ಕೆಜಿಎಫ್ | ಅಲ್ಟ್ರಾ ಮ್ಯಾರಥಾನ್‌ನಲ್ಲಿ ಗ್ರಾಮೀಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಜಯಭೇರಿ

Date:

ಇತ್ತೀಚೆಗೆ ಕೆಜಿಎಫ್ ನಗರದಲ್ಲಿ ನಡೆದ ಪ್ರತಿಷ್ಠಿತ ‘ಕೆಜಿಎಫ್ ಅಲ್ಟ್ರಾ ಮ್ಯಾರಥಾನ್’ ಓಟದ ಸ್ಪರ್ಧೆಯಲ್ಲಿ ಬೇತಮಂಗಲದ ಗ್ರಾಮೀಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಬಹುಮಾನಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಮಂಡಳಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಆತ್ಮೀಯ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

- Advertisement -

ದ್ವಿತೀಯ ಮತ್ತು ತೃತೀಯ ಬಹುಮಾನ: ಮ್ಯಾರಥಾನ್‌ನ 5 ಕಿಲೋಮೀಟರ್ (5 ಕೆ) ಓಟದ ಸ್ಪರ್ಧೆಯಲ್ಲಿ ಗ್ರಾಮೀಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ಶಾಲಾ ಕಾರ್ಯದರ್ಶಿ ಅ.ಮು ಲಕ್ಷ್ಹೇಮೀನಾರಾಯಣ ಹೇಳಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಕ್ರೀಡಾಕೂಟದಲ್ಲಿ ಸಂಸ್ಥೆಯ 20ಕ್ಕೂ ಹೆಚ್ಚು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಕ್ರಿಯವಾಗಿ ಪಾಲ್ಗೊಂಡು ಪದಕಗಳನ್ನು ಜಯಿಸಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಮ್ಯಾರಥಾನ್ ಆಯೋಜಕರು ಪದಕ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿದ್ದಾರೆ.

ಹೆಮ್ಮೆಯ ಸ್ಕಾಲರ್‌ಶಿಪ್ ಘೋಷಣೆ: ಮ್ಯಾರಥಾನ್‌ನಲ್ಲಿ ಅಸಾಧಾರಣ ಸಾಧನೆ ಮಾಡಿದ ಕ್ರೀಡಾಪಟು ವಿದ್ಯಾರ್ಥಿಗೆ ಮುಂದಿನ ವಿದ್ಯಾಭ್ಯಾಸಕ್ಕಾಗಿ ಎರಡು ವರ್ಷಗಳ ಕಾಲ ಪ್ರೋತ್ಸಾಹ ಧನವಾಗಿ ‘ಸ್ಕಾಲರ್‌ಶಿಪ್’ (ವಿದ್ಯಾರ್ಥಿ ವೇತನ) ನೀಡುವುದಾಗಿ ಸಂಸ್ಥೆಯ ಕಾರ್ಯದರ್ಶಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಗ್ರಾಮೀಣ ಪ್ರತಿಭೆಗಳ ಸಬಲೀಕರಣ: ನಗರ ಪ್ರದೇಶದ ಕ್ರೀಡಾಪಟುಗಳಿಗೆ ಸರಿಸಮಾನವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ‘ಅಲ್ಟ್ರಾ ಮ್ಯಾರಥಾನ್’ ನಂತಹ ಕಠಿಣ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಮತ್ತು ತೃತೀಯ ಸ್ಥಾನ ಗಳಿಸಿರುವುದು ಅವರ ದೈಹಿಕ ಸಾಮರ್ಥ್ಯ ಮತ್ತು ಕಠಿಣ ಪರಿಶ್ರಮವನ್ನು ಎತ್ತಿ ತೋರಿಸುತ್ತದೆ. ಇದು ಗ್ರಾಮೀಣ ಭಾಗದಲ್ಲಿ ಅಡಗಿರುವ ಅಗಾಧ ಪ್ರತಿಭೆಗೆ ಸಾಕ್ಷಿಯಾಗಿದೆ.

ಸಮಗ್ರ ಶಿಕ್ಷಣಕ್ಕೆ ಒತ್ತು :”ಶಿಕ್ಷಣದ ಜೊತೆಗೆ ಕ್ರೀಡೆಗೂ ನಮ್ಮ ಸಂಸ್ಥೆಯಲ್ಲಿ ಸದಾ ಪ್ರೋತ್ಸಾಹ ನೀಡಲಾಗುತ್ತಿದೆ. ಗೆಲುವು-ಸೋಲು ಸಹಜ, ಆದರೆ ಕ್ರೀಡೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದು ಅತ್ಯಂತ ಮುಖ್ಯವಾದುದ್ದು,
“ಶಿಕ್ಷಣದ ಜೊತೆಗೆ ಕ್ರೀಡೆಗೂ ನಮ್ಮ ಸಂಸ್ಥೆಯಲ್ಲಿ ಸದಾ ಪ್ರೋತ್ಸಾಹ ನೀಡಲಾಗುತ್ತಿದೆ. ಗೆಲುವು-ಸೋಲು ಸಹಜ, ಆದರೆ ಕ್ರೀಡೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದು ಅತ್ಯಂತ ಮುಖ್ಯ.” ಅ. ಮು. ಲಕ್ಷ್ಮೀನಾರಾಯಣ, ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ.

ಪ್ರೋತ್ಸಾಹದಾಯಕ ಆಡಳಿತ ಮಂಡಳಿ: ಕೇವಲ ಪ್ರಶಂಸೆಗೆ ಸೀಮಿತವಾಗದೆ, ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗೆ ಮುಂದಿನ 2 ವರ್ಷಗಳ ಶಿಕ್ಷಣಕ್ಕಾಗಿ ಉಚಿತ ಸ್ಕಾಲರ್‌ಶಿಪ್ ಘೋಷಿಸಿರುವುದು ಸಂಸ್ಥೆಯ ಸಾಮಾಜಿಕ ಕಳಕಳಿ ಹಾಗೂ ಕ್ರೀಡಾ ಉತ್ತೇಜನದ ಉದಾತ್ತ ಗುಣವನ್ನು ಸಾರುತ್ತದೆ. ಇದು ಇತರ ವಿದ್ಯಾರ್ಥಿಗಳಿಗೂ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ದೊಡ್ಡ ಪ್ರೇರಣೆಯಾಗಲಿದೆ.

ಇದನ್ನು ಓದಿದ್ದೀರಾ..?ಕೋಲಾರ | ಅಂಬೇಡ್ಕರ್ ಅವರ 21 ಅಡಿ ಕಂಚಿನ ಪ್ರತಿಮೆ ಕಾಮಗಾರಿ ಪರಿಶೀಲಿಸಿದ ಶಾಸಕ ಕೊತ್ತೂರು ಮಂಜುನಾಥ್

ಈ ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಶ್ಲಾಘಿಸಿದ ಈ ಅಭಿನಂದನಾ ಸಮಾರಂಭದಲ್ಲಿ ಸಂಸ್ಥೆಯ ಪ್ರಮುಖ ಗಣ್ಯರು ಉಪಸ್ಥಿತರಿದ್ದರು.‌ ಅ.ಮು ಲಕ್ಷ್ಮೀನಾರಾಯಣ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಲ್ಲಿಕಾರ್ಜುನ್, ಪದವಿ ಕಾಲೇಜಿನ ಪ್ರಾಂಶುಪಾಲ ಶ್ರೀಮತಿ ವಿಜಯೇಂದ್ರ, ಮುಖ್ಯ ಶಿಕ್ಷಕ ಗಂಗುಲಪ್ಪ, ಕೋಶಾಧಿಕಾರಿ ಪ್ರಭಾಕರ್ ಶಾಲೆಯ ಸಹಶಿಕ್ಷಕರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿ ವೃಂದದವರು ಭಾಗವಹಿಸಿ ವಿಜೇತರಿಗೆ ಹಾರ್ದಿಕ ಶುಭ ಹಾರೈಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...