ಕೆಜಿಎಫ್ | ಗಾಳಿ ಮಳೆಗೆ ಮನೆಯ ಮೇಲ್ಚಾವಣಿ ನಾಶ ಕುಟುಂಬಸ್ಥರು ಕಣ್ಣೀರು

Date:

ಬೇತಮಂಗಲ ಸಮೀಪದ ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೆಂಕಟಾಪುರ ಗ್ರಾಮದ ರತ್ನಮ್ಮ ನಾರಾಯಣ ಶೆಟ್ಟಿ ಅವರ ಮನೆಯ ಮೇಲೆ ಅಳವಡಿಸಿದ್ದ ಸಿಮೆಂಟ್ ಹಾಗೂ ಕಬ್ಬಿಣದ ಸೀಟ್ ಗಳು ಗಾಳಿಗೆ ಹಾರಿಹೋಗಿದೆ.

- Advertisement -

ಕುಟುಂಬಸ್ಥರು ಕಣ್ಣೀರು:
ಸಾಲ ಸೋಲ ಮಾಡಿ ಮೂವರು ಮಕ್ಕಳ ಜೊತೆಗೆ ಸಣ್ಣದಾಗಿ ನಿರ್ಮಿಸಿಕೊಂಡಿದ್ದ ಶೀಟಿನ ಮನೆಯು ಸಂಪೂರ್ಣವಾಗಿ ಗಾಳಿಗೆ ಹಾರಿ ಹೋಗಿ ಇರಲು ಸಹ ಆಶ್ರಯ ಇಲ್ಲದಂತೆ ಮಾಡಿರುವುದರಿಂದ ಇಡೀ ಕುಟುಂಬವು ಕಣ್ಣೀರು ಹಾಕಿದ ಪ್ರಸಂಗ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಜಯರಾಮ್ ರೆಡ್ಡಿ ಮಾತನಾಡಿ, ನಮ್ಮ ಗ್ರಾಮದ ತೀರಾ ಬಡ ಕುಟುಂಬದವರಾದ ರತ್ನಮ್ಮ ನಾರಾಯಣಶೆಟ್ಟಿ ಅವರ ಮನೆಯು ಗಾಳಿಮಳೆಗೆ ಸಂಪೂರ್ಣವಾಗಿ ನಾಶವಾಗಿದ್ದು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಕಡು ಬಡ ಕುಟುಂಬದ ನೆರವಿಗೆ ಬಾವಿಸಬೇಕಾಗಿದೆ ಎಂದು ಪತ್ತಾಯಿಸಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಫೋನ್ ಮೂಲಕ ಸಂಪರ್ಕಿಸಿ ತಕ್ಷಣ ಕುಟುಂಬದ ಸದಸ್ಯರಿಗೆ ತಾತ್ಕಾಲಿಕವಾಗಿ ಆಶ್ರಯ ಕಲ್ಪಿಸಬೇಕೆಂದು ಪ್ರಬುದ್ಧ ಪ್ರಜಾ ವೇದಿಕೆ ಅಧ್ಯಕ್ಷರಾದ ಶ್ರೀನಾಥ್ ನಾಸ್ತಿಕ ತಿಳಿಸಿದರು.

ಕೆಜಿಎಫ್ ಕ್ಷೇತ್ರದ ಶಾಸಕರಾದ ರೂಪಕಲಾ ಶಶಿಧರ್ ಅವರು ತಕ್ಷಣ ಮನೆಯಿಂದ ಮಂಜೂರು ಮಾಡಿಸಿ ಬಡ ಕುಟುಂಬಕ್ಕೆ ಆಶ್ರಯ ಕಲಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ತಕ್ಷಣ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮನೆ ಕಳೆದುಕೊಂಡ ಸಂತ್ರಸ್ತರಿಗೆ ತಾತ್ಕಾಲಿಕವಾಗಿ ಅಂಗನವಾಡಿ ಕಟ್ಟಡದಲ್ಲಿ ಆಶ್ರಯ ಕಲ್ಸಿಸಿದ್ದಾರೆ.

ಹಾಲಿ ವಾಸವಿರುವ ಮನೆಗೆ ಕಾರ್ಪಲ್ ಸಹ ನೀಡಿದ್ದು, ಮುಂದಿನ ನೆರವಿನ ಬಗ್ಗೆ ಮೇಲಾಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳುವುದಾಗಿ ಪಿಡಿಓ ಶ್ರೀನಿವಾಸ್ ಮೂರ್ತಿ ಭರವಸೆ ನೀಡಿದ್ದಾರೆ.

ಇದನ್ನು ಓದಿದ್ದೀರಾ..? ಕೋಲಾರ | ಕಾರ್ಮಿಕರ ಕನಿಷ್ಠ ವೇತನ 35 ಸಾವಿರಕ್ಕಾಗಿ ಸಿಐಟಿಯು ನೇತೃತ್ವದಲ್ಲಿ ಡಿಸಿ ಕಛೇರಿ ಮುಂದೆ ಪ್ರತಿಭಟನೆ – ಈ ದಿನ.ಕಾಮ್

ಈ ಸಂದರ್ಭದಲ್ಲಿ ಪ್ರಬುದ್ಧ ಪ್ರಜಾ ವೇದಿಕೆ ಅಧ್ಯಕ್ಷರಾದ ಶ್ರೀನಾಥ್, ಗ್ರಾಮ ಪಂಚಾಯತಿ ಮಾಜಿ ಸದಸ್ಯ ಜಯರಾಮ್ ರೆಡ್ಡಿ, ರಾಮಕೃಷ್ಣ ರೆಡ್ಡಿ, ನಾರಾಯಣ ರೆಡ್ಡಿ, ನರಸಿಂಹ ರೆಡ್ಡಿ, ಸುಬ್ಬಯ್ಯ, ಬಾಬು ಸೇರಿದಂತೆ ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅವೈಜ್ಞಾನಿಕ ರಸ್ತೆ, ಚರಂಡಿ ಕಾಮಗಾರಿ: ವಿಜಯಗರ ಬಡಾವಣೆ ನಿವಾಸಿಗಳು ಆಕ್ರೋಶ

ನಗರ ಹೊರವಲಯದ ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಯನಗರ ಬಡಾವಣೆಯಲ್ಲಿ (ಹಾರೋಹಳ್ಳಿ...

ಶ್ರೀನಿವಾಸಪುರ | ದಕ್ಷಿಣ ಭಾರತ ಮಟ್ಟದ ಬಾಡಿಬಿಲ್ಡಿಂಗ್ ಸ್ಪರ್ಧೆಯಲ್ಲಿ ಶ್ರೀನಿವಾಸಪುರದ ಅಬ್ಬಾಸ್ ಬಾಬುಗೆ ತೃತೀಯ ಸ್ಥಾನ

ಶ್ರೀನಿವಾಸಪುರ: ಪಟ್ಟಣದ ಅಕ್ಬರ್ ರಸ್ತೆಯ ನಿವಾಸಿ ಅಬ್ಬಾಸ್ ಬಾಬು ಅವರು ಬೆಂಗಳೂರಿನಲ್ಲಿ...

ಕೋಲಾರ | ಕೃಷಿ ಮಾರುಕಟ್ಟೆ ಕುರಿತು ತುಮಕೂರು ಸಂಶೋಧನಾ ವಿದ್ಯಾರ್ಥಿಗಳೊಂದಿಗೆ ಸಂವಾದ

ಭಾರತದಲ್ಲಿ ಕೃಷಿ ಮತ್ತು ಕೃಷಿ ಮಾರುಕಟ್ಟೆಯ ಕುರಿತು ಕಾರ್ಯಾಗಾರದಲ್ಲಿ ತುಮಕೂರು ವಿಶ್ವವಿದ್ಯಾಲಯದ...

ಕೋಲಾರ | ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿನಿಗೆ ಅಭಿನಂದನೆ ಸಲ್ಲಿಸಿದ ಸಿಎಂಆರ್ ಶ್ರೀನಾಥ್

ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕೋಲಾರ ನಗರದ ಕೀಲುಕೋಟೆ ಬಡಾವಣೆಯ ಚಿನ್ಮಯ...