ಕೋಲಾರ | ಕ್ಷ್ಮೀಸಾಗರ ಕೆರೆ ಕೋಡಿ ಸೇತುವೆ ಕುಸಿತ ಶಾಸಕ ಕೊತ್ತೂರು ಮಂಜುನಾಥ್ ದಿಢೀರ್ ಭೇಟಿ

Date:

ಶುಕ್ರವಾರ ಸಂಜೆ ಸುರಿದ ಬಾರಿ ಮಳೆಗೆ ತಾಲ್ಲೂಕಿ ನರಸಾಪುರ ಹೋಬಳಿಯ ಲಕ್ಷ್ಮೀಸಾಗರ ಕೆರೆಯ ಕೋಡಿ ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆಯ ರಸ್ತೆ ಭಾಗವು ಕುಸಿದು ಬಿದ್ದಿದೆ. ಈ ಹಿನ್ನೆಲೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಶನಿವಾರ ಸ್ಥಳಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ವೇಳೆ ಕಾಮಗಾರಿಯ ವೈಫಲ್ಯದ ಕುರಿತು ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್‌ಗಳನ್ನು ಸ್ಥಳದಲ್ಲೇ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

- Advertisement -

ಸೇತುವೆಯ ಪಕ್ಕದ ರಸ್ತೆ ಮತ್ತು ರಿಟೈನಿಂಗ್ ವಾಲ್ (ರಕ್ಷಣಾ ಗೋಡೆ) ಕುಸಿದಿರುವುದನ್ನು ಕಂಡು ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರಲ್ಲದೆ ಸ್ಥಳದಲ್ಲಿದ್ದ ಎಂಜಿನಿಯರ್ ಬಳಿ ಮಾಹಿತಿ ಪಡೆದುಕೊಂಡರು ಈ ವೇಳೆ ವಿವರಣೆ ನೀಡಿದ ಇಂಜಿನಿಯರ್ ಕೆರೆಯಿಂದ ಹರಿದು ಬರುತ್ತಿರುವ ನೀರಿನ ರಭಸಕ್ಕೆ ಇಲ್ಲಿನ ಕೆಳಭಾಗದ ಮಣ್ಣು ಸಂಪೂರ್ಣವಾಗಿ ಕೊಚ್ಚಿ ಹೋಗಿದೆ ಮಣ್ಣು ಕುಸಿದಿದ್ದರಿಂದ ರಸ್ತೆಯೂ ಕುಸಿದು ಬಿದ್ದಿದೆ” ಎಂದು ಅಧಿಕಾರಿಗಳು ಸಮರ್ಥಿಸಿಕೊಳ್ಳಲು ಯತ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಇಂಜಿನಿಯುರ್ ಹೇಳಿಕೆಯನ್ನು ಒಪ್ಪದ ಶಾಸಕ ಕೊತ್ತೂರು ಮಂಜುನಾಥ್ ಇಷ್ಟು ದೊಡ್ಡ ಪ್ರಮಾಣದಲ್ಲಿ ಮಣ್ಣು ಕೊಚ್ಚಿ ಹೋಗುವಾಗ ನೀವು ಏನು ಮಾಡುತ್ತಿದ್ದಿರಿ? ಕಾಮಗಾರಿ ಮಾಡುವಾಗಲೇ ಸರಿಯಾದ ಮುನ್ನೆಚ್ಚರಿಕೆ ವಹಿಸಬೇಕಿತ್ತಲ್ಲವೇ? ಗುಣಮಟ್ಟದ ಕೆಲಸ ನಡೆದಿದ್ದರೆ ಹೀಗಾಗುತ್ತಿರಲಿಲ್ಲ” ಎಂದು ತರಾಟೆಗೆ ತೆಗೆದುಕೊಂಡರು.

ಈ ಸೇತುವೆ ಹಾಗೂ ರಸ್ತೆ ಕಾಮಗಾರಿಯನ್ನು ಮಾಡಿರುವ ಗುತ್ತಿಗೆದಾರರು ಯಾರು? ತಕ್ಷಣವೇ ಅವರ ಮೇಲೆ ಕ್ರಮ ಕೈಗೊಳ್ಳಿ. ಇಂತಹ ಬೇಜವಾಬ್ದಾರಿ ಕೆಲಸ ಮಾಡಿರುವ ಗುತ್ತಿಗೆದಾರನನ್ನು ತಕ್ಷಣವೇ ಬ್ಲಾಕ್ ಲಿಸ್ಟ್(ಕಪ್ಪು ಪಟ್ಟಿ) ಗೆ ಸೇರಿಸಲು ಸರ್ಕಾರಕ್ಕೆ ಶಿಫಾರಸು ಮಾಡಿ” ಎಂದು ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಶಾಸಕರು ಸ್ಥಳದಲ್ಲೇ ಆದೇಶಿಸಿದರು.

ಶಾಸಕರು ಕೇವಲ ಎಚ್ಚರಿಕೆ ನೀಡದೇ ಸ್ಥಳದಲ್ಲಿದ್ದ ತಾಂತ್ರಿಕ ಲೋಪಗಳನ್ನು ಎತ್ತಿ ತೋರಿಸಿದರು. ನೀರು ಹರಿದು ಹೋಗುವ ಜಾಗದಲ್ಲಿ ಸರಿಯಾದ ಕಾಂಕ್ರೀಟ್ ಬೆಡ್ ಅಥವಾ ರಕ್ಷಣಾತ್ಮಕ ಗೋಡೆಗಳನ್ನು ಗಟ್ಟಿಯಾಗಿ ನಿರ್ಮಿಸದಿದ್ದರೆ ಮಣ್ಣು ಕೊಚ್ಚಿ ಹೋಗುವುದು ಸಾಮಾನ್ಯ ಜ್ಞಾನ. ಇಂಜಿನಿಯರ್ ಆಗಿ ನಿಮಗಿದು ತಿಳಿಯುವುದಿಲ್ಲವೇ?” ಎಂದು ಪ್ರಶ್ನಿಸಿದರು. ಅಲ್ಲದೆ, ಇನ್ನು ಮುಂದೆ ಇಂತಹ ಲೋಪಗಳು ಮರುಕಳಿಸಿದರೆ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆಯಾಗಿರುವುದನ್ನು ಗಮನಿಸಿದ ಶಾಸಕರು, ಕೆರೆಯ ನೀರು ಕಡಿಮೆಯಾಗುತ್ತಿದ್ದಂತೆ ಸಮರೋಪಾದಿಯಲ್ಲಿ ತಾತ್ಕಾಲಿಕ ರಸ್ತೆ ದುರಸ್ತಿ ಕಾರ್ಯ ಆರಂಭಿಸಬೇಕು ಮತ್ತು ಶಾಶ್ವತವಾಗಿ ಭದ್ರವಾದ ಕಾಂಕ್ರೀಟ್ ಗೋಡೆ ನಿರ್ಮಿಸಲು ಹೊಸ ಪ್ರಸ್ತಾವನೆ ಸಿದ್ಧಪಡಿಸಬೇಕು ಎಂದು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಪಾಯಕಾರಿ ಜಾಗಕ್ಕೆ ಸಾರ್ವಜನಿಕರು ಹೋಗದಂತೆ ಪೊಲೀಸ್ ಸಿಬ್ಬಂದಿ ಹಾಗೂ ಬ್ಯಾರಿಕೇಡ್ ನಿಯೋಜಿಸಲು ಸೂಚನೆ ನೀಡಿದ್ದಾರೆ.

ಇದನ್ನು ಓದಿದ್ದೀರಾ..? ಕೋಲಾರ | ಮಾವಿನಕಾಯಿಗೆ ಬೆಲೆ ನಿಗದಿಗೆ ಶ್ರೀನಿವಾಸಪುರ ಭೈರವೇಶ್ವರ ಮಾವು ಬೆಳಗಾರರಿಂದ ಡಿಸಿಗೆ ಮನವಿ

ಈ ವೇಳೆ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಕೋಮುನ್ ನಿರ್ದೇಶಕ ಚಂಜಿಮಲೆ ರಮೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಖಾಜಿಕಲ್ಲಹಳ್ಳಿ ಮುನಿರಾಜು, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಳ್ಳಿ ಮುರಳಿ, ಕಾಂಗ್ರೆಸ್ ಮುಖಂಡ ಲಕ್ಷ್ಮೀಸಾಗರ ಜಿ.ಸುನಿಲ್ ಕುಮಾರ್, ಮಾಲ್ಗುಡಿ ನಾರಾಯಣಸ್ವಾಮಿ, ಎ.ಶಂಕರ್, ಬಿ.ಶಂಕರ್, ಜಾಲಿ ಮಂಜು, ರಾಮಸಂದ್ರ ಶಿವಕುಮಾರ್, ಮನೋಹರ್, ಎಂವಿಜೆ ಮಂಜು, ಬಸವರಾಜು, ಗೋಪಣ್ಣ, ಮಹೇಶ್, ಶ್ರೀಕಾಂತ್, ಸೇರಿದಂತೆ ನರಸಾಪುರ ಭಾಗದ ಮುಖಂಡರುಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು, ಇಂಜಿನಿಯರ್‌ಗಳು, ಶಾಸಕರಿಗೆ ಸಾಥ್ ನೀಡಿದರು,

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಬೆಗ್ಲಿ ಹೊಸಹಳ್ಳಿ ಶಾಲೆಯಲ್ಲಿ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ

ತಾಲೂಕಿನ ಬೆಗ್ಲಿ ಹೊಸಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 2003-2004ನೇ ಸಾಲಿನ ವಿದ್ಯಾರ್ಥಿಗಳಿಂದ...

ಕೋಲಾರ | ಅವೈಜ್ಞಾನಿಕ ರಸ್ತೆ, ಚರಂಡಿ ಕಾಮಗಾರಿ: ವಿಜಯಗರ ಬಡಾವಣೆ ನಿವಾಸಿಗಳು ಆಕ್ರೋಶ

ನಗರ ಹೊರವಲಯದ ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಯನಗರ ಬಡಾವಣೆಯಲ್ಲಿ (ಹಾರೋಹಳ್ಳಿ...

ಶ್ರೀನಿವಾಸಪುರ | ದಕ್ಷಿಣ ಭಾರತ ಮಟ್ಟದ ಬಾಡಿಬಿಲ್ಡಿಂಗ್ ಸ್ಪರ್ಧೆಯಲ್ಲಿ ಶ್ರೀನಿವಾಸಪುರದ ಅಬ್ಬಾಸ್ ಬಾಬುಗೆ ತೃತೀಯ ಸ್ಥಾನ

ಶ್ರೀನಿವಾಸಪುರ: ಪಟ್ಟಣದ ಅಕ್ಬರ್ ರಸ್ತೆಯ ನಿವಾಸಿ ಅಬ್ಬಾಸ್ ಬಾಬು ಅವರು ಬೆಂಗಳೂರಿನಲ್ಲಿ...

ಕೋಲಾರ | ಕೃಷಿ ಮಾರುಕಟ್ಟೆ ಕುರಿತು ತುಮಕೂರು ಸಂಶೋಧನಾ ವಿದ್ಯಾರ್ಥಿಗಳೊಂದಿಗೆ ಸಂವಾದ

ಭಾರತದಲ್ಲಿ ಕೃಷಿ ಮತ್ತು ಕೃಷಿ ಮಾರುಕಟ್ಟೆಯ ಕುರಿತು ಕಾರ್ಯಾಗಾರದಲ್ಲಿ ತುಮಕೂರು ವಿಶ್ವವಿದ್ಯಾಲಯದ...