ಜೈ ಭಾರತ ಸತ್ಯಾಗ್ರಹ ಯಾತ್ರೆಗೆ ಸಜ್ಜಾದ ಕೋಲಾರ; ಪ್ರಜಾಪ್ರಭುತ್ವದ ಉಳಿವಿಗೆ ರಾಹುಲ್ ಪ್ರಚಾರ

Date:

  • ಏಳು ಲಕ್ಷ ಜನರ ಸಮ್ಮುಖದಲ್ಲಿ ನಡೆಯಲಿರುವ ಜೈ ಭಾರತ ಸತ್ಯಾಗ್ರಹ
  • ರಾಹುಲ್ ಅನರ್ಹತೆ ಪ್ರಶ್ನಿಸಿ ಸತ್ಯಾಗ್ರಹಕ್ಕೆ ಮುಂದಾದ ಕಾಂಗ್ರೆಸ್

ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯ ಕಾಂಗ್ರೆಸ್‌ ಹಮ್ಮಿಕೊಂಡಿರುವ ಜೈ ಭಾರತ್‌ ಸತ್ಯಾಗ್ರಹ ಯಾತ್ರೆಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಚಾಲನೆ ನೀಡಲಿದ್ದಾರೆ.

- Advertisement -

ಏಪ್ರಿಲ್ 16ರ ಭಾನುವಾರ, ಬೆಳಗ್ಗೆ 11 ಗಂಟೆಗೆ ಭಾರತ ಸತ್ಯಾಗ್ರಹ ಯಾತ್ರೆಗೆ ಚಾಲನೆ ದೊರಕಲಿದೆ. ಕೋಲಾರದ ದೇವರಾಜ ಅರಸು ಕಾಲೇಜಿನ ಎದುರಿನಿಂದ ಈ ಯಾತ್ರೆ ಹೊರಡಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

2019ರ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಕೋಲಾರದಲ್ಲಿ ಮಾಡಿದ ಭಾಷಣದ ಕಾರಣ ನೀಡಿ ರಾಹುಲ್ ಗಾಂಧಿ ಅನರ್ಹತೆ ಮಾಡಿರುವ ಕ್ರಮ ಖಂಡಿಸುವುದು ಹಾಗೂ ದೇಶದ ಪ್ರಜಾಪ್ರಭುತ್ವ ಉಳಿವಿಗಾಗಿ ಈ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ.

ಸತ್ಯಾಗ್ರಹದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಸೇರಿದಂತೆ ರಾಜ್ಯದ ಇತರ ನಾಯಕರು ಭಾಗವಹಿಸಲಿದ್ದಾರೆ.

ಇತ್ತ ಯಾತ್ರೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, “7 ಲಕ್ಷ ಮತಗಳ ಅಂತರದಲ್ಲಿ ಗೆದ್ದು ಸಂಸತ್ ಸದಸ್ಯರಾದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ್ದಾರೆ.

ಇದು ಪ್ರಜಾಪ್ರಭುತ್ವಕ್ಕೆ ದೊಡ್ಡ ಅಪಮಾನ. ರಾಹುಲ್ ಗಾಂಧಿ ಅವರು ಎಲ್ಲಿ ಭಾಷಣ ಮಾಡಿದ್ದರೋ ಅಲ್ಲಿಯೇ ಮತ್ತೆ ಭಾಷಣ ಮಾಡಬೇಕು ಎಂದು ನಾವೆಲ್ಲ ತೀರ್ಮಾನಿಸಿ ಈ ಸತ್ಯಾಗ್ರಹ ಯಾತ್ರೆ ಹಮ್ಮಿಕೊಂಡಿದ್ದೇವೆ” ಎಂದರು.

ಈ ಸುದ್ದಿ ಓದಿದ್ದೀರಾ? :ಸಿದ್ದರಾಮಯ್ಯಗೆ ಕೋಲಾರ ಟಿಕೆಟ್‌ ಮಿಸ್‌ ಆಗಿದ್ದಕ್ಕೆ ರಮೇಶ್‌ ಕುಮಾರ್‌ ಮುನಿಸು; ಸುರ್ಜೇವಾಲಾ ಭೇಟಿ

ವಯನಾಡ್ ಕ್ಷೇತ್ರದ ಸಂಸದರಾಗಿದ್ದ ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಕಾಂಗ್ರೆಸ್ ಈಗಾಗಲೇ ಹಲವು ಪ್ರತಿಭಟನೆಗಳನ್ನು ನಡೆಸಿದೆ. ಅದರ ಮುಂದುವರೆದ ಭಾಗವಾಗಿ ಕೋಲಾರದಲ್ಲೂ ಈ ಯಾತ್ರೆ ಆಯೋಜನೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...