ಕೋಲಾರ | ವೇತನ ಹೆಚ್ಚಳಕ್ಕೆ ಆಗ್ರಹಿಸಿ ವಿಸ್ಟ್ರಾನ್ ನೌಕರರ ಪ್ರತಿಭಟನೆ

Date:

ಐಫೋನ್ ತಯಾರಿಕಾ ಕಂಪನಿ ವಿಸ್ಟ್ರಾನ್‌ನ ನೂರಾರು ಉದ್ಯೋಗಿಗಳು ತಮ್ಮ ವೇತನ ಹಚ್ಚಳಕ್ಕಾಗಿ ಒತ್ತಾಯಿಸಿ ಕೋಲಾರದಲ್ಲಿರುವ ಕಂಪನಿಯ ಕಚೇರಿ ದುರು ಪ್ರತಿಭಟನೆ ನಡೆಸಿದ್ದಾರೆ.

- Advertisement -

ಶೀಘ್ರವೇ ವೇತನ ಹೆಚ್ಚಳ ಮಾಡಬೇಕೆಂದು ನೌಕರರು ಪ್ರತಿಭಟನೆ ನಡೆಸಿದ್ದಾರೆ. ಅವರ ಬೇಡಿಕೆಗಳ ಬಗ್ಗೆ ಚರ್ಚಿಸಲು ಜೂನ್ ಮೊದಲ ವಾರದಲ್ಲಿ ಸಭೆ ಕರೆಯುವುದಾಗಿ ಕಂಪನಿಯ ಆಡಳಿತ ಮಂಡಳಿ ಭರವಸೆ ನೀಡಿದ ಬಳಿಕ, ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸುಮಾರು 1,500 ನೌಕರರು ವಿಸ್ಟ್ರಾನ್‌ನ ಕೋಲಾರ ಘಟಕದಲ್ಲಿ ಕೆಲಸ ಮಾಡುತ್ತಿದ್ದಾರೆ. ಸುಮಾರು ನಾಲ್ಕು ವರ್ಷಗಳಿಂದ ಕಂಪನಿಯಲ್ಲಿ ದುಡಿಯುತ್ತಿದ್ದರೂ, ಒಮ್ಮೆಯೂ ಸಂಬಳ ಹೆಚ್ಚಳ ಮಾಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ವೇತನ ಹೆಚ್ಚಳಕ್ಕಾಗಿ ಈ ಹಿಂದೆಯೂ ಪ್ರತಿಭಟನೆ ನಡೆಸಿದ್ದೆವು. ಆಗ, ಆಡಳಿತವು ‘ಅಲ್ಪ’ ವೇತನ ಹೆಚ್ಚಿಸಿತ್ತು. ಅದು ನೌಕರರಿಗೆ ಸಮಾಧಾನ ತಂದಿಲ್ಲ. ಹೀಗಾಗಿ, ಮೇ 5ರಂದು ವೇತನ ಹೆಚ್ಚಳವನ್ನು ಪರಿಶೀಲಿಸುವಂತೆ ಮನವಿ ಮಾಡಿದ್ದೆವು. ಆಗ, ಮೇ 17ರಂದು ಸಭೆ ನಡೆಸುವುದಾಗಿ ಭರವಸೆ ನೀಡಿದ್ದರು. ಆದರೆ, ಸಭೆ ಕರೆಯುವ ಬದಲು, ಕಂಪನಿಯ ಆವರಣದಲ್ಲಿ ಪೋಲೀಸರನ್ನು ನಿಯೋಜಿಸಿದರು. ಸಭೆ ಕರೆಯದ ಹಿನ್ನೆಲೆ ಪ್ರತಿಭಟನೆ ನಡೆಸಿರುವುದಾಗಿ ಉದ್ಯೋಗಿಯೊಬ್ಬರು ತಿಳಿಸಿದ್ದಾರೆ.

ಆಡಳಿತ ಮಂಡಳಿ ನೀಡಿದ ಭರವಸೆಯಂತೆ ಜೂನ್ ಮೊದಲ ವಾರದಲ್ಲಿ ಸಭೆ ನಡೆಸದಿದ್ದರೆ, ಮತ್ತೆ ಮುಷ್ಕರ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...