ಕಲಬುರಗಿ | ತೀವ್ರ ಹದಗೆಟ್ಟ ಶಹಾಬಾದ್‌ – ಜೇವರ್ಗಿ ರಸ್ತೆ; ಅ.9 ರಂದು ರಸ್ತೆ ತಡೆ ಪ್ರತಿಭಟನೆ

Date:

ಸಂಪೂರ್ಣ ಹದಗಟ್ಟಿರುವ ಶಹಾಬಾದ್‌ – ಜೇವರ್ಗಿ ರಸ್ತೆಯ ದುರಸ್ಥಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅ.9ರಂದು ವಾಡಿ ಕ್ರಾಸ್‌ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಅನಿರ್ಧಿಷ್ಟಾವಧಿ ಕಾಲ ಧರಣಿ ನಡೆಸಲು ಪ್ರಗತಿಪರ ಸಂಘಟನೆಗಳು ಹಾಗೂ ಪ್ರಗತಿಪರ ಒಕ್ಕೂಟ ನಿರ್ಧರಿಸಿದೆ.

- Advertisement -

ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರೆಪ್ಪಾ ಹಳ್ಳಿ, “ಶಹಾಬಾದ್‌ ತಾಕೂಕು ಕೇಂದ್ರವಾಗಿದ್ದರೂ ಜನಪ್ರತಿನಿಧಿಗಳ ಇಚ್ಚಾಶಕ್ತಿ ಕೊರತೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ತಾಲೂಕಿನ ಪ್ರಗತಿ ಶೂನ್ಯವಾಗಿದೆ. ಹಲವು ಬಾರಿ ಶಹಾಬಾದ್‌ – ಜೇವರ್ಗಿ ನಡುವಿನ ರಸ್ತೆ ನಿರ್ಮಿಸಿದರೂ ಹಾಳಾಗುತ್ತಿದ್ದು, ಹೊಸ ರಸ್ತೆ ನಿರ್ಮಿಸುವಂತೆ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ವಾಡಿ ಕ್ರಾಸ್‌ನಿಂದ ಮರಗೊಳ ಕ್ರಾಸ್‌, ಜೇವರ್ಗಿ ಕ್ರಾಸ್‌ ವರೆಗೆ 17 ಕಿ.ಮೀ. ರಸ್ತೆ ಸಂಪೂರ್ಣ ಹದಗೆಟ್ಟಿದೆ. ಕಳೆದು ಎರಡ್ಮೂರು ವರ್ಷಗಳಿಂದ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಆರೋಪಿಸಿದ್ದಾರೆ.

“ಅ.9 ರಂದು ನಡೆಯುವ ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಹಾಗೂ ತಾಲ್ಲೂಕಿನ ಸುಮಾರು ಎರಡು ಸಾವಿರ ಜನರು ಭಾಗವಹಿಸಲಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಬರುವವರೆಗೂ ಪ್ರತಿಭಟನೆ ಮುಂದುವರೆಯುತ್ತದೆ” ಎಂದು ತೀಳಿಸಿದ್ದಾರೆ.

“ಜಿಲ್ಲೆಯಲ್ಲಿ ತಹಸೀಲ್ದಾರ್ ಕಚೇರಿ, ನಗರಸಭೆ ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ಎಗ್ಗಿಲ್ಲದೆ ಭ್ರಷ್ಟಾಚಾರ ನಡೆಯುತ್ತಿದೆ. ಹಣ ಕೊಡದೆ ಯಾವುದೇ ಕೆಲಸಗಳು ಆಗುತ್ತಿಲ್ಲ. ಇದರಿಂದ ಸಾರ್ವಜನಿಕರು ಅಲೆದಾಡುವಂತಾಗಿದೆ. ಇನ್ನು ಹಣ ನೀಡಿದರೆ ಮಾತ್ರ ಸಾಮಾನ್ಯ ಸಭೆಗೆ ಹಾಜರಾಗುತ್ತೇವೆಂದು ಜನಪ್ರತಿನಿಧಿಗಳು ರಾಜಾರೋಷವಾಗಿ ಹೇಳುತ್ತಾರೆ” ಎಂದು ದೂರಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿವಾಹೇತರ ಸಂಬಂಧ ಹೊಂದಿರುವ ಪತ್ನಿಯು ಪತಿಯಿಂದ ಜೀವನಾಂಶ ಕೇಳುವಂತಿಲ್ಲ: ಹೈಕೋರ್ಟ್‌

ಪತ್ರಿಕಾಗೋಷ್ಠಿಯಲ್ಲಿ ಎಸ್.‌ ಎಚ್.‌ ರಾಘವೇಂದ್ರ,  ಪೂಜಪ್ಪಾ ಮೇತ್ರಿ, ವಿಶ್ವನಾಥ ಫಿರೋಜಾಬಾದ್, ಮಲ್ಲಣ್ಣ ಮಸ್ಕಿ, ಕಿರಣ, ಯಲ್ಲಾಲಿಂಗ, ಗಣಪತರಾವ ಮಾನೆ ಸೇರಿದಂತೆ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...