ಕೋಲಾರ | ಅವೈಜ್ಞಾನಿಕ ರಸ್ತೆ, ಚರಂಡಿ ಕಾಮಗಾರಿ: ವಿಜಯಗರ ಬಡಾವಣೆ ನಿವಾಸಿಗಳು ಆಕ್ರೋಶ

Date:

ನಗರ ಹೊರವಲಯದ ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಯನಗರ ಬಡಾವಣೆಯಲ್ಲಿ (ಹಾರೋಹಳ್ಳಿ ಗಾರ್ಡನ್‌) ಕೊಳಚೆ ನೀರು ಸರಾಗವಾಗಿ ಹರಿಯಲು ಜಾಗವಿಲ್ಲದೆ ಚರಂಡಿ ಕಟ್ಟಿಕೊಂಡಿದ್ದು, ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಹೊಸದಾಗಿ ಸಿ.ಸಿ.ರಸ್ತೆ ನಿರ್ಮಾಣ ಮಾಡುತ್ತಿದ್ದು, ಪಕ್ಕದಲ್ಲಿರುವ ಚರಂಡಿಯಲ್ಲಿ ಕೊಳಚೆ ನೀರು ತುಂಬಿಕೊಂಡಿದೆ. ಚರಂಡಿಯು ಅಲ್ಲಲ್ಲಿ ಉಬ್ಬುತಗ್ಗು ಇರುವ ಕಾರಣ ನೀರು ಮುಂದೆ ಹರಿದು ಹೋಗುತ್ತಿಲ್ಲ. ಕೊಳಚೆ ನೀರಿನ ಜೊತೆ ಅಲ್ಲಲ್ಲಿ ತ್ಯಾಜ್ಯವೂ ತುಂಬಿಕೊಂಡಿದೆ. ‌ಚರಂಡಿಯನ್ನು ಎತ್ತರಿಸಿ ನೀರಲು ಹರಿಸಲು ಗುತ್ತಿಗೆದಾರರು ಮುಂದಾಗಿದ್ದಾರೆ. ಇದಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಹಲವಾರು ತಿಂಗಳಿಂದ ನರಕಯಾತನೆ ಅನುಭವಿಸುತ್ತಿದ್ದು, ಈವರೆಗೆ ಸಮಸ್ಯೆಗೆ ಸ್ಪಂದಿಸಿಲ್ಲ. ಸಂಬಂಧಪಟ್ಟವರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಅವೈಜ್ಞಾನಿಕವಾಗಿ ರಸ್ತೆ ಹಾಗೂ ಚರಂಡಿ ಕಾಮಗಾರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಕೊಳಚೆ ನೀರು ಸರಾಗವಾಗಿ ಹರಿಯಲು ಅವಕಾಶ ಮಾಡಿಕೊಡದಿದ್ದರೆ ಸಿ.ಸಿ ರಸ್ತೆ ಕಾಮಗಾರಿ ನಡೆಸಲು ಅವಕಾಶ ನೀಡುವುದಿಲ್ಲ. ನಾವು ರಸ್ತೆ ಅಭಿವೃದ್ಧಿ ವಿರೋಧಿಸುತ್ತಿಲ್ಲ. ಆದರೆ, ಚರಂಡಿ ಸಮಸ್ಯೆ ಮೊದಲು ಸರಿ ಹೋಗಬೇಕು ಎಂದು ಒತ್ತಾಯಿಸಿದರು.

ವಿಪರೀತ ವಾಸನೆ ಬರುತ್ತಿದೆ. ಮನೆಯಲ್ಲಿ ಊಟ, ತಿಂಡಿ ಮಾಡಲು ಸಾಧ್ಯವಾಗುತ್ತಿಲ್ಲ. ಕೊಳಚೆ ನೀರು ಬಹಳ ದಿನಗಳಿಂದ ಒಂದೇ ಕಡೆ ನಿಂತಿರುವುದರಿಂದ ಸೊಳ್ಳೆ ಕಾಟ ಹೆಚ್ಚಿದ್ದು, ರೋಗಗಳು ಬರುವ ಆತಂಕ ಉಂಟಾಗಿದೆ ಎಂದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪುಷ್ಪಾ ಬಾಬು ಮಾತನಾಡಿ, ಶಾಸಕರು ಬಂದು ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ಮಾಡಿ ಹೋಗಿದ್ದರು. ನಮ್ಮ ಬಡಾವಣೆಯ ಚರಂಡಿ ವ್ಯವಸ್ಥೆ ಸರಿಹೋಗುತ್ತದೆ ಎಂದು ಖುಷಿಯಾಗಿತ್ತು. ಆದರೆ, ಕೆಲಸ ಸರಿಯಾಗಿ ನಡೆಯುತ್ತಿಲ್ಲ. ರಸ್ತೆ ಕಾಮಗಾರಿ ಆರಂಭವಾಗಿ ವರ್ಷವೇ ಕಳೆದಿದೆ. ಈವರಗೆ ಕಾಮಗಾರಿ ಮುಗಿದಿಲ್ಲ. ಮುಖ್ಯಮಂತ್ರಿ ಕಚೇರಿಗೂ ಈ ವಿಚಾರ ತಲುಪಿ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದ್ದರು. ಚರಂಡಿಗೆ ಮಣ್ಣು ತುಂಬಿ ಎತ್ತರಿಸುತ್ತಿದ್ದಾರೆ. ಹೀಗಾಗಿ, ಸುಮಾರು 80 ಮನೆಗಳ ತ್ಯಾಜ್ಯ ನೀರು ಹರಿಯಲು ಜಾಗವಿಲ್ಲದಂತಾಗಿದೆ. ಎಲ್ಲಾ ಮನೆಯವರಿಗೆ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿದರು.

ಕೊಳಚೆ ನೀರು ಸರಾಗವಾಗಿ ಹರಿಯುವಂತೆ ಚರಂಡಿ ಸರಿಪಡಿಸಿ ಬಳಿಕ ರಸ್ತೆ ಕಾಮಗಾರಿ ನಡೆಸಿ ಎಂದು ಮನವಿ ಮಾಡಿದರೂ ಕೇಳುತ್ತಿಲ್ಲ. ಅಧಿಕಾರಿಗಳ ಗಮನಕ್ಕೂ ತಂದರೂ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ ಎಂದು ದೂರಿದರು.

ಮನೆ ಮುಂದಿನ ಟ್ಯಾಂಕ್‌ಗಳಿಗೂ (ಸಂಪ್‌) ನೀರು ನುಗ್ಗಿ ವಾಸನೆ ಬರುತ್ತಿತ್ತು, ಹಾವುಗಳು ಬಂದಿದ್ದವು. ಹೀಗಾಗಿ, ಚರಂಡಿ ಎತ್ತರ ತಗ್ಗಿಸಿ ನೀರು ಹೋಗಲು ಅವಕಾಶ ಮಾಡಿಕೊಡಬೇಕು. ನಮಗೆ ರಸ್ತೆಗಿಂತ ಚರಂಡಿಯೇ ಮುಖ್ಯ. ಆ ಬಳಿಕ ರಸ್ತೆ ನಿರ್ಮಿಸಿಕೊಳ್ಳಲಿ ಎಂದರು.

ಇದನ್ನು ಓದಿದ್ದೀರಾ..? ಚಿಕ್ಕಬಳ್ಳಾಪುರ | ಕೋರ್ಟಿನ ಮೂಲಕ ನ್ಯಾಯಪಡೆದ ಶಿಕ್ಷಕರಿಗೆ ನೇಮಕಾತಿಪತ್ರ ವಿತರಿಸಿದ ಡಿಡಿಪಿಐ

ಬಡಾವಣೆಯ ಲಕ್ಷ್ಮಮ್ಮ ಸೇರಿದಂತೆ ಹಲವು ಮಹಿಳೆಯರು ಸ್ಥಳದಲ್ಲಿದ್ದು, ಚರಂಡಿ ವ್ಯವಸ್ಥೆ ಸರಿ ಮಾಡಿ ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಜಿಎಫ್ | ಗಾಳಿ ಮಳೆಗೆ ಮನೆಯ ಮೇಲ್ಚಾವಣಿ ನಾಶ ಕುಟುಂಬಸ್ಥರು ಕಣ್ಣೀರು

ಬೇತಮಂಗಲ ಸಮೀಪದ ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೆಂಕಟಾಪುರ ಗ್ರಾಮದ ರತ್ನಮ್ಮ...

ಕೋಲಾರ | ಬೆಗ್ಲಿ ಹೊಸಹಳ್ಳಿ ಶಾಲೆಯಲ್ಲಿ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ

ತಾಲೂಕಿನ ಬೆಗ್ಲಿ ಹೊಸಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 2003-2004ನೇ ಸಾಲಿನ ವಿದ್ಯಾರ್ಥಿಗಳಿಂದ...

ಶ್ರೀನಿವಾಸಪುರ | ದಕ್ಷಿಣ ಭಾರತ ಮಟ್ಟದ ಬಾಡಿಬಿಲ್ಡಿಂಗ್ ಸ್ಪರ್ಧೆಯಲ್ಲಿ ಶ್ರೀನಿವಾಸಪುರದ ಅಬ್ಬಾಸ್ ಬಾಬುಗೆ ತೃತೀಯ ಸ್ಥಾನ

ಶ್ರೀನಿವಾಸಪುರ: ಪಟ್ಟಣದ ಅಕ್ಬರ್ ರಸ್ತೆಯ ನಿವಾಸಿ ಅಬ್ಬಾಸ್ ಬಾಬು ಅವರು ಬೆಂಗಳೂರಿನಲ್ಲಿ...

ಕೋಲಾರ | ಕೃಷಿ ಮಾರುಕಟ್ಟೆ ಕುರಿತು ತುಮಕೂರು ಸಂಶೋಧನಾ ವಿದ್ಯಾರ್ಥಿಗಳೊಂದಿಗೆ ಸಂವಾದ

ಭಾರತದಲ್ಲಿ ಕೃಷಿ ಮತ್ತು ಕೃಷಿ ಮಾರುಕಟ್ಟೆಯ ಕುರಿತು ಕಾರ್ಯಾಗಾರದಲ್ಲಿ ತುಮಕೂರು ವಿಶ್ವವಿದ್ಯಾಲಯದ...