ಡಿಜಿಟಲ್ ಜನಗಣತಿ: ಕೋಲಾರದಲ್ಲಿ ಗಣತಿದಾರರ ಎರಡನೇ ಹಂತದ ತರಬೇತಿಗೆ ಚಾಲನೆ

Date:

ಕೋಲಾರ : ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ 2027ರ ಡಿಜಿಟಲ್ ಜನಗಣತಿ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಸಜ್ಜಾಗಿರುವ ಜಿಲ್ಲಾಡಳಿತವು, ಇಂದಿನಿಂದ ಗಣತಿದಾರರಿಗೆ ಎರಡನೇ ಹಂತದ ತರಬೇತಿ ಕಾರ್ಯಕ್ರಮವನ್ನು ಆರಂಭಿಸಿದೆ.

ಈ ಕುರಿತು ಮಾಹಿತಿ ನೀಡಿದ ಅಪರ ಜಿಲ್ಲಾಧಿಕಾರಿಗಳಾದ ಎಸ್.ಎಂ. ಮಂಗಳ ಅವರು ಜಿಲ್ಲೆಯಲ್ಲಿ ಏಪ್ರಿಲ್ 1 ರಿಂದಲೇ ಮನೆಗಣತಿ ಪ್ರಕ್ರಿಯೆ ಚಾಲನೆಯಲ್ಲಿದ್ದು, ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುವ ಗಣತಿದಾರರಿಗೆ ತಾಂತ್ರಿಕ ನೈಪುಣ್ಯತೆ ನೀಡಲು ಇಂದಿನಿಂದ (ಏಪ್ರಿಲ್ 7) ಅಂತಿಮ ಹಂತದ ತರಬೇತಿ ನೀಡಲಾಗುತ್ತಿದೆ. ಡಿಜಿಟಲ್ ರೂಪದಲ್ಲಿ ಮಾಹಿತಿ ಸಂಗ್ರಹಿಸುವುದು ಈ ಬಾರಿಯ ವಿಶೇಷವಾಗಿದ್ದು, ಆ್ಯಪ್ ಬಳಕೆ ಮತ್ತು ದತ್ತಾಂಶ ನಮೂದಿಸುವ ಬಗ್ಗೆ ಶಿಕ್ಷಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನೊಳಗೊಂಡ ತಂಡಕ್ಕೆ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 2,861 ಗಣತಿದಾರರು ಹಾಗೂ 474 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಮನೆಗಳ ಪಟ್ಟಿ ಮಾಡುವಿಕೆ, 34-35 ಪ್ರಶ್ನೆಗಳಿಗೆ ಡಿಜಿಟಲ್ ಉತ್ತರ ದಾಖಲಿಸುವುದು ಮತ್ತು ಸಾರ್ವಜನಿಕರು ನೀಡುವ ‘ಸೆನ್ಸಸ್ ಐಡಿ’ಯನ್ನು ದೃಢೀಕರಿಸುವ ಕುರಿತು ತರಬೇತಿ ನೀಡಲಾಗುತ್ತಿದೆ.

- Advertisement -

ಈಗಾಗಲೇ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅವರು ತಿಳಿಸಿರುವಂತೆ ಸಾರ್ವಜನಿಕರು www.se.census.gov.in ಪೋರ್ಟಲ್ ಮೂಲಕ ಏಪ್ರಿಲ್ 15ರವರೆಗೆ ಸ್ವಯಂ ಗಣತಿ ಮಾಡಿಕೊಳ್ಳಲು ಅವಕಾಶವಿದೆ. ಹೀಗೆ ಮಾಡಿದವರು ಪಡೆಯುವ ಸೆನ್ಸಸ್ ಐಡಿ ಯನ್ನು ಏಪ್ರಿಲ್ 16 ರ ನಂತರ ಮನೆಗೆ ಭೇಟಿ ನೀಡುವ ಗಣತಿದಾರರಿಗೆ ನೀಡಬಹುದಾಗಿದೆ. ಇದರಿಂದ ಸಾರ್ವಜನಿಕರ ಸಮಯ ಉಳಿತಾಯವಾಗಲಿದೆ ಎಂದು ಅವರು ಅಭಿಪ್ರಾಯ ಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಜಿಲ್ಲೆಯನ್ನು ಒಟ್ಟು 3,385 ಬ್ಲಾಕ್‌ಗಳಾಗಿ ವಿಂಗಡಿಸಲಾಗಿದೆ. ಇದರಲ್ಲಿ ಗ್ರಾಮೀಣ ಭಾಗದಲ್ಲಿ 2,540, ನಗರ ಪ್ರದೇಶದಲ್ಲಿ 808 ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 37 ಬ್ಲಾಕ್‌ಗಳಿವೆ. ಪ್ರತಿ ಬ್ಲಾಕ್ ಅಂದಾಜು 180 ರಿಂದ 200 ಮನೆಗಳನ್ನು ಒಳಗೊಂಡಿರಲಿದ್ದು ನಿಖರ ಮಾಹಿತಿ ಸಂಗ್ರಹಕ್ಕೆ ಒತ್ತು ನೀಡಲಾಗಿದೆ ಎಂದರು.

ಇದನ್ನು ಓದಿದ್ದೀರಾ..? ತಹಶೀಲ್ದಾರ್‌ ಕಚೇರಿಗೆ ಶಾಸಕ ಕೊತ್ತೂರು ಮಂಜುನಾಥ್‌ ದಿಢೀರ್‌ ಭೇಟಿ

ಡಿಜಿಟಲ್ ಗಣತಿಯಲ್ಲಿ ದಾಖಲಾಗುವ ಪ್ರತಿಯೊಂದು ಮಾಹಿತಿಯೂ ಎನ್‌ಕ್ರಿಪ್ಟ್ ಮಾದರಿಯಲ್ಲಿದ್ದು, ಸಾರ್ವಜನಿಕರ ಖಾಸಗಿತನಕ್ಕೆ ಯಾವುದೇ ಧಕ್ಕೆ ಇರುವುದಿಲ್ಲ. ದೇಶದ ಅಭಿವೃದ್ಧಿ ಯೋಜನೆಗಳ ರೂಪಿಸುವಿಕೆಗೆ ಈ ಅಂಕಿ-ಅಂಶಗಳು ಅತ್ಯಗತ್ಯವಾಗಿದ್ದು ಸಾರ್ವಜನಿಕರು ಗಣತಿದಾರರಿಗೆ ಸೂಕ್ತ ಮಾಹಿತಿ ನೀಡಿ ಸಹಕರಿಸಬೇಕು,” ಎಂದು ಅಪರ ಜಿಲ್ಲಾಧಿಕಾರಿ ಎಸ್.ಎಂ. ಮಂಗಳ ಅವರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಜಿಎಫ್ | ಗಾಳಿ ಮಳೆಗೆ ಮನೆಯ ಮೇಲ್ಚಾವಣಿ ನಾಶ ಕುಟುಂಬಸ್ಥರು ಕಣ್ಣೀರು

ಬೇತಮಂಗಲ ಸಮೀಪದ ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೆಂಕಟಾಪುರ ಗ್ರಾಮದ ರತ್ನಮ್ಮ...

ಕೋಲಾರ | ಬೆಗ್ಲಿ ಹೊಸಹಳ್ಳಿ ಶಾಲೆಯಲ್ಲಿ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ

ತಾಲೂಕಿನ ಬೆಗ್ಲಿ ಹೊಸಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 2003-2004ನೇ ಸಾಲಿನ ವಿದ್ಯಾರ್ಥಿಗಳಿಂದ...

ಕೋಲಾರ | ಅವೈಜ್ಞಾನಿಕ ರಸ್ತೆ, ಚರಂಡಿ ಕಾಮಗಾರಿ: ವಿಜಯಗರ ಬಡಾವಣೆ ನಿವಾಸಿಗಳು ಆಕ್ರೋಶ

ನಗರ ಹೊರವಲಯದ ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಯನಗರ ಬಡಾವಣೆಯಲ್ಲಿ (ಹಾರೋಹಳ್ಳಿ...

ಶ್ರೀನಿವಾಸಪುರ | ದಕ್ಷಿಣ ಭಾರತ ಮಟ್ಟದ ಬಾಡಿಬಿಲ್ಡಿಂಗ್ ಸ್ಪರ್ಧೆಯಲ್ಲಿ ಶ್ರೀನಿವಾಸಪುರದ ಅಬ್ಬಾಸ್ ಬಾಬುಗೆ ತೃತೀಯ ಸ್ಥಾನ

ಶ್ರೀನಿವಾಸಪುರ: ಪಟ್ಟಣದ ಅಕ್ಬರ್ ರಸ್ತೆಯ ನಿವಾಸಿ ಅಬ್ಬಾಸ್ ಬಾಬು ಅವರು ಬೆಂಗಳೂರಿನಲ್ಲಿ...