​ಕೋಲಾರ | ರಾಜಕೀಯ ಏನೇ ಇದ್ದರೂ ಸ್ನೇಹ, ವಿಶ್ವಾಸ ಮುಖ್ಯ- ಶಾಸಕ ಕೊತ್ತೂರು ಮಂಜುನಾಥ್

Date:

ನಗರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ 517ನೇ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು

- Advertisement -

​ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್, ಇಂದು ನಾವು ನೆಮ್ಮದಿಯ ಜೀವನ ನಡೆಸುತ್ತಿದ್ದೇವೆ ಎಂದರೆ ಅದಕ್ಕೆ ಕೆಂಪೇಗೌಡರ ಆಶೀರ್ವಾದವೇ ಕಾರಣ. ದೇಶದಲ್ಲಿ ಗಾಂಧೀಜಿ, ನೆಹರು, ಬಾಬಾಸಾಹೇಬ್ ಅಂಬೇಡ್ಕರ್ ಇಂತಹ ಹಲವಾರು ಮಹನೀಯರನ್ನು ನಾವು ನೆನೆಯುತ್ತೇವೆ. ರಾಜಕೀಯದಲ್ಲಿ ಸಾವಿರ ಭಿನ್ನಾಭಿಪ್ರಾಯಗಳಿದ್ದರೂ ಸ್ನೇಹ ಮತ್ತು ವಿಶ್ವಾಸ ಮುಖ್ಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

​ಕೆಂಪೇಗೌಡರು ಬೆಂಗಳೂರನ್ನು ಕನ್ನಡಿಯಂತೆ ಅಚ್ಚುಕಟ್ಟಾಗಿ ನಿರ್ಮಿಸಿದ್ದಾರೆ. ಮೈಸೂರು ಮಹಾರಾಜರಂತೆ ಅವರೂ ಅನೇಕ ಕೆರೆಗಳನ್ನು ಕಟ್ಟಿಸಿದ್ದಾರೆ. ಆದರೆ ಇಂದು ನಾವು ಕೆರೆಗಳನ್ನು ಮುಚ್ಚುತ್ತಿದ್ದೇವೆ. ಕೆರೆ ಎಂದರೆ ತಾಯಿಯ ಗರ್ಭ ಇದ್ದಂತೆ. ಮಹನೀಯರು ನಮಗಾಗಿ ಆಸ್ತಿ, ಬದುಕು ಕಟ್ಟಿಕೊಟ್ಟರೆ, ಇಂದು ಊರಿನಲ್ಲಿ ರಸ್ತೆ ಮಾಡಲು ಹೋದರೆ ನಮ್ಮ ಜಾಗ ಎಂದು ಗಲಾಟೆ ಮಾಡುತ್ತಾರೆ, ಸರ್ಕಾರಿ ಜಾಗದಲ್ಲೂ ಕೆಲಸ ಮಾಡಲು ಬಿಡುವುದಿಲ್ಲ. ನಾವೆಲ್ಲವನ್ನೂ ಮರೆತುಹೋಗಿದ್ದು, ಇರುವ ಸಂಪತ್ತನ್ನು ಕಾಪಾಡಿಕೊಂಡರೆ ಸಾಕು” ಎಂದು ವಿಷಾದ ವ್ಯಕ್ತಪಡಿಸಿದರು.

​ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಎಂ.ಎಲ್.ಸಿ ಅನಿಲ್ ಕುಮಾರ್ ನಾಡನ್ನು ಆಳುವ ಜವಾಬ್ದಾರಿ ವಹಿಸಿಕೊಂಡ ಕೇವಲ ಆರು ವರ್ಷಗಳಲ್ಲೇ ಕೆಂಪೇಗೌಡರು ಬೆಂಗಳೂರು ನಿರ್ಮಾಣಕ್ಕೆ ಅಡಿಪಾಯ ಹಾಕಿದರು. ಅವರು ಯಾವ ಶುಭ ಗಳಿಕೆಯಲ್ಲಿ ಅಡಿಪಾಯ ಹಾಕಿದರೋ ಏನೋ, ಇಂದು ಬೆಂಗಳೂರು ಇಡೀ ಪ್ರಪಂಚವೇ ತಿರುಗಿ ನೋಡುವಂತಹ ಬೃಹತ್ ನಗರವಾಗಿ ಬೆಳೆದಿದೆ. ರಾಜ್ಯದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವ ವಾಣಿಜ್ಯ ಹಾಗೂ ಹೈಟೆಕ್ ನಗರವಾಗಿ ಬೆಂಗಳೂರು ಹೊರಹೊಮ್ಮಲು ಕೆಂಪೇಗೌಡರ ದೂರದೃಷ್ಟಿಯೇ ಕಾರಣ ಎಂದು ಶ್ಲಾಘಿಸಿದರು.

2011ರಲ್ಲಿ ಕೋಲಾರದಲ್ಲಿ ಲಕ್ಷಾಂತರ ಜನಸ್ತೋಮದೊಂದಿಗೆ ಐತಿಹಾಸಿಕವಾಗಿ ಕೆಂಪೇಗೌಡ ಜಯಂತಿ ಆಚರಿಸಲಾಗಿತ್ತು. ಅಂದಿನ ಕಾರ್ಯಕ್ರಮದಲ್ಲಿ ಹೆಚ್.ಡಿ. ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್, ಆರ್. ಅಶೋಕ್ ಹಾಗೂ ಬಾಲಗಂಗಾಧರನಾಥ ಸ್ವಾಮೀಜಿ ಭಾಗವಹಿಸಿದ್ದರು. ಅಂದು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ ಸಹಕಾರದೊಂದಿಗೆ ಈ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಮಾಡಲು ಬೇಡಿಕೆ ಇಟ್ಟಿದ್ದೆವು, ಅದರಂತೆ ಇಂದು ರಾಜ್ಯದ ಮೂಲೆ ಮೂಲೆಗಳಲ್ಲೂ ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಲಾಗುತ್ತಿದೆ. ಕೆಂಪೇಗೌಡರ ಹೆಸರು ಶಾಶ್ವತವಾಗಿರಲೆಂದೇ ಬಸ್ ನಿಲ್ದಾಣ ಮತ್ತು ವಿಮಾನ ನಿಲ್ದಾಣಕ್ಕೆ ಅವರ ಹೆಸರಿಡಲಾಗಿದೆ. ಒಕ್ಕಲಿಗ ಸಮುದಾಯದ ಹೆಚ್.ಡಿ. ದೇವೇಗೌಡರು ದೇಶದ ಪ್ರಧಾನಿಯಾಗಿದ್ದರು. ಕೆಂಪೇಗೌಡರಂತೆ ಎಲ್ಲಾ ಸಮುದಾಯವನ್ನು ಸಮಾನವಾಗಿ ಕಂಡು, ಜಾತ್ಯತೀತ ನಾಯಕರಾಗಿ ಹೊರಹೊಮ್ಮಿದಾಗ ಮಾತ್ರ ನಿಜವಾದ ನಾಯಕ ಎನಿಸಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಮಾತನಾಡಿ ಹಿಂದೆ ಅಂಬೇಡ್ಕರ್, ಗಾಂಧೀಜಿ,ಮತ್ತು ಬಸವಣ್ಣನವರ ಜಯಂತಿಗೆ ಮಾತ್ರವೇ ಸೀಮಿತವಾಗಿತ್ತು ಕೋಲಾರದಲ್ಲಿ ಮೊಟ್ಟಮೊದಲ ಬಾರಿಗೆ ಕೆಂಪೇಗೌಡ ಜಯಂತಿಯನ್ನು ಪ್ರಾರಂಭ ಮಾಡಿದ್ದರ ಭಾಗವಾಗಿ ರಾಜ್ಯಾದ್ಯಂತ ಆಚರಣೆ ಮಾಡುವಂತೆ ಮಾಡಿದ್ದಾರೆ ಕೋಲಾರದಲ್ಲಿ ಹಿಂದೆ ಒಂದು ನಿವೇಶನ ಇತ್ತು ಅದರಲ್ಲಿ ಹಾಸ್ಟೆಲ್ ಮಾಡಿದ್ದರು ಇವತ್ತು ಅದರ ಜೊತೆಗೆ ಕೆಂಪೇಗೌಡ ಮಾಲ್ ಸಹ ಕಟ್ಟಲು ಮುಂದಾಗಿದ್ದು ಅದಕ್ಕೆ ಎಲ್ಲರ ಸಹಕಾರ ಮುಖ್ಯವಾಗಿದೆ ಅದರಿಂದ ಬರುವ ಅದಾಯವನ್ನು ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಬಳಸಲಾಗುತ್ತದೆ ಬೈರೇಗೌಡ ನಗರದಲ್ಲಿ ಇರುವ ಜಾಗದಲ್ಲಿ ಹೆಣ್ಣು ಮಕ್ಕಳ ಹಾಸ್ಟೆಲ್ ಮುಂದಾಗಿದ್ದೇವೆ ಎಲ್ಲಾ ಜಾತಿ ಸಮುದಾಯದವರು ಸೇರಿ ಈ ಜಯಂತಿ ಆಚರಣೆ ಮಾಡಲಾಗಿದೆ ಇದು ಅವರ ಎಲ್ಲಾ ಸಮುದಾಯಕ್ಕೆ ನೀಡಿದ ಸೇವೆಯೇ ಕಾರಣವಾಗಿದೆ ಎಂದರು

​ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ನಾಗಾನಂದ ಕೆಂಪರಾಜು ಅವರು ವಿಶೇಷ ಉಪನ್ಯಾಸ ನೀಡಿದರು ಒಕ್ಕಲಿಗ ಸಂಘದ ಜಿಲ್ಲಾಧ್ಯಕ್ಷ ಕೆ.ವಿ. ಶಂಕರಪ್ಪ ಮಾತನಾಡಿದರು.

ಇದನ್ನು ಓದಿದ್ದೀರಾ..?ಕೋಲಾರ | ಕೋಲಾರದ ಕೆಂಪೇಗೌಡರ ಜಯಂತಿ ಇಡೀ ರಾಜ್ಯಕ್ಕೆ ಮಾದರಿ: ಶ್ರೀ ಮಂಗಳನಂದನಾಥ ಸ್ವಾಮೀಜಿ

​ವೇದಿಕೆಯಲ್ಲಿ ಸಂಸದ ಮಲ್ಲೇಶ್ ಬಾಬು, ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್, ತಹಶೀಲ್ದಾರ್ ಶ್ರೀನಿವಾಸ್, ಉಪವಿಭಾಗಾಧಿಕಾರಿ ರೇಣುಕಾಪ್ರಸಾದ್ ಜಂಬಗಿ ಉಪಸ್ಥಿತರಿದ್ದರು. ಒಕ್ಕಲಿಗ ಸಮುದಾಯದ ಮುಖಂಡರಾದ ಬಿಸಪ್ಪಗೌಡ, ಕಲ್ಲಂಡೂರು ಲೋಕೇಶ್, ಡಾ. ರಮೇಶ್, ಜೆಡಿಎಸ್ ಮುಖಂಡ ಸಿ.ಎಂ.ಆರ್. ಶ್ರೀನಾಥ್, ವಕ್ಕಲೇರಿ ರಾಮು, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರುಳಿ, ಖಾಜಿಕಲ್ಲಹಳ್ಳಿ ಮುನಿರಾಜು, ಅಪ್ಸರ್, ಎಸ್‌.ಕೆ. ಚಂದ್ರಶೇಖರ್, ವಿ.ಮುನಿರಾಜು, ಮೊಹಮ್ಮದ್ ಹನೀಫ್, ವೈ. ಶಿವಕುಮಾರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ವಿಜಯಲಕ್ಷ್ಮಿ ಸೇರಿದಂತೆ ನೂರಾರು ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅವೈಜ್ಞಾನಿಕ ರಸ್ತೆ, ಚರಂಡಿ ಕಾಮಗಾರಿ: ವಿಜಯಗರ ಬಡಾವಣೆ ನಿವಾಸಿಗಳು ಆಕ್ರೋಶ

ನಗರ ಹೊರವಲಯದ ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಯನಗರ ಬಡಾವಣೆಯಲ್ಲಿ (ಹಾರೋಹಳ್ಳಿ...

ಶ್ರೀನಿವಾಸಪುರ | ದಕ್ಷಿಣ ಭಾರತ ಮಟ್ಟದ ಬಾಡಿಬಿಲ್ಡಿಂಗ್ ಸ್ಪರ್ಧೆಯಲ್ಲಿ ಶ್ರೀನಿವಾಸಪುರದ ಅಬ್ಬಾಸ್ ಬಾಬುಗೆ ತೃತೀಯ ಸ್ಥಾನ

ಶ್ರೀನಿವಾಸಪುರ: ಪಟ್ಟಣದ ಅಕ್ಬರ್ ರಸ್ತೆಯ ನಿವಾಸಿ ಅಬ್ಬಾಸ್ ಬಾಬು ಅವರು ಬೆಂಗಳೂರಿನಲ್ಲಿ...

ಕೋಲಾರ | ಕೃಷಿ ಮಾರುಕಟ್ಟೆ ಕುರಿತು ತುಮಕೂರು ಸಂಶೋಧನಾ ವಿದ್ಯಾರ್ಥಿಗಳೊಂದಿಗೆ ಸಂವಾದ

ಭಾರತದಲ್ಲಿ ಕೃಷಿ ಮತ್ತು ಕೃಷಿ ಮಾರುಕಟ್ಟೆಯ ಕುರಿತು ಕಾರ್ಯಾಗಾರದಲ್ಲಿ ತುಮಕೂರು ವಿಶ್ವವಿದ್ಯಾಲಯದ...

ಕೋಲಾರ | ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿನಿಗೆ ಅಭಿನಂದನೆ ಸಲ್ಲಿಸಿದ ಸಿಎಂಆರ್ ಶ್ರೀನಾಥ್

ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕೋಲಾರ ನಗರದ ಕೀಲುಕೋಟೆ ಬಡಾವಣೆಯ ಚಿನ್ಮಯ...