ಶ್ರೀನಿವಾಸಪುರ | ದಕ್ಷಿಣ ಭಾರತ ಮಟ್ಟದ ಬಾಡಿಬಿಲ್ಡಿಂಗ್ ಸ್ಪರ್ಧೆಯಲ್ಲಿ ಶ್ರೀನಿವಾಸಪುರದ ಅಬ್ಬಾಸ್ ಬಾಬುಗೆ ತೃತೀಯ ಸ್ಥಾನ

Date:

ಶ್ರೀನಿವಾಸಪುರ: ಪಟ್ಟಣದ ಅಕ್ಬರ್ ರಸ್ತೆಯ ನಿವಾಸಿ ಅಬ್ಬಾಸ್ ಬಾಬು ಅವರು ಬೆಂಗಳೂರಿನಲ್ಲಿ ನಡೆದ ಪ್ರತಿಷ್ಠಿತ ಗರಾಡಿ ಕ್ಲಾಸಿಕ್ 2026 – ಮಿಸ್ಟರ್ & ಮಿಸ್ ಸೌತ್ ಇಂಡಿಯಾ ದೇಹಸೌಷ್ಟವ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಶ್ರೀನಿವಾಸಪುರಕ್ಕೆ ಕೀರ್ತಿ ತಂದಿದ್ದಾರೆ. ದಕ್ಷಿಣ ಏಷ್ಯಾ ಬಾಡಿಬಿಲ್ಡಿಂಗ್ ಅಸೋಸಿಯೇಷನ್ ವತಿಯಿಂದ ಮೇ 10ರಂದು ಬೆಂಗಳೂರಿನ ವಿಜಯನಗರದಲ್ಲಿರುವ ಬಿಜಿಎಸ್ ಸ್ಟೇಡಿಯಂನಲ್ಲಿ ಆಯೋಜಿಸಲಾದ ರಾಜ್ಯ ಹಾಗೂ ದಕ್ಷಿಣ ಭಾರತ ಮಟ್ಟದ ದೇಹಸೌಷ್ಟವ ಮತ್ತು ಮೆನ್ಸ್ ಫಿಸಿಕ್ ಚಾಂಪಿಯನ್‌ಶಿಪ್‌ನಲ್ಲಿ ಅಬ್ಬಾಸ್ ಬಾಬು ಅವರು ಮಾಸ್ಟರ್ಸ್ 50 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿ ಉತ್ತಮ ಪ್ರದರ್ಶನ ನೀಡಿದರು.

- Advertisement -

ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಸ್ಪರ್ಧಾಳುಗಳ ನಡುವೆ ಕಠಿಣ ಸ್ಪರ್ಧೆಯನ್ನು ಎದುರಿಸಿ ಮೂರನೇ ಸ್ಥಾನ ಗಳಿಸಿರುವುದು ಸ್ಥಳೀಯರಲ್ಲಿ ಸಂತಸ ಮೂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ರಾಜಾಜಿ ರಸ್ತೆಯ ಇರ್ಫಾನ್ ಫಿಟ್ನೆಸ್ ಜಿಮ್‌ನ ಮಾಲೀಕರು ಹಾಗೂ ತರಬೇತಿದಾರರೂ ಆಗಿರುವ ಅಬ್ಬಾಸ್ ಬಾಬು ಅವರು ಹಲವು ವರ್ಷಗಳಿಂದ ದೇಹದಾರ್ಢ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರತಿದಿನ ಕಟ್ಟುನಿಟ್ಟಿನ ವ್ಯಾಯಾಮ, ಆಹಾರ ಪದ್ಧತಿ ಮತ್ತು ಶಿಸ್ತಿನ ಜೀವನಶೈಲಿಯನ್ನು ಅನುಸರಿಸುವ ಮೂಲಕ ದೇಹಸೌಷ್ಟವ ಕ್ಷೇತ್ರದಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿಕೊಂಡಿದ್ದಾರೆ.

ಸ್ಥಳೀಯ ಮಟ್ಟದ ಸ್ಪರ್ಧೆಗಳಿಂದ ಆರಂಭಿಸಿ ಇದೀಗ ದಕ್ಷಿಣ ಭಾರತ ಮಟ್ಟದ ಸ್ಪರ್ಧೆಯಲ್ಲಿ ಸಾಧನೆ ಮಾಡುವ ಮೂಲಕ ಶ್ರೀನಿವಾಸಪುರದ ಹೆಸರನ್ನು ಬೆಳಗಿಸಿದ್ದಾರೆ. ಇರ್ಫಾನ್ ಫಿಟ್ನೆಸ್ ಜಿಮ್ ಮೂಲಕ ಅನೇಕ ಯುವಕರಿಗೆ ದೇಹದಾರ್ಢ್ಯ ತರಬೇತಿ ನೀಡುತ್ತಿರುವ ಅಬ್ಬಾಸ್ ಬಾಬು, ಆರೋಗ್ಯಕರ ಜೀವನಶೈಲಿ ಮತ್ತು ನಿಯಮಿತ ವ್ಯಾಯಾಮದ ಮಹತ್ವವನ್ನು ಯುವಕರಿಗೆ ತಿಳಿಸುತ್ತಿದ್ದಾರೆ. ಅವರ ಸಾಧನೆ ಸ್ಥಳೀಯ ಯುವಕರಿಗೆ ಪ್ರೇರಣೆಯಾಗಿದ್ದು, ಕ್ರೀಡಾ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಲು ಉತ್ತೇಜನ ನೀಡಿದೆ.

ನಿರಂತರ ಪರಿಶ್ರಮ, ಆತ್ಮವಿಶ್ವಾಸ ಮತ್ತು ಶಿಸ್ತಿನಿಂದ ಯಾವುದೇ ಗುರಿ ಸಾಧಿಸಬಹುದು. ಯುವಕರು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಿ ಕ್ರೀಡೆ ಹಾಗೂ ವ್ಯಾಯಾಮದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅಬ್ಬಾಸ್ ಬಾಬು ಹೇಳಿದರು.

ಸ್ಪರ್ಧೆಯಲ್ಲಿ ವಿಜೇತರಾದ ಬಳಿಕ ಅವರಿಗೆ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕ್ರೀಡಾಭಿಮಾನಿಗಳು, ಆಯೋಜಕರು ಮತ್ತು ಜಿಮ್ ಸದಸ್ಯರು ಅಭಿನಂದಿಸಿದರು.

ಇದನ್ನು ಓದಿದ್ದೀರಾ..?ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಚಿವ ಡಿ.ಸುಧಾಕರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಅಬ್ಬಾಸ್ ಬಾಬು ಅವರ ಸಾಧನೆಗೆ ಕುಟುಂಬ ಸದಸ್ಯರು, ಸ್ನೇಹಿತರು, ಪಟ್ಟಣದ ಗಣ್ಯರು ಹಾಗೂ ಕ್ರೀಡಾಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಇನ್ನಷ್ಟು ಸಾಧನೆ ಮಾಡಲಿ ಎಂದು ಶುಭ ಹಾರೈಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅವೈಜ್ಞಾನಿಕ ರಸ್ತೆ, ಚರಂಡಿ ಕಾಮಗಾರಿ: ವಿಜಯಗರ ಬಡಾವಣೆ ನಿವಾಸಿಗಳು ಆಕ್ರೋಶ

ನಗರ ಹೊರವಲಯದ ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಯನಗರ ಬಡಾವಣೆಯಲ್ಲಿ (ಹಾರೋಹಳ್ಳಿ...

ಕೋಲಾರ | ಕೃಷಿ ಮಾರುಕಟ್ಟೆ ಕುರಿತು ತುಮಕೂರು ಸಂಶೋಧನಾ ವಿದ್ಯಾರ್ಥಿಗಳೊಂದಿಗೆ ಸಂವಾದ

ಭಾರತದಲ್ಲಿ ಕೃಷಿ ಮತ್ತು ಕೃಷಿ ಮಾರುಕಟ್ಟೆಯ ಕುರಿತು ಕಾರ್ಯಾಗಾರದಲ್ಲಿ ತುಮಕೂರು ವಿಶ್ವವಿದ್ಯಾಲಯದ...

ಕೋಲಾರ | ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿನಿಗೆ ಅಭಿನಂದನೆ ಸಲ್ಲಿಸಿದ ಸಿಎಂಆರ್ ಶ್ರೀನಾಥ್

ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕೋಲಾರ ನಗರದ ಕೀಲುಕೋಟೆ ಬಡಾವಣೆಯ ಚಿನ್ಮಯ...

ಡಿಜಿಟಲ್ ಜನಗಣತಿ: ಕೋಲಾರದಲ್ಲಿ ಗಣತಿದಾರರ ಎರಡನೇ ಹಂತದ ತರಬೇತಿಗೆ ಚಾಲನೆ

ಕೋಲಾರ : ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ 2027ರ ಡಿಜಿಟಲ್ ಜನಗಣತಿ ಕಾರ್ಯಕ್ರಮವನ್ನು...