ʼರಾಘವೇಂದ್ರ ಸ್ಟೋರ್ಸ್‌ʼ ಚಿತ್ರಕ್ಕೆ ತಟ್ಟಿದ ಚುನಾವಣಾ ಕಾವು

Date:

ಬಿಜೆಪಿ ಅಭ್ಯರ್ಥಿಗಳ ಪರ ಜಗ್ಗೇಶ್‌ ಪ್ರಚಾರ

- Advertisement -

ಸಿನಿಮಾ ಪ್ರದರ್ಶನಕ್ಕೆ ಸ್ಥಳೀಯರ ಆಕ್ಷೇಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸ್ಯಾಂಡಲ್‌ವುಡ್‌ನ ಹಿರಿಯ ನಟ ಜಗ್ಗೇಶ್‌ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ʼರಾಘವೇಂದ್ರ ಸ್ಟೋರ್ಸ್‌ʼ ಸಿನಿಮಾ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಆದರೆ, ಸದ್ಯ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆ ಜಗ್ಗೇಶ್‌ ನಟಿಸಿರುವ ಈ ಚಿತ್ರವನ್ನು ಪ್ರದರ್ಶನ ಮಾಡದಂತೆ ದಾವಣಗೆರೆಯ ʼಗೀತಾಂಜಲಿʼ ಥಿಯೇಟರ್‌ ಮಾಲೀಕರಿಗೆ ಚುನಾವಣಾ ಅಧಿಕಾರಿಗಳು ಸೂಚಿಸಿದ್ದಾರೆ.

ಬಿಜೆಪಿಯ ರಾಜ್ಯಸಭಾ ಸದಸ್ಯರಾಗಿರುವ ಜಗ್ಗೇಶ್‌ ರಾಜ್ಯಾದ್ಯಂತ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದಾರೆ. ಈ ಹಿನ್ನೆಲೆ ಅವರು ಮುಖ್ಯಭೂಮಿಕೆಯಲ್ಲಿ ನಟಿಸಿರುವ ʼರಾಘವೇಂದ್ರ ಸ್ಟೋರ್ಸ್‌ʼ ಚಿತ್ರದ ಪ್ರದರ್ಶನಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸ್ಥಳೀಯರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ದೂರು ಸ್ವೀಕರಿಸಿರುವ ಅಧಿಕಾರಿಗಳು ಬುಧವಾರ ಬೆಳಗ್ಗೆ ʼಗೀತಾಂಜಲಿʼ ಥಿಯೇಟರ್‌ಗೆ ಭೇಟಿ ನೀಡಿ ಜಗ್ಗೇಶ್‌ ಅವರ ಸಿನಿಮಾವನ್ನು ಪ್ರದರ್ಶನ ಮಾಡದಂತೆ ಮಾಲೀಕರಿಗೆ ಸೂಚಿಸಿದ್ದಾರೆ. ಜೊತೆಗೆ ಥಿಯೇಟರ್‌ ಮುಂಭಾಗದಲ್ಲಿ ಅಂಟಿಸಲಾಗಿದ್ದ ʼರಾಘವೇಂದ್ರ ಸ್ಟೋರ್ಸ್‌ʼ ಚಿತ್ರದ ಪೋಸ್ಟರ್‌ನಲ್ಲಿ ಜಗ್ಗೇಶ್‌ ಅವರ ಮುಖ ಕಾಣದಂತೆ ಬಿಳಿ ಪಟ್ಟಿಯನ್ನು ಕೂಡ ಅಂಟಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಭಿವೃದ್ಧಿ ಹೆಸರಲ್ಲಿ ಕೆರೆ ನಾಶ : ಬಿಬಿಎಂಪಿ ವಿರುದ್ಧ ಕಿಶೋರ್‌ ಆಕ್ರೋಶ

ಆದರೆ, ಥಿಯೇಟರ್‌ ಮಾಲೀಕರು ಚುನಾವಣಾ ಅಧಿಕಾರಿಗಳ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಗ್ಗೇಶ್‌ ಚುನಾವಣೆಗೆ ಸ್ಪರ್ಧಿಸಿಲ್ಲ, ಬದಲಿಗೆ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದಾರೆ. ಅವರಂತೆ ಕನ್ನಡದ ಹಲವು ನಟರು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಹೀಗಾಗಿ ʼರಾಘವೇಂದ್ರ ಸ್ಟೋರ್ಸ್‌ʼ ಸಿನಿಮಾ ಪ್ರದರ್ಶನದಿಂದ ನೀತಿ ಸಂಹಿತೆ ಉಲ್ಲಂಘನೆಯಾಗುವುದಿಲ್ಲ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ. ನಂತರ ಸಿನಿಮಾ ಪ್ರದರ್ಶನಕ್ಕೆ ಒಪ್ಪಿಗೆ ಸೂಚಿಸಿರುವ ಅಧಿಕಾರಿಗಳು, ಥಿಯೇಟರ್‌ ಮುಂಭಾಗದಲ್ಲಿರುವ ಸಿನಿಮಾ ಪೋಸ್ಟರ್‌ನಲ್ಲಿ ಜಗ್ಗೇಶ್‌ ಅವರ ಮುಖ ಕಾಣದಂತೆ ಮುಚ್ಚಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...

ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) 'ಅತ್ಯುತ್ತಮ...

‘ವೆಟ್ಟುವಂ’ | ಪಾ ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ!

ನಿರ್ದೇಶಕ ಪಾ ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್...