ಕೋಲಾರ | ಕೃಷಿ ಮಾರುಕಟ್ಟೆ ಕುರಿತು ತುಮಕೂರು ಸಂಶೋಧನಾ ವಿದ್ಯಾರ್ಥಿಗಳೊಂದಿಗೆ ಸಂವಾದ

Date:

ಭಾರತದಲ್ಲಿ ಕೃಷಿ ಮತ್ತು ಕೃಷಿ ಮಾರುಕಟ್ಟೆಯ ಕುರಿತು ಕಾರ್ಯಾಗಾರದಲ್ಲಿ ತುಮಕೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಸ್ನಾತಕೋತ್ತರ ಪದವಿ ಮತ್ತು ಸಂಶೋಧನಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಚರ್ಚೆಯಲ್ಲಿ ಭಾಗವಹಿಸಿದ್ದ ಪ್ರಗತಿಪರ ರೈತರು ಟಮೋಟೋ ಮಂಡಿ ಮಾಲೀಕರಾದ ಸಿ.ಎಂ.ಆರ್. ಶ್ರೀನಾಥ್ ರವರು ಮಾತನಾಡಿ ಹಿಂದಿನ ಸಾಂಪ್ರದಾಯಿಕ ಮಾರುಕಟ್ಟೆ ವ್ಯವಸ್ಥೆಯಿಂದ ಹಿಡಿದು ಹಿಂದಿನ ಕೃತಕ ಬುದ್ಧಿಮತ್ತೆ (AI) ತನಕ ಭಾರತದಲ್ಲಿ ಕೃಷಿ ಮತ್ತು ಮಾರುಕಟ್ಟೆಯ ವಿಚಾರವಾಗಿ ಸವಿಸ್ತಾರವಾಗಿ ಚರ್ಚಿಸಿದರು.

- Advertisement -

ಹಿಂದೆ ತಾವು ಬೆಳೆದ ಉತ್ಪನ್ನಗಳನ್ನು ಅದಲು ಬದಲು ಮಾಡಿಕೊಳ್ಳುವ ವಹಿವಾಟು ನಂತರ ಸಾಂಪ್ರದಾಯಿಕ ಸಂತೆ, ಉತ್ಪನ್ನಗಳನ್ನು ಹೊತ್ತು ಮಾರುವುದು, ಬೀದಿ ಬದಿ ವ್ಯಾಪಾರ ಹೀಗೆ ಖಾಸಗಿಯಾಗಿ ನಡೆಸುತ್ತ ನಂತರ ದಿನಗಳಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮತ್ತು ರೈತರು ನೇರವಾಗಿ ಗ್ರಾಹಕರೊಂದಿಗೆ ಸಂಪರ್ಕ ಸಾಧಿಸಲು ಹಾಪ್-ಕಾಮ್ಸ್ ಮತ್ತು ಸಫಲ್‌ನಂತ ಸರ್ಕಾರಿ ಸಾಮ್ಯದ ಸಂಸ್ಥೆಗಳು ಪ್ರಸ್ತುತ ಸಮಯಕ್ಕೆ ಕಾರ್ಯನಿರ್ವಹಿಸುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಕೆಟ್ಟು ಹೋಗುವ ಉತ್ಪನ್ನಗಳನ್ನು ಶೀತಲಗೃಹಗಳಲ್ಲಿ ಶೇಖರಣೆ ಹಾಗೂ ಮೌಲ್ಯಾಧಾರಿತ ಉತ್ಪನ್ನಗಳ ತಯಾರಿಕೆ ಮತ್ತು ಅವುಗಳ ಮಾರಾಟದಿಂದ ವ್ಯವಸ್ಥೆಯಲ್ಲಿ ಸುಧಾರಿಸಬಹುದಾಗಿದೆ. ಕೃಷಿ ಉತ್ಪನ್ನಗಳ ಬೇಡಿಕೆ ಮತ್ತು ಪೂರೈಕೆಯಲ್ಲಿ ಸಮತೋಲನ ಕಾಪಾಡುವುದು ಹಾಗೂ ಖಾಸಗಿ ಕಂಪನಿಗಳ ಪಾತ್ರದ ಕುರಿತು ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ರೈತರಿಗೆ ಅತ್ಯುತ್ತಮ ಬೆಲೆ ಸಿಗುವಂತೆ ಹಾಗೂ ಗ್ರಾಹಕರಿಗೆ ಹೊರೆಯಾಗದಂತೆ ಪಾರದರ್ಶಕತೆ ವಹಿವಾಟು ಮತ್ತು ಗುಣಮಟ್ಟ ಕಾಯ್ದುಕೊಳ್ಳುವ ರೀತಿಯಲ್ಲಿ ವಿದ್ಯಾರ್ಥಿಗಳು ಅಧ್ಯಯನ ಮಾಡಿ ಕಾರ್ಯ ಪ್ರವೃತ್ತರಾದರೆ ಆರ್ಥಿಕ ವ್ಯವಸ್ಥೆ ಪರಿಣಾಮಕಾರಿಯಾಗಿರುತ್ತದೆ.

ಆಧುನಿಕ ಮಾರುಕಟ್ಟೆ ವ್ಯವಸ್ಥೆಗಳಾದ ಡಿಜಿಟಲ್ ಮಾರ್ಕೆಟಿಂಗ್, ಆನ್‌ಲೈನ್ ಮಾರುಕಟ್ಟೆ ಮೂಲಕ ಶೀಘ್ರ ಮತ್ತು ಗುಣಮಟ್ಟ ಕಾಯ್ದುಕೊಳ್ಳುವಂತೆ ಉತ್ಪನ್ನಗಳನ್ನು ಗ್ರಾಹಕರಿಗೆ ತಲುಪಿಸಲಾಗುತ್ತಿದೆ. ಈ ವ್ಯವಸ್ಥೆಯಲ್ಲಿ ಬಹುರಾಷ್ಟ್ರೀಯ ಕಂಪನಿಗಳಾದ ಅಮೆಜಾನ್, ಜೊಮಾಟೋ, ನಿಂಜಾಕರ್ಟ್, ಬಿಗ್ ಬ್ಯಾಸ್ಕೆಟ್, ರಿಲೆಯನ್ಸ್ ಕಂಪನಿಗಳು ತೊಡಗಿಸಿಕೊಂಡಿರುವುದರಿಂದ ನೀವುಗಳು ಈ ರೀತಿಯ ವ್ಯವಸ್ಥೆಯನ್ನು ಬಳಸಿಕೊಂಡು ಉದ್ಯಮಿಗಳಾಗುವ ಮೂಲಕ ಸ್ವತಹ ಉದ್ಯಮಶೀಲರಾಗಲು ಸಾಧ್ಯವಾಗುತ್ತದೆ ಎಂದು ಸಿ.ಎಂ.ಆರ್. ಶ್ರೀನಾಥ್ ತಿಳಿಸಿದರು.

ಇದನ್ನು ಓದಿದ್ದೀರಾ..? ಚಿಂತಾಮಣಿ | ಕಾಗತಿ ಗ್ರಾಮದಲ್ಲಿ ರೈತರಿಗೆ ಒಂದು ದಿನದ ತೋಟಗಾರಿಕೆ ತರಬೇತಿ ಕಾರ್ಯಕ್ರಮ

ಈ ಸಂದರ್ಭದಲ್ಲಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ರವೀಂದ್ರಕುಮಾರ್ ಹಾಗೂ ಸಹ ಪ್ರಾಧ್ಯಾಪಕರಾದ ಮುನಿರಾಜು, ಡಾ. ನೀಲಕಂಠ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಬೆಗ್ಲಿ ಹೊಸಹಳ್ಳಿ ಶಾಲೆಯಲ್ಲಿ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ

ತಾಲೂಕಿನ ಬೆಗ್ಲಿ ಹೊಸಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 2003-2004ನೇ ಸಾಲಿನ ವಿದ್ಯಾರ್ಥಿಗಳಿಂದ...

ಕೋಲಾರ | ಅವೈಜ್ಞಾನಿಕ ರಸ್ತೆ, ಚರಂಡಿ ಕಾಮಗಾರಿ: ವಿಜಯಗರ ಬಡಾವಣೆ ನಿವಾಸಿಗಳು ಆಕ್ರೋಶ

ನಗರ ಹೊರವಲಯದ ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಯನಗರ ಬಡಾವಣೆಯಲ್ಲಿ (ಹಾರೋಹಳ್ಳಿ...

ಶ್ರೀನಿವಾಸಪುರ | ದಕ್ಷಿಣ ಭಾರತ ಮಟ್ಟದ ಬಾಡಿಬಿಲ್ಡಿಂಗ್ ಸ್ಪರ್ಧೆಯಲ್ಲಿ ಶ್ರೀನಿವಾಸಪುರದ ಅಬ್ಬಾಸ್ ಬಾಬುಗೆ ತೃತೀಯ ಸ್ಥಾನ

ಶ್ರೀನಿವಾಸಪುರ: ಪಟ್ಟಣದ ಅಕ್ಬರ್ ರಸ್ತೆಯ ನಿವಾಸಿ ಅಬ್ಬಾಸ್ ಬಾಬು ಅವರು ಬೆಂಗಳೂರಿನಲ್ಲಿ...

ಕೋಲಾರ | ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿನಿಗೆ ಅಭಿನಂದನೆ ಸಲ್ಲಿಸಿದ ಸಿಎಂಆರ್ ಶ್ರೀನಾಥ್

ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕೋಲಾರ ನಗರದ ಕೀಲುಕೋಟೆ ಬಡಾವಣೆಯ ಚಿನ್ಮಯ...