ಕೋಲಾರ | ಬಿಜೆಪಿ ಅಭ್ಯರ್ಥಿ ಪರ ನಟ ದರ್ಶನ್ ಮತಯಾಚನೆ

Date:

ಕೋಲಾರ ಜಿಲ್ಲೆಯ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ ನಾರಾಯಣಸ್ವಾಮಿ ಪರವಾಗಿ ನಟ ದರ್ಶನ್‌ ಪ್ರಚಾರ ನಡೆಸಿದ್ದು, ಮತಯಾಚನೆ ಮಾಡಿದ್ದಾರೆ.

- Advertisement -

ಬಂಗಾರಪೇಟೆಯಲ್ಲಿ ತೆರೆದ ವಾಹನದಲ್ಲಿ ಬಿಜೆಪಿ ಅಭ್ಯರ್ಥಿಯೊಂದಿಗೆ ನಟ ದರ್ಶನ್‌ ರೋಡ್‌ ಶೋ ನಡೆಸಿದ್ದು, ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು. ರಸ್ತೆಯಲ್ಲಿ ನೂಕುನುಗ್ಗಲು ಉಂಟಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪಟ್ಟಣದ ಕೋಲಾರ ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ದರ್ಶನ್ ಮಾಲಾರ್ಪಣೆ ಮಾಡುವ ಮೂಲಕ ತೆರೆದ ವಾಹನದಲ್ಲಿ ರೋಡ್ ಶೋ ಆರಂಭಿಸಿದರು. ನೆರೆದ ಜನರಿಗೆ ಕೈ ಬೀಸುತ್ತ ಅಭಿಮಾನಿಗಳನ್ನು ಖುಷಿಪಡಿಸಿದರು.

ನಂತರ ಕುವೆಂಪು ವೃತ್ತದಲ್ಲಿ ನೆರೆದಿದ್ದವರನ್ನು ಉದ್ದೇಶಿಸಿ ಮಾತನಾಡಿದ ದರ್ಶನ್, “ಬಂಗಾರಪೇಟೆ ಜನರ ಮನಸು ಬಂಗಾರದಂತಿದೆ. ನಿಮ್ಮ ಈ ಪ್ರೀತಿ ಅಭಿಮಾನಕ್ಕೆ ನಾನು ಚಿರಋಣಿ. ನಾನು ಹಲವು ಬಾರಿ ಪಟ್ಟಣಕ್ಕೆ ಬಂದಾಗ ಇಲ್ಲಿನ ಪಾನಿಪೂರಿ ಸವಿದು ಹೋಗುತ್ತೇನೆ. ಆದರೆ ಯಾರಿಗೂ ಗೊತ್ತಾಗುತ್ತಿರಲಿಲ್ಲ. ಇಲ್ಲಿನ ಪಾನಿಪೂರಿ ಪ್ರಸಿದ್ಧವಾಗಿದೆ” ಎಂದು ಹಾಡಿ ಹೊಗಳಿದರು.

“ಮೇ 10ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ನಾರಾಯಣಸ್ವಾಮಿಯವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು. ನಿಮ್ಮ ಸೇವೆ ಮಾಡಲು ಅವರಿಗೆ ಅವಕಾಶ ಮಾಡಿಕೊಡಬೇಕು” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...