಅಂಬರೀಷ್ ಜಮಾದಾರ್, ಭೀಮಾಶಂಕರ ಹಾಗೂ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಅಕ್ರಮ ಮರಳುಗಾರಿಗೆ ತಡೆಯಲು ಹೋಗಿದ್ದ ಪೇದೆ ಹತ್ಯೆ

ಭೀಮಾ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಯಲು ಹೋಗಿದ್ದ ಪೊಲೀಸ್‌...

ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್‌ ದಿಗ್ವಿಜಯ; ನೆಲಕಚ್ಚಿದ ಬಿಜೆಪಿ

ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದೆ. ರಾಜ್ಯದ 224 ಕ್ಷೇತ್ರಗಳ...

ಕಲಬುರ್ಗಿ | ಸಾಮಾಜಿಕ ನ್ಯಾಯ ನೀಡಲು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆ: ಪ್ರಿಯಾಂಕ್‌ ಖರ್ಗೆ

ಬಿಜೆಪಿ ಅಭ್ಯರ್ಥಿ ರೌಡಿ ಶೀಟರ್‌ ಮಣಿಕಂಠ ರಾಠೋಡ ವಿರುದ್ದ ಗೆಲವು ಚಿತ್ತಾಪುರ ಕ್ಷೇತ್ರದ...

ಕಲಬುರಗಿ | ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿರುವ ಘಟನೆ ಕಲಬುರಗಿ...